ಮೋದಿಗೆ ವೋಟ್, ಕೆಲಸಕ್ಕೆ ನಾನ್ ಬೇಕಾ? ಕುಮಾರಸ್ವಾಮಿ ಹೇಳಿಕೆಗೆ ಬಿಜೆಪಿ ಆಕ್ರೋಶ
Team Udayavani, Jun 26, 2019, 2:18 PM IST
ರಾಯಚೂರು:ವೈಟಿಪಿಎಸ್ ಸಿಬ್ಬಂದಿಯ ಅಹವಾಲು ಸ್ವೀಕಾರದ ವೇಳೆ ಬಸ್ ಅನ್ನು ಅಡ್ಡಗಟ್ಟಿ ಪ್ರತಿಭಟನೆ ನಡೆಸಿದ್ದಕ್ಕೆ ತಾಳ್ಮೆ ಕಳೆದುಕೊಂಡ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ವೋಟ್ ಮೋದಿಗೆ ಹಾಕ್ತೀರಾ? ಕೆಲಸ ಮಾಡಲಿಕ್ಕೆ ನಾನ್ ಬೇಕಾ? ಎಂಬ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವು ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ.
ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕರೇಗುಡ್ಡಕ್ಕೆ ತೆರಳುತ್ತಿರುವ ಸಂದರ್ಭದಲ್ಲಿ ವೈಟಿಪಿಎಸ್ ಸಿಬ್ಬಂದಿಗಳು ಸಿಎಂ ಬಸ್ ಅನ್ನು ತಡೆದು ಮನವಿ ಸಲ್ಲಿಸಿದ್ದರು. ಬಳಿಕ ತಡೆಮಧ್ಯೆ ಪ್ರತಿಭಟನೆ ಕುಳಿತಾಗ ತಾಳ್ಮೆ ಕಳೆದುಕೊಂಡ ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದರು.
ದುರಹಂಕಾರದ ಪ್ರವೃತ್ತಿ ನಿಲ್ಲಿಸಿ: ಬಿಎಸ್ ವೈ
ಇದೆಲ್ಲಾ ಸರ್ವಾಧಿಕಾರಿ ಆಡಳಿತ ನಡೆಸುವಂತಿದೆ. ಇದನ್ನೆಲ್ಲಾ ಮುಂದಿನ ದಿನಗಳಲ್ಲಿ ಕುಮಾರಸ್ವಾಮಿ ಅನುಭವಿಸಬೇಕಾಗುತ್ತದೆ. ಸಿಎಂ ಕುಮಾರಸ್ವಾಮಿ ಸಂಯಮ ಕಳೆದುಕೊಳ್ಳುತ್ತಿದ್ದಾರೆ. ಪ್ರತಿಭಟನೆ ಮಾಡುವವರನ್ನು ತಡೆಯುವುದು ಒಳ್ಳೆಯದಲ್ಲ. ನಿಮ್ಮ ಯೋಗ್ಯತೆ ಏನೆಂದು ರಾಜ್ಯದ ಜನ ತೀರ್ಮಾನಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ವೈ ವಾಗ್ದಾಳಿ ನಡೆಸಿದ್ದಾರೆ.
ಸಿಎಂ ಹೇಳಿಕೆ ಅತಿರೇಕದ ಪರವಾವಧಿಯಾಗಿದೆ. ಪ್ರಜಾಪ್ರಭುತ್ವದಲ್ಲಿ ಹೇಗೆ ನಡೆದುಕೊಳ್ಳಬೇಕೆಂಬ ಗೊತ್ತಿಲ್ಲ. ಇಂತಹ ದುರಹಂಕಾರದ ಪ್ರವೃತ್ತಿಯನ್ನು ಸಿಎಂ ನಿಲ್ಲಿಸಬೇಕು. ಈ ಪ್ರವೃತ್ತಿಯನ್ನು ಖಂಡಿಸುತ್ತೇನೆ ಎಂದರು.
ನಿಖಿಲ್ ಸೋತರೆಂದು ಜನರ ಮೇಲೆ ಸೇಡು ತೀರಿಸಿಕೊಳ್ತೀರಾ?ಕೆಎಸ್ ಈಶ್ವರಪ್ಪ
ನಿಖಿಲ್ ಸೋತರೆಂದು ಜನರ ಮೇಲೆ ಸೇಡು ತೀರಿಸಿಕೊಳ್ಳೀರಾ. ನೀವು ನಿಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮನೆಗೆ ಹೋಗಿ. ಸಂವಿಧಾನಕ್ಕೆ ಸಿಎಂ ಕುಮಾರಸ್ವಾಮಿ ಅಪಮಾನ ಮಾಡುತ್ತಿದ್ದಾರೆ ಎಂದು ಬಿಜೆಪಿ ಹಿರಿಯ ಮುಖಂಡ ಕೆಎಸ್ ಈಶ್ವರಪ್ಪ ತಿರುಗೇಟು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.