ರೈತರ ಹೆಸರು ಶೀಘ್ರ ನೋಂದಾಯಿಸಿ
2 ಸಾವಿರಕ್ಕಿಂತ ಅಧಿಕ ರೈತರಿರುವಲ್ಲಿ ಹೆಚ್ಚುವರಿ ಸಿಬ್ಬಂದಿ •ಕಿಸಾನ್ ಸಮ್ಮಾನ್ ನಿಧಿ ಯೋಜನೆ ಸಮರ್ಪಕ ಅನುಷ್ಠಾನ ಮಾಡಿ
Team Udayavani, Jun 26, 2019, 11:23 AM IST
ಯಾದಗಿರಿ: ಜಿಪಂ ಕಚೇರಿ ಸಭಾಂಗಣದಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಸಮರ್ಪಕ ಅನುಷ್ಠಾನದ ಕುರಿತು ಜಿಲ್ಲಾಧಿಕಾರಿ ಕೂರ್ಮಾರಾವ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಯಾದಗಿರಿ: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರನ್ನು ಶೀಘ್ರ ನೋಂದಾಯಿಸಬೇಕು. ಈ ಯೋಜನೆಯಿಂದ ಜಿಲ್ಲೆಯ ಯಾವುದೇ ಅರ್ಹ ರೈತರು ವಂಚಿತರಾಗದಂತೆ ಕ್ರಮ ವಹಿಸುವ ಮೂಲಕ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಸೂಚಿಸಿದರು.
ನಗರದ ಜಿಪಂ ಸಭಾಂಗಣದಲ್ಲಿ ಮಂಗಳವಾರ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅನುಷ್ಠಾನ ಕುರಿತು ನಡೆದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯೋಜನೆಯಡಿ ಪ್ರತಿ ರೈತ ಕುಟುಂಬಕ್ಕೆ ಒಂದು ವರ್ಷಕ್ಕೆ 6 ಸಾವಿರ ರೂ.ಗಳನ್ನು ಪ್ರತಿ ನಾಲ್ಕು ತಿಂಗಳಿಗೊಮ್ಮೆಯಂತೆ ಒಟ್ಟು 3 ಸಮಾನ ಕಂತುಗಳಲ್ಲಿ ನೀಡಲು ಉದ್ದೇಶಿಸಲಾಗಿದೆ. ಎರಡನೇ ಮತ್ತು ಮೂರನೇ ಕಂತುಗಳಿಗೆ ಪದೇ ಪದೇ ರೈತರ ಮಾಹಿತಿ ಸಂಗ್ರಹಿಸುವ ಅಗತ್ಯವಿರುವುದಿಲ್ಲ. ಆಧಾರ್ ಸಂಖ್ಯೆ ಜೋಡಣೆ ಮಾಡಿದ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮಾ ಆಗುತ್ತದೆ ಎಂದು ಮಾಹಿತಿ ನೀಡಿದರು.
ಗ್ರಾಮೀಣಾಭಿವೃದ್ಧಿ, ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ತಮಗೆ ವಹಿಸಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಎರಡು ಸಾವಿರಕ್ಕಿಂತ ಹೆಚ್ಚು ರೈತರು ಇರುವ ಹಳ್ಳಿಗಳಿಗೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಲಾಗುವುದು. ಯೋಜನೆಯಡಿ ನೋಂದಾಯಿಸಿಕೊಳ್ಳಲು ಪ್ರತಿ ಹಳ್ಳಿಯಲ್ಲಿ ಡಂಗುರ ಸಾರಬೇಕು. ಗ್ರಾಮದ ಸೂಕ್ತವಾದ ಸ್ಥಳದಲ್ಲಿ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್ ನಕಲು ಪ್ರತಿ ಪಡೆದು ಸ್ವಯಂಘೋಷಣಾ ಪತ್ರವನ್ನು ರೈತರ ಸಹಿಯೊಂದಿಗೆ ಭರ್ತಿ ಮಾಡಿ, ಅಪ್‌ಲೋಡ್ ಮಾಡಬೇಕು. ಗ್ರಾಪಂವಾರು ಅರ್ಜಿ ಪಡೆಯುವ ಸಿಬ್ಬಂದಿಗೆ ರೈತರ ಪಟ್ಟಿ ನೀಡುತ್ತಿರುವುದರಿಂದ ಪಹಣಿ ಪಡೆಯುವ ಅಗತ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಜಿಲ್ಲೆಯಲ್ಲಿ ಮಳೆಯಾಗಿದ್ದರಿಂದ ರೈತರು ಬಿತ್ತನೆ ಹಾಗೂ ಕೃಷಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಹಾಗಾಗಿ, ರೈತರ ಸಮಯಕ್ಕೆ ಹೊಂದಿಕೊಂಡು ಅವರಿಗೆ ಈ ಯೋಜನೆ ತಲುಪಿಸಬೇಕು. ರೈತರ ಮನೆ ಮನೆ ಭೇಟಿ ಮೂಲಕವೂ ಸ್ವಯಂಘೋಷಣೆ ಪತ್ರ ಪಡೆಯಬಹುದು. ಬ್ಯಾಂಕ್ ಖಾತೆ ಇಲ್ಲದ ರೈತರ ಖಾತೆಯನ್ನು ತಕ್ಷಣ ತೆರೆಯಲು ಸಂಬಂಧಪಟ್ಟ ಶಾಖೆಗೆ ತಿಳಿಸಬೇಕು. ಅದೇ ರೀತಿ ಆಧಾರ್ ಸಂಖ್ಯೆ ಸಮಸ್ಯೆಗಳಿದ್ದಲ್ಲಿ ಸರಿಪಡಿಸಲು ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದರು.
