ತಾಲೂಕಾದರೂ ಕಡಬ ಜನತೆಗೆ ತಪ್ಪಿಲ್ಲ ಅಲೆದಾಟ


Team Udayavani, Jun 26, 2019, 5:00 AM IST

19

ತಾಲೂಕು ಕೇಂದ್ರವಾಗಿರುವ ಕಡಬ ಪೇಟೆಯ ನೋಟ.

ಕಡಬ: ಪದೇ ಪದೇ ವಿಘ್ನಗಳು ಎದುರಾದರೂ 4 ತಿಂಗಳ ಹಿಂದೆ ಕಡಬ ನೂತನ ತಾಲೂಕು ಉದ್ಘಾ ಟನೆ ಯಾಗಿದೆ. ನೂತನ ತಾಲೂಕಿನ ಜತೆ ಜತೆಗೆಯೇ ಕಡಬದಲ್ಲಿ ವಿವಿಧ ಇಲಾಖೆ ಗಳ ತಾಲೂಕುಮಟ್ಟದ ಕಚೇರಿಗಳು ತೆರೆದುಕೊಳ್ಳಲಿವೆ ಎಂದು ಹೇಳಲಾಗಿ ದ್ದರೂ ಕಂದಾಯ ಇಲಾಖೆಯನ್ನು ಹೊರ ತುಪಡಿಸಿ ಉಳಿದ ಯಾವುದೇ ಇಲಾಖೆಗಳ ತಾಲೂಕು ಮಟ್ಟದ ಕಚೇರಿಗಳು ಕಡಬದಲ್ಲಿ ಇದುವರೆಗೆ ತೆರೆದುಕೊಂಡಿಲ್ಲ.

ಕಂದಾಯ ಇಲಾಖೆಯ ಬಹುತೇಕ ಕೆಲಸಗಳ ಕಡಬದಲ್ಲಿಯೇ ಆಗುತ್ತಿ ದ್ದರೂ ಉಪ ನೋಂದಣಿ ಕಚೇರಿ, ಪತ್ರಾಂಕಿತ ಉಪ ಖಜಾನೆ (ಟ್ರೆಜರಿ), ಆಹಾರ ಇಲಾಖೆ ಮುಂತಾದ ಕಂದಾಯ ಇಲಾಖೆಗೆ ಸಂಬಂಧಿಸಿದ ತಾಲೂಕು ಮಟ್ಟದ ಕಚೇರಿಗಳು ಆರಂಭವಾಗದಿರುವು ದರಿಂದಾಗಿ ಜನರು ತಮ್ಮ ಅಗತ್ಯಗಳಿಗೆ ಈ ಹಿಂದಿನಂತೆಯೇ ಪುತ್ತೂರಿಗೆ ಹೋಗ ಬೇಕಿದೆ. ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಕೆಲಸಗಳಿಗೂ ಪುತ್ತೂರು ಕ್ಷೇತ್ರ ಶಿಕ್ಷಣಾಧಿ ಕಾರಿಗಳ ಕಚೇರಿಗೆ ಅಲೆಯುವುದು ತಪ್ಪಿಲ್ಲ. ಕೆಲ ಸಂದರ್ಭಗಳಲ್ಲಿ ತಾಂತ್ರಿಕ ಕಾರಣಗಳಿಂದಾಗಿ ಕಡಬ ತಾಲೂಕಿನ ವ್ಯಾಪ್ತಿಯ ಶಾಲೆಗಳ ದಾಖಲೆ ಪತ್ರಗಳಿಗೆ ಕಡಬ ತಾಲೂಕಿನ ಬದಲು ಪುತ್ತೂರು ತಾಲೂಕು ಎಂದು ಹಳೆಯ ಮೊಹರು (ಸೀಲ್) ಹಾಕಿಸಿಕೊಂಡು ಬನ್ನಿ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಿಂದಕ್ಕೆ ಕಳುಹಿಸಿದ ಘಟನೆಗಳೂ ನಡೆದಿವೆ.

