ಕಾಮಗಾರಿ ಪೂರ್ಣಗೊಳಿಸದೆ ಬಾಕಿ ಹಣ ಬಿಡುಗಡೆಯಿಲ್ಲ
Team Udayavani, Jun 26, 2019, 5:04 AM IST
ಗಂಗೊಳ್ಳಿ: ಕೋಡಿ ಮತ್ತು ಗಂಗೊಳ್ಳಿಯ ಅಳಿವೆಯಲ್ಲಿ ಕಡಲ್ಕೊರೆತ ತಡೆಗಾಗಿ ಬ್ರೇಕ್ ವಾಟರ್ ನಿರ್ಮಾಣ ಕಾಮಗಾರಿಗೆ 102 ಕೋ.ರೂ. ಮಂಜೂರಾಗಿದೆ. ಆದರೆ ಇದರಲ್ಲಿ ಹೂಳೆತ್ತಿಲ್ಲ, 5 ಕೋ.ರೂ. ಪರಿಸರ ಅಭಿವೃದ್ಧಿಗೆ ವಿನಿಯೋಗಿಸಿಲ್ಲ ಮತ್ತು ಸಂಪರ್ಕ ರಸ್ತೆ ಅಭಿವೃದ್ಧಿಪಡಿಸದೆ ಬಾಕಿ ಉಳಿದ ಹಣ ಬಿಡುಗಡೆಯನ್ನು ತಡೆ ಹಿಡಿಯಲಾಗುವುದು ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
ಅವರು ಮಂಗಳವಾರ ಗಂಗೊಳ್ಳಿ ಮೀನುಗಾರಿಕೆ ಬಂದರಿಗೆ ಭೇಟಿ ನೀಡಿ ಕುಸಿದ ಜೆಟ್ಟಿ, ಬ್ರೇಕ್ ವಾಟರ್ ಕಾಮಗಾರಿ ವೀಕ್ಷಿಸಿದರು. ಅನುದಾನ ವನ್ನು ಸಮರ್ಪಕವಾಗಿ ವಿನಿಯೋಗಿಸಿಲ್ಲ ಎಂಬ ಮೀನುಗಾರರ ಅಹವಾಲು ಸ್ವೀಕರಿಸಿ ಮಾತನಾಡಿದರು.
ಕೋಡಿಯಲ್ಲಿ 900 ಮೀ. ಮತ್ತು ಗಂಗೊಳ್ಳಿ ಯಲ್ಲಿ 700 ಮೀ. ಬ್ರೇಕ್ ವಾಟರ್ ಕಾಮಗಾರಿಗೆ 102 ಕೋ.ರೂ. ಮಂಜೂರಾಗಿದ್ದು, 78 ಕೋ.ರೂ. ಬಿಡುಗಡೆಯಾಗಿದೆ. 24 ಕೋ.ರೂ. ಕಾಮಗಾರಿ ವಹಿಸಿರುವ ಗುತ್ತಿಗೆದಾರರಿಗೆ ಸಿಗಲು ಬಾಕಿಯಿದೆ. ಇದನ್ನು ಕಾಮಗಾರಿ ಪೂರ್ಣ ಗೊಂಡ ಬಳಿಕವೇ ಬಿಡುಗಡೆ ಮಾಡುವಂತೆ ಸಂಬಂಧಪಟ್ಟ ಸಚಿವರು, ಅಧಿಕಾರಿಗಳಿಗೆ ತಿಳಿಸ ಲಾಗುವುದು ಎಂದವರು ಸ್ಪಷ್ಟಪಡಿಸಿದರು.
ಜೆಟ್ಟಿ ಸ್ಲ್ಯಾಬ್ ಕುಸಿತ: ಗರಂ
ಇಲ್ಲಿನ ಬಂದರಿನ ಸ್ಲ್ಯಾಬ್ ಹಲವು ಕಡೆ ಕುಸಿದಿರುವ ಬಗ್ಗೆ ಅಧಿಕಾರಿಗಳು, ಎಂಜಿನಿ ಯರ್‌ಗಳ ಕಾರ್ಯವೈಖರಿ ಬಗ್ಗೆ ಸಂಸದರುಗರಂ ಆದರು. ಶಾಸಕರ ಮುತುವರ್ಜಿಯಿಂದ ದುರಸ್ತಿಗೆ 1.98 ಕೋ.ರೂ. ಮಂಜೂರಾಗಿದ್ದು, ಕೂಡಲೇ ಟೆಂಡರ್ ಕರೆದು, ಮೀನುಗಾರರಿಗೆ ತೊಂದರೆಯಾಗದಂತೆ ತ್ವರಿತಗತಿಯಲ್ಲಿ ಕಾಮ ಗಾರಿ ನಿರ್ವಹಿಸಬೇಕು. ಈಬಗ್ಗೆ ಸಂಬಂಧಪಟ್ಟ ಸಚಿವರು ಹಾಗೂ ಉನ್ನತಾಧಿಕಾರಿಗಳ ಬಳಿಯೂ ಮಾತನಾಡಲಾಗು ವುದು ಎಂದರು.
ವಿಸ್ತರಣೆಗೆ ಮನವಿ
ಕೋಡಿ ಮತ್ತು ಗಂಗೊಳ್ಳಿ ಅಳಿವೆ ಭಾಗದಲ್ಲಿ ಇನ್ನೂ 200 ಮೀ. ಬ್ರೇಕ್‌ವಾಟರ್ ವಿಸ್ತರಿಸಲು ಮೀನುಗಾರರು ಮನವಿ ಮಾಡಿದರು. ಚರ್ಚಿಸಿ, ತೀರ್ಮಾನಿಸಲಾಗುವುದು ಎಂದು ಸಂಸದರು ಭರವಸೆ ನೀಡಿದರು.
ಶಾಸಕ ಸುಕುಮಾರ್ ಶೆಟ್ಟಿ, ಮೀನು ಗಾರಿಕೆ ಇಲಾಖೆಯ ಅಧಿಕಾರಿಗಳು, ಎಂಜಿನಿಯರ್‌ಗಳು, ಕ್ಷೇತ್ರಾಧ್ಯಕ್ಷ ಸದಾನಂದ ಉಪ್ಪಿನಕುದ್ರು, ಪ್ರ. ಕಾರ್ಯದರ್ಶಿಗಳಾದ ಬಾಲಚಂದ್ರ ಭಟ್, ದೀಪಕ್ ಕುಮಾರ್ ಶೆಟ್ಟಿ, ಬಿಜೆಪಿ ಮುಖಂಡರು, ಗ್ರಾ.ಪಂ. ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಮೀನುಗಾರ ಮುಖಂಡರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.