ಕುಟುಂಬದ ಒಬ್ಬರು ಮಾತ್ರ ಯೋಜನೆಗೆ ಅರ್ಹರು. ರೈತರ ಹೆಸರಿನಲ್ಲಿ ಎಷ್ಟೇ ಜಮೀನು, ಸರ್ವೇ ನಂಬರ್ ಇದ್ದರೂ ಒಂದೇ ಅರ್ಜಿ ಪರಿಗಣಿಸಲಾಗುತ್ತದೆ. ನಿವೃತ್ತಿ ಅಥವಾ ಹಾಲಿ ಸೇವೆಯಲ್ಲಿರುವ ಸರ್ಕಾರಿ ನೌಕರರು (ಗ್ರೂಪ್ ಡಿ ಹೊರತುಪಡಿಸಿ), ಪ್ರತಿ ಮಾಹೆಯಾನ ಹತ್ತು ಸಾವಿರ ರೂ.ಗಿಂತ ಹೆಚ್ಚಿನ ಮೊತ್ತ ಪಡೆಯುತ್ತಿರುವ ಪಿಂಚಣಿದಾರರು, ಆದಾಯ ತೆರಿಗೆ ಪಾವತಿದಾರರು,
ವೃತ್ತಿಪರರು (ವೈದ್ಯರು, ಅಭಿಯಂತರರು, ವಕೀಲರು ಮತ್ತು ಇತರೆ), ಮಾಜಿ ಮತ್ತು ಹಾಲಿ ಸಾಂವಿಧಾನಿಕ ಹುದ್ದೆ ಹೊಂದಿದವರು ಈ ಯೋಜನೆಗೆ ಅರ್ಹರಲ್ಲ ಎಂದು ಜಿಲ್ಲಾಧಿಕಾರಿಗಳು ವಿವರಿಸಿದರು.
ಸಭೆಯಲ್ಲಿ ಹಾಜರಿದ್ದ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಲೆಕ್ಕಿಗರು, ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆಗಳ ಸಿಬ್ಬಂದಿಗೆ ಸ್ವಯಂ ಘೋಷಣಾ ಅರ್ಜಿ ನಮೂನೆ ಭರ್ತಿ ಮಾಡುವ ವಿಧಾನವನ್ನು ಕೃಷಿ ಇಲಾಖೆಯ ಉಪನಿರ್ದೇಶಕಿ ಅನುಸೂಯಾ ಹೂಗಾರ ತಿಳಿಸಿದರು.
ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕವಿತಾ ಎಸ್.ಮನ್ನಿಕೇರಿ, ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ, ಜಂಟಿ ಕೃಷಿ ನಿರ್ದೇಶಕಿ ದೇವಿಕಾ ಆರ್, ಸಹಾಯಕ ಆಯುಕ್ತ ಶಂಕರಗೌಡ ಎಸ್. ಸೋಮನಾಳ, ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
ಹೊಸಪೇಟೆ: ಸ್ಕ್ಯಾನ್ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ
Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ
Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Kannada: ಕನ್ನಡ ನಾಡಲ್ಲಿ ಪ್ರತಿದಿನವೂ ನಿತ್ಯೋತ್ಸವವಿರಲಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.