ಡಿಸಿ ಆದೇಶಕ್ಕೂ ಬೆಲೆ ಇಲ್ಲ
ತಾಲೂಕು ಉದ್ಘಾಟನೆಗೆ ಮೊದಲೇ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಕಚೇರಿಗಳನ್ನು ತೆರೆಯಲು ಸಿದ್ಧತೆ ನಡೆಸಬೇಕು ಎಂದು ಕಳೆದ ವರ್ಷ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ಜರಗಿದ್ದ ತಾಲೂಕು ಉದ್ಘಾಟನೆಯ ಸಮಾಲೋಚನ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದರು.

ತಾಲೂಕು ಉದ್ಘಾಟನೆಯ ಸಂದರ್ಭದ ಎಲ್ಲ ಇಲಾಖೆಗಳ ತಾಲೂಕು ಮಟ್ಟದ ಕಚೇರಿಗಳು ಆರಂಭಗೊಳ್ಳಬೇಕು ಎಂದು ಎಲ್ಲ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಸೂಚಿಸಲಾಗಿತ್ತು. ಸರಕಾರಿ ಕಟ್ಟಡಗಳು ಲಭ್ಯವಿಲ್ಲದೇ ಹೋದರೆ ತಾತ್ಕಾಲಿಕ ನೆಲೆಯಲ್ಲಿ ಬಾಡಿಗೆ ಕಟ್ಟಡದಲ್ಲಿ ಕಚೇರಿ ಸ್ಥಾಪಿಸಿ ಮುಂದಿನ ದಿನಗಳಲ್ಲಿ ಕಚೇರಿ ಕಟ್ಟಡ ನಿರ್ಮಿಸಲು ಸೂಕ್ತ ಭೂಮಿ ಗುರುತಿಸಬೇಕು. ಆಯಾ ಕಚೇರಿಗೆ ಅಧಿಕಾರಿ ಮತ್ತು ಸಿಬಂದಿಗಳನ್ನು ನಿಯೋಜಿಸಬೇಕು. ಪೂರ್ಣಪ್ರಮಾಣದ ಅಧಿಕಾರಿ ಇಲ್ಲದಿದ್ದರೆ ಪ್ರಭಾರ ವ್ಯವಸ್ಥೆ ಮಾಡಬೇಕು ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದರು. ಆದರೆ ಕಂದಾಯ ಇಲಾಖೆಯನ್ನು ಹೊರತುಪಡಿಸಿದರೆ ಉಳಿದ ಯಾವುದೇ ಕಚೇರಿಗಳ ತಾಲೂಕು ಮಟ್ಟದ ಕಚೇರಿಗಳನ್ನು ತೆರೆಯಲು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಆಸಕ್ತಿ ತೋರಿಸುತ್ತಿಲ್ಲ. ಒತ್ತಡ ಹೇರಬೇಕಾದ ಜನಪ್ರತಿನಿಧಿಗಳು ಕೂಡ ತೆಪ್ಪಗೆ ಕುಳಿತಿದ್ದಾರೆ ಎನ್ನುವುದು ಸಾರ್ವಜನಿಕರ ಆರೋಪ.

ತೆರೆಯಬೇಕಿರುವ ಕಚೇರಿಗಳು
ಆಹಾರ ಇಲಾಖೆ, ಉಪ ನೋಂದಣಿ ಕಚೇರಿ, ಪತ್ರಾಂಕಿತ ಉಪ ಖಜಾನೆ ಇಲಾಖೆ, ಕಾನೂನು ಮಾಪನಶಾಸ್ತ್ರ ಇಲಾಖೆ, ತಾಲೂಕು ಪಂಚಾಯತ್‌, ಕೃಷಿ ಇಲಾಖೆ, ತೋಟಗಾರಿಕ ಇಲಾಖೆ, ಪಶು ಸಂಗೋಪನ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಶಿಶು ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಲೋಕೋಪಯೋಗಿ ಇಲಾಖೆ, ಪಂಚಾಯತ್‌ರಾಜ್‌ ಇಂಜಿನಿಯರಿಂಗ್‌ ಇಲಾಖೆ, ಅಬಕಾರಿ ಇಲಾಖೆ, ವಾಣಿಜ್ಯ ತೆರಿಗೆ ಇಲಾಖೆ, ಗ್ರಂಥಾಲಯ ಹಾಗೂ ಅಗ್ನಿಶಾಮಕ ದಳ ತಾಲೂಕು ಮಟ್ಟದ ಕಚೇರಿಗಳು ಕಡಬದಲ್ಲಿ ತೆರೆಯಬೇಕಾಗಿದ್ದು, ಸಂಬಂಧಪಟ್ಟ ಇಲಾಖೆಗಳ ಉನ್ನತಾಧಿಕಾರಿಗಳು ಈ ಕುರಿತು ಗಮನಹರಿಸುವ ಅಗತ್ಯವಿದೆ.

