ಇಂದು ಕರೇಗುಡ್ಡದಲ್ಲಿ ಸಿಎಂ ಗ್ರಾಮ ವಾಸ್ತವ್ಯ
Team Udayavani, Jun 26, 2019, 3:03 AM IST
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕರೇಗುಡ್ಡದಲ್ಲಿ ಬುಧವಾರ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಚಂಡರಕಿ ಗ್ರಾಮದಲ್ಲಿ ವಾಸ್ತವ್ಯ ಮಾಡಿದ ನಂತರ ಹೆರೂರು ಗ್ರಾಮದಲ್ಲಿ ಗ್ರಾಮವಾಸ್ತವ್ಯ ಮಾಡಬೇಕಿತ್ತಾದರೂ ಮಳೆ ಹಿನ್ನೆಲೆಯಲ್ಲಿ ರದ್ದಾಗಿತ್ತು. ಇದೀಗ ಎರಡನೇ ಗ್ರಾಮವಾಸ್ತವ್ಯ ಕರೇಗುಡ್ಡದಲ್ಲಿ ನಡೆಯಲಿದೆ.
ಗ್ರಾಮವಾಸ್ತವ್ಯ ಹಿನ್ನೆಲೆಯಲ್ಲಿ ಜನರ ಅಹವಾಲು ಸ್ವೀಕರಿಸುವ ಜನತಾದರ್ಶನದ ಬೃಹತ್ ವೇದಿಕೆ ಸಿದ್ಧಪಡಿಸಲಾಗಿದ್ದು, ಮುಖ್ಯಮಂತ್ರಿಯವರು ಉಳಿದುಕೊಳ್ಳಲಿರುವ ಶಾಲೆಯಲ್ಲಿ ಮೂಲಸೌಕರ್ಯ ಕಲ್ಪಿಸಲಾಗಿದೆ. ಪ್ರತಿಪಕ್ಷಗಳು ಗ್ರಾಮವಾಸ್ತವ್ಯಕ್ಕೆ ಹೆಚ್ಚು ವೆಚ್ಚ ಮಾಡಲಾಗುತ್ತಿದೆ ಎಂದು ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಖರ್ಚು-ವೆಚ್ಚದ ಬಗ್ಗೆ ನಿಗಾವಹಿಸಿ ಆದಷ್ಟು ಕಡಿಮೆ ವೆಚ್ಚ ಆಗುವಂತೆ ನೋಡಿಕೊಳ್ಳಿ.
ನನಗಾಗಿ ಯಾವುದೇ ರೀತಿಯ ಐಷಾರಾಮಿ ವ್ಯವಸ್ಥೆ ಬೇಡವೆಂದು ಮುಖ್ಯಮಂತ್ರಿ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ. ಪಶು ಸಂಗೋಪನಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್ ನಾಡಗೌಡ ಅವರು ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರೈಲಿನಲ್ಲಿ ಪ್ರಯಾಣ: ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕರೆಗುಡ್ಡ ಗ್ರಾಮ ವಾಸ್ತವ್ಯಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಂಗಳವಾರ ಸಂಜೆ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದಿಂದ ಪ್ರಯಾಣ ಬೆಳೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.