ಮೂರು ವರ್ಷಗಳಲ್ಲಿ 733 ಉಗ್ರರ ಹತ್ಯೆ
ಕಾರ್ಯಾಚರಣೆ ವೇಳೆ 112 ನಾಗರಿಕರು ಹತ
Team Udayavani, Jun 26, 2019, 5:00 AM IST
ನವದೆಹಲಿ: ಭಯೋತ್ಪಾದಕರನ್ನು ಮಟ್ಟ ಹಾಕಲು ಪಣ ತೊಟ್ಟಿರುವ ಕೇಂದ್ರ ಸರ್ಕಾರವು ಕಳೆದ 3 ವರ್ಷಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ 700ಕ್ಕೂ ಅಧಿಕ ಭಯೋತ್ಪಾದಕರನ್ನು ಹೊಡೆದುರುಳಿಸಿದೆ.
ಹೀಗೆಂದು ಕೇಂದ್ರ ಗೃಹ ಸಚಿವಾಲಯವು ಮಂಗಳವಾರ ಲೋಕಸಭೆಗೆ ಮಾಹಿತಿ ನೀಡಿದೆ. ಪ್ರಸಕ್ತ ವರ್ಷದ ಜನವರಿಯಿಂದ ಜೂನ್‌ವರೆಗಿನ ಅವಧಿಯಲ್ಲಿ ಒಟ್ಟು 113 ಉಗ್ರರನ್ನು ಮಟ್ಟಹಾಕಲಾಗಿದೆ. 2018ರಲ್ಲಿ 257 ಉಗ್ರರು, 2017ರಲ್ಲಿ 213 ಮತ್ತು 2016ರಲ್ಲಿ 150 ಭಯೋತ್ಪಾದಕರನ್ನು ಹತ್ಯೆಗೈಯ್ಯಲಾಗಿದೆ. ಈ ಮೂಲಕ 3 ವರ್ಷಗಳಲ್ಲಿ ಒಟ್ಟು 733 ಉಗ್ರರನ್ನು ಸದೆಬಡಿದಂತಾಗಿದೆ ಎಂದು ಗೃಹ ಇಲಾಖೆ ತಿಳಿಸಿದೆ. ಇದೇ ವೇಳೆ, ಈ ಅವಧಿಯಲ್ಲಿ ಒಟ್ಟು 112 ನಾಗರಿಕರು ಕೂಡ ಅಸುನೀಗಿದ್ದಾರೆ ಎಂದು ಕೇಂದ್ರ ಗೃಹ ಖಾತೆ ಸಹಾಯಕ ಸಚಿವ ಜಿ. ಕಿಶನ್ ರೆಡ್ಡಿ ಹೇಳಿದ್ದಾರೆ.
ಐಸಿಸ್ ನಂಟು: 155 ಮಂದಿ ಸೆರೆ
ನಿಷೇಧಿತ ಇಸ್ಲಾಮಿಕ್ ಸ್ಟೇಟ್(ಐಸಿಸ್) ಉಗ್ರ ಸಂಘಟನೆಯ ಸದಸ್ಯರು ಹಾಗೂ ಆ ಸಂಘಟನೆ ಬಗ್ಗೆ ಮೃದು ಧೋರಣೆ ಹೊಂದಿರುವ ಒಟ್ಟು 155 ಮಂದಿಯನ್ನು ಈವರೆಗೆ ಬಂಧಿಸಲಾಗಿದೆ ಎಂದೂ ಗೃಹ ಸಚಿವಾಲಯ ಮಾಹಿತಿ ನೀಡಿದೆ. ಐಸಿಸ್ ಉಗ್ರ ಸಂಘಟನೆಯು ತನ್ನ ಸಿದ್ಧಾಂತವನ್ನು ಪ್ರಚುರಪಡಿಸಲು ವಿವಿಧ ಇಂಟರ್ನೆಟ್-ಆಧರಿತ ಸಾಮಾಜಿಕ ಮಾಧ್ಯಮಗಳನ್ನು ಬಳಸುತ್ತಿದೆ. ಇದರ ಬಗ್ಗೆ ಭದ್ರತಾ ಸಂಸ್ಥೆಗಳು ನಿಗಾ ಇಟ್ಟಿವೆ ಎಂದೂ ಕಿಶನ್ ರೆಡ್ಡಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.