ಸರಕಾರ ಆದೇಶ ನೀಡಿದೆ
ನೂತನ ಕಡಬ ತಾಲೂಕಿನಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಎಲ್ಲ ಕೆಲಸಗಳು ಕಡಬದಲ್ಲಿಯೇ ಆಗುತ್ತಿದೆ. ಉಪ ನೋಂದಣಿ ಕಚೇರಿ, ಪತ್ರಾಂಕಿತ ಉಪ ಖಜಾನೆ ಇತ್ಯಾದಿ ತೆರೆಯಲು ಸ್ವಲ್ಪ ಕಾಲಾವಕಾಶದ ಅಗತ್ಯವಿದೆ. ಇತರ ಸರಕಾರಿ ಇಲಾಖೆಗಳ ತಾಲೂಕು ಮಟ್ಟದ ಕಚೇರಿಗಳನ್ನು ತೆರೆಯಲು ಸರಕಾರದ ಆದೇಶವಿದೆ. ತಾಲೂಕು ಮಟ್ಟದ ಕಚೇರಿ ತೆರೆಯದ ಇಲಾಖೆಗಳಿಗೆ ಜ್ಞಾಪನ ಪತ್ರ ಕಳುಹಿಸಲಾಗುವುದು.
– ಕೃಷ್ಣಮೂರ್ತಿ ಎಚ್.ಕೆ. ಸಹಾಯಕ ಆಯುಕ್ತರು, ಪುತ್ತೂರು

•ನಾಗರಾಜ್‌ ಎನ್‌.ಕೆ.

ಟಾಪ್ ನ್ಯೂಸ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-vitla

ಸುಲೈಮಾನ್ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಭೇಟಿ; ಎಸ್ಪಿ, ಡಿವೈಎಸ್ಪಿ, ಮನೆಯವರ ಜೊತೆ ಸಮಾಲೋಚನೆ

1-vitla

Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ

ಬೋಳಂತೂರು ದರೋಡೆ ಪ್ರಕರಣದ ಸೂತ್ರಧಾರ ಕಾರು ಚಾಲಕ?

ಬೋಳಂತೂರು ದರೋಡೆ ಪ್ರಕರಣದ ಸೂತ್ರಧಾರ ಕಾರು ಚಾಲಕ?

Sullia: ಬಸ್ಸಿನಿಂದ ವಿದ್ಯಾರ್ಥಿ ರಸ್ತೆಗೆಸೆಯಲ್ಪಟ್ಟ ಪ್ರಕರಣ; ಚಾಲಕ-ನಿರ್ವಾಹಕರಿಗೆ ಶಿಕ್ಷೆ

Sullia: ಬಸ್ಸಿನಿಂದ ವಿದ್ಯಾರ್ಥಿ ರಸ್ತೆಗೆಸೆಯಲ್ಪಟ್ಟ ಪ್ರಕರಣ; ಚಾಲಕ-ನಿರ್ವಾಹಕರಿಗೆ ಶಿಕ್ಷೆ

Sullia ಮಾನಸಿಕ ಖಿನ್ನತೆ: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Sullia ಮಾನಸಿಕ ಖಿನ್ನತೆ: ನೇಣು ಬಿಗಿದು ಯುವಕ ಆತ್ಮಹ*ತ್ಯೆ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.