ಮನೆಯಲ್ಲಿ ಆಕಸ್ಮಿಕ ಬೆಂಕಿ: ಬಾಲಕಿ ಸಜೀವ ದಹನ

Team Udayavani, Jun 26, 2019, 10:19 AM IST

bg-tdy-03

ಬೆಳಗಾವಿ: ಮನೆಯಲ್ಲಿ ಮಲಗಿದ್ದ ವೇಳೆ ಭಾರೀ ಪ್ರಮಾಣದಲ್ಲಿ ಕಾಣಿಸಿಕೊಂಡ ಬೆಂಕಿಗೆ ಎಂಟು ವರ್ಷದ ಬಾಲಕಿ ಸಜೀವ ದಹನವಾದ ದಾರುಣ ಘಟನೆ ಬೆಳಗಾವಿ ನಗರದಲ್ಲಿ ಮಂಗಳವಾರ ಬೆಳಗಿನ ಜಾವ ಸಂಭವಿಸಿದೆ. ಅದೃಷ್ಟವಶಾತ್‌ ಈ ದುರಂತದಲ್ಲಿ ತಾಯಿ, ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಳಗಾವಿ ನಗರದ ಅನಗೋಳದ ರುಘುನಾಥ ಪೇಟೆಯ ಕಸ್ತೂರಿ ರಾಣು ಮಲತವಾಡಿ (8) ಬೆಂಕಿಯಲ್ಲಿ ಸಜೀವ ದಹನಗೊಂಡ ನತದೃಷ್ಟ ಬಾಲಕಿ. ದುರಂತ ನಡೆದ ವೇಳೆ ತಂದೆ ರಾಣು ಗಂಗಾರಾಮ ಮಲತವಾಡಿ ಮನೆಯಲ್ಲಿ ಇರಲಿಲ್ಲ. ತಾಯಿ ಲಕ್ಷ್ಮಿ ಹಾಗೂ 12 ವರ್ಷದ ಬಾಳು ಮತ್ತು 10 ವರ್ಷದ ಗಂಗಾರಾಮ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದೇವರ ಮುಂದೆ ಹಚ್ಚಿಟ್ಟಿದ್ದ ದೀಪ ಉರುಳಿ ಬೆಂಕಿ ಹೊತ್ತಿಕೊಂಡ ಪರಿಣಾಮ ಈ ದುರಂತ ನಡೆದಿದೆ ಎಂದು ಮನೆಯವರು ಹಾಗೂ ಸ್ಥಳೀಯರು ಹೇಳಿದ್ದರು. ಆದರೆ ಟಿಳಕವಾಡಿ ಪೊಲೀಸ್‌ ಠಾಣೆಯಲ್ಲಿ ಆಕಸ್ಮಿಕ ವಿದ್ಯುತ್‌ ತಗುಲಿ ಈ ಘಟನೆ ನಡೆದಿದೆ ಎಂದು ಪ್ರಕರಣ ದಾಖಲಾಗಿದೆ. ಬೆಂಕಿ ಅನಾಹುತದಲ್ಲಿ ಸುಮಾರು 10 ಲಕ್ಷ ರೂ. ಹಾನಿಯಾಗಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಘಟನೆ ನಡೆದಿದ್ದು ಹೇಗೆ?: ರಘುನಾಥ ಪೇಟೆಯಲ್ಲಿರುವ ಮನೆಯಲ್ಲಿ ತಾಯಿ ಹಾಗೂ ಮೂವರು ಮಕ್ಕಳಿದ್ದರು. ಸೋಮವಾರ ಸಂಜೆ ದೇವರ ಫೋಟೋ ಮುಂದೆ ಎಂದಿನಂತೆ ಕುಟುಂಬದವರು ದೀಪ ಹಚ್ಚಿದ್ದಾರೆ. ಊಟವಾದ ಬಳಿಕ ತಾಯಿ ಹಾಗೂ ಮೂವರು ಮಕ್ಕಳು ಮಲಗಿದ್ದಾರೆ. ಮಂಗಳವಾರ ಬೆಳಗಿನ ಜಾವ ಸುಮಾರು 2 ಗಂಟೆ ಸುಮಾರಿಗೆ ದೇವರ ಮುಂದೆ ಉರಿಯುತ್ತಿದ್ದ ದೀಪ ಆಕಸ್ಮಿಕವಾಗಿ ಕೆಳಗೆ ಬಿದ್ದು ಅಲ್ಲಿಯೇ ಪಕ್ಕದ ಬಟ್ಟೆಗೆ ತಾಗಿ ಹಾಸಿಗೆಗೆ ವ್ಯಾಪಿಸಿದೆ. ಆಗ ಯಾರಿಗೂ ಎಚ್ಚರ ಇರಲಿಲ್ಲ. ನಂತರ ಬೆಂಕಿ ಕ್ಷಣಾರ್ಧದಲ್ಲಿ ಇಡೀ ಮನೆಗೆ ವ್ಯಾಪಿಸಿದ್ದಲ್ಲದೆ ಅಲ್ಲೇ ಮಲಗಿದ್ದ ಕಸ್ತೂರಿ ಬೆಂಕಿಗೆ ಸಿಲುಕಿ ಸಜೀವ ದಹನಗೊಂಡಿದ್ದಾಳೆ. ಬೆಂಕಿ ದುರಂತದಲ್ಲಿ ಮನೆಯಲ್ಲಿದ್ದ ವಸ್ತುಗಳೆಲ್ಲವೂ ಸುಟ್ಟು ಕರಕಲಾಗಿವೆ.

ಗಾಢ ನಿದ್ರೆಯಲ್ಲಿದ್ದ ತಾಯಿಗೆ ಹೊತ್ತಿ ಉರಿಯುತ್ತಿದ್ದ ಬೆಂಕಿ ಝಳ ತಾಗಿದೆ. ಗಾಬರಿಗೊಂಡು ಚೀರಾಡಿದ್ದಾಳೆ. ಪಕ್ಕದಲ್ಲಿದ್ದ ಇಬ್ಬರು ಚಿಕ್ಕ ಮಕ್ಕಳನ್ನು ಕೈಯಲ್ಲಿ ಹಿಡಿದುಕೊಂಡು ಮನೆಯಿಂದ ಹೊರಗೆ ಓಡಿ ಹೋಗಿದ್ದಾಳೆ. ಆದರೆ ಈ ಸಂದರ್ಭದಲ್ಲಿ ಕಸ್ತೂರಿ ಸಹ ಮನೆಯಲ್ಲಿ ಮಲಗಿದ್ದಾಳೆ ಎಂಬುದು ತಾಯಿಯ ಅರಿವಿಗೆ ಬಂದಿಲ್ಲ. ತಾಯಿಯ ಚೀರಾಟ ಕೇಳಿಸಿಕೊಂಡ ಅಲ್ಲಿನ ನಿವಾಸಿಗಳು ಮನೆಯಿಂದ ಹೊರಗೆ ಬಂದು ತಕ್ಷಣ ಅಗ್ನಿಶಾಮಕ ದಳಕ್ಕೆ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ದುರಂತದಲ್ಲಿ ಮಗಳನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿತ್ತು. ಟಿಳಕವಾಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV-Congress

Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.