ಮೆಟ್ರೋದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ದೆಹಲಿ ಸರ್ಕಾರದ ಪ್ರಸ್ತಾಪ ತಿರಸ್ಕರಿಸಿದ ಕೇಂದ್ರ
Team Udayavani, Jun 27, 2019, 2:30 PM IST
ನವದೆಹಲಿ:ದೆಹಲಿ ಮೆಟ್ರೋದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡಬೇಕೆಂಬ ದೆಹಲಿ ಸರ್ಕಾರದ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ಗುರುವಾರ ತಿರಸ್ಕರಿಸಿದೆ.
ಮುಂಬರುವ ವಿಧಾನಸಭಾ ಚುನಾವಣೆ ಮೇಲೆ ಕಣ್ಣಿಟ್ಟಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಸರ್ಕಾರ ಮಹಿಳೆಯರಿಗೆ ಮೆಟ್ರೋದಲ್ಲಿ ಮತ್ತು ಆಟೋದಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿಕೊಡುವುದಾಗಿ ಘೋಷಿಸಿತ್ತು.
ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಸರ್ಕಾರ ಬದಲಿ ಮಾರ್ಗವನ್ನು ಕಂಡುಕೊಳ್ಳಬೇಕು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಆದರೆ ಮೆಟ್ರೋದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಬೇಡ ಎಂದು ಹೇಳಿದೆ.
ದೆಹಲಿ ಮೆಟ್ರೋ ರೈಲ್ ಕಾರ್ಪೋರೇಶನ್(ಡಿಎಂಆರ್ ಸಿ) ಕೇಂದ್ರ ಮತ್ತು ದೆಹಲಿ ಸರ್ಕಾರದ ಶೇ.50, ಶೇ.50ರಷ್ಟು ಅನುದಾನ ಹೊಂದಿದೆ. ಏತನ್ಮಧ್ಯೆ ದೆಹಲಿಯಲ್ಲಿ ಮಹಿಳೆಯರಿಗೆ ಮೆಟ್ರೋದಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸುವ ಆಮ್ ಆದ್ಮಿ ಸರ್ಕಾರದ ಪ್ರಸ್ತಾಪಕ್ಕೆ ಮೆಟ್ರೋ ಮ್ಯಾನ್ ಎಂದೇ ಖ್ಯಾತರಾಗಿದ್ದ ದೆಹಲಿ ಮೆಟ್ರೋದ ಮಾಜಿ ಮುಖ್ಯಸ್ಥ ಇ.ಶ್ರೀಧರನ್ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ
Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ
Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್ ಭೀತಿ!
Election: ಮಹಾರಾಷ್ಟ್ರ, ಜಾರ್ಖಂಡ್ ಚುನಾವಣೆ ಪ್ರಚಾರಕ್ಕೆ ತೆರೆ: ನಾಳೆ ಮತದಾನ
Scientists: ಕೋಳಿ ಮೊದಲಾ, ಮೊಟ್ಟೆ ಮೊದಲಾ?: ಇಲ್ಲಿದೆ ಉತ್ತರ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.