ಕೆಲಸ ಮಾಡಿದ್ದು ನಾವು,ವೋಟ್ ಅವರಿಗಾ?;ಬಾದಾಮಿಯಲ್ಲಿ ಸಿದ್ದರಾಮಯ್ಯ
ಹಲವು ಅಭಿವೃದ್ಧಿ ಕಾಮಗಾರಿಗೆ ಚಾಲನೆ; 'ಕುಂಕುಮ ಬೇಡಯ್ಯ'ಎಂದ ಮಾಜಿ ಸಿಎಂ !
Team Udayavani, Jun 27, 2019, 3:38 PM IST
ಬಾಗಲಕೋಟೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಬಾಗಲಕೋಟೆ ಮತ್ತು ಪ್ರತಿನಿಧಿಸುತ್ತಿರುವ ಬಾದಾಮಿ ಕ್ಷೇತ್ರದಲ್ಲಿ ಎಡೆಬಿಡದೆ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಕಾಮಾಗಾರಿಯೊಂದಕ್ಕೆ ಚಾಲನೆ ನೀಡುವ ವೇಳೆ ಕುಂಕುಮ ಹಚ್ಚಿಕೊಳ್ಳಲು ನಿರಾಕರಿಸಿ ಸುದ್ದಿಯಾಗಿದ್ದಾರೆ.
ಬಾದಾಮಿ ವಿಧಾನಸಭೆ ಕ್ಷೇತ್ರದ ಚಿಮ್ಮನಕಟ್ಟಿ ಗ್ರಾಮದಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸುವ ವೇಳೆ ಈ ಘಟನೆ ನಡೆದಿದೆ. ಅರ್ಚಕರು ಕುಂಕುಮ ಹಚ್ಚಲು ಮುಂದಾದಾಗ ಬೇಡಯ್ಯ ಎಂದರು.
ಬಾದಾಮಿಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಸಾರ್ವಜನಿಕರ ಅಹವಾಲು ಆಲಿಸಿದರು.
ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ನಿಧನರಾದ ಬಾದಾಮಿಯ ಕಾಕನೂರು ಗ್ರಾಮದ ಯೋಧ ವಿರೂಪಾಕ್ಷ ಅವರ ಮನೆಗೆ ಭೇಟಿ ನೀಡಿ, ಮೃತ ಯೋಧನ ಕುಟುಂಬದವರಿಗೆ ಸಾಂತ್ವನ ಹೇಳಿದರು ಮತ್ತು ವೈಯಕ್ತಿಕವಾಗಿ ಒಂದು ಲಕ್ಷ ರೂ.ಗಳ ಪರಿಹಾರ ನೀಡಿದರು.
ಬಸವ ವಸತಿ ಯೋಜನೆಯಲ್ಲಿ ಬಾದಾಮಿ ವಿಧಾನಸಭೆ ಕ್ಷೇತ್ರಕ್ಕೆ 8,200 ಮನೆಗಳು ಮಂಜೂರಾಗಿದ್ದು, ಅರ್ಹ ಫಲಾನುಭವಿಗಳಿಗೆ ಮನೆಗಳ ಹಂಚಿಕೆಗೆ ಸಂಬಂಧಿಸಿದಂತೆ ಶೀಘ್ರದಲ್ಲೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಪಿಡಿಓಗಳಿಗೆ ಎಚ್ಚರಿಕೆ
ಬಾಲಕೋಟೆಯಲ್ಲಿ ಪಿಡಿಓಗಳಿಗೆ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ ಅವರು ಏನಾದರೂ ರಾಜಕಾರಣ, ತಾರತಮ್ಯ ಮಾಡಿದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಎಲ್ಲಾ ಕೆಲಸ ನಾವು ಮಾಡುವುದು , ವೋಟ್ ಮಾತ್ರ ಅವರಿಗೆ
ಕ್ಷೇತ್ರದಲ್ಲಿ ಎಲ್ಲಾ ಅಭಿವೃದ್ಧಿ ಕೆಲಸಗಳನ್ನ , ಯೋಜನೆಗಳನ್ನು ನಾವು ಮಾಡಿದರೂ, ಲೋಕಸಭಾ ಚುನಾವಣೆಯಲ್ಲಿ ಏನೂ ಮಾಡದ ಬಿಜೆಪಿಗೆ ಮತ ಹಾಕಿದ್ದೀರಿ, ಬಾದಾಮಿ ಕ್ಷೇತ್ರದಲ್ಲೂ ಬಿಜೆಪಿಗೆ 9 ಸಾವಿರ ಮತಗಳ ಲೀಡ್ ನೀಡಿದ್ದೀರಿ ಎಂದು ