ಉತ್ತಮ ಮಳೆ ನಿರೀಕ್ಷೆಯೊಂದಿಗೆ ನಾಟಿ ಕಾರ್ಯ ಆರಂಭ
Team Udayavani, Jun 27, 2019, 5:34 AM IST
ಕುಂದಾಪುರ: ಮುಂಗಾರು ಇನ್ನೂ ನಿರೀಕ್ಷಿತ ಪ್ರಮಾಣದಲ್ಲಿ ಆರಂಭವಾಗಿದ್ದರೂ, ಮಳೆಯ ನಿರೀಕ್ಷೆಯಲ್ಲಿಯೇ ರೈತರು ಕೃಷಿ ಕಾರ್ಯದಲ್ಲಿ ತೊಡಗಿಸಿ ಕೊಂಡಿದ್ದು, ಅವಿಭಜಿತ ಕುಂದಾಪುರ ತಾಲೂಕಿನೆಲ್ಲೆಡೆ ನಿಧಾನಕ್ಕೆ ನಾಟಿ ಕಾರ್ಯ ಆರಂಭಗೊಂಡಿದೆ.
ಜೂನ್ ಮೊದಲ ವಾರದಿಂದಲೇ ಆರಂಭವಾಗ ಬೇಕಿದ್ದ ಮಳೆ ಈ ಬಾರಿ ತಡವಾಗಿ ಶುರುವಾಗಿದ್ದು, ಭತ್ತದ ಕೃಷಿಗೆ ಸ್ವಲ್ಪ ಮಟ್ಟಿನ ಹಿನ್ನಡೆಯಾಗಿದೆ. ಆದರೂ, ಈಗ ಬಂದಿರುವ ಅಲ್ಪ- ಸ್ವಲ್ಪ ಮಳೆಯನ್ನೇ ನಂಬಿಕೊಂಡು, ಉತ್ತಮ ಮಳೆಯ ನಿರೀಕ್ಷೆಯೊಂದಿಗೆ ರೈತರು ಗದ್ದೆಗಿಳಿದು ನೇಜಿ ನಾಟಿ ಕಾರ್ಯ ಆರಂಭಿಸಿದ್ದಾರೆ.
ಈಗಾಗಾಲೇ ತಾಲೂಕಿನಲ್ಲಿರುವ ವಂಡ್ಸೆ, ಬೈಂದೂರು, ಕುಂದಾಪುರದ 3 ರೈತ ಸೇವಾ ಕೇಂದ್ರಗಳಲ್ಲಿಯೂ ಕರ್ನಾಟಕ ರಾಜ್ಯ ಬೀಜ ನಿಗಮದಿಂದ ಅಗತ್ಯದಷ್ಟು ಬಿತ್ತನೆ ಬೀಜಗಳನ್ನು ದಾಸ್ತಾನು ಇರಿಸಲಾಗಿದೆ.
ಎಂ.ಒ.- 4 ಬೀಜದ ಕೊರತೆಯಿಲ್ಲ
ಒಟ್ಟು 1,300 ಕ್ವಿಂಟಾಲ್ ಬೀಜ ಅಗತ್ಯವಿದ್ದು, ಆ ಪೈಕಿ ಈಗಾಗಲೇ ಈ ವರೆಗೆ 844 ಕ್ವಿಂಟಾಲ್ ಬೀಜ ಬಂದಿದೆ. ಅದರಲ್ಲಿ 780 ಕ್ವಿಂಟಾಲ್ ಬೀಜವನ್ನು ರೈತರಿಗೆ ವಿತರಿಸಲಾಗಿದೆ. ಹೆಚ್ಚುವರಿ ಬೇಕಾದರೂ ದಾಸ್ತಾನಿದೆ. ಈ ಬಾರಿ ಎಂ.ಒ.- 4 ಬೀಜದ ಕೊರತೆಯಿಲ್ಲ. ಅಗತ್ಯದಷ್ಟು ಬೀಜ ಲಭ್ಯವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಬಾರಿಯಂತೆ ಎಂ.ಒ.-4 ಬೀಜ ಎಲ್ಲ ಕಡೆಗಳಲ್ಲೂ ಬೇಡಿಕೆ ಹೆಚ್ಚಾಗಿದ್ದು, ಸ್ವಲ್ಪ ಮಟ್ಟಿಗೆ ಕೊರತೆಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Central Office: 49 ಹೊಸ ತಾಲೂಕಿಗೆ “ಪ್ರಜಾ ಸೌಧ’ ಸಂಕೀರ್ಣ ಯಾವಾಗ?
Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ. ಅಪೇಕ್ಷಿತ ಆರ್ಥಿಕ ನೆರವು ಲಭ್ಯ.
ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ
Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ
Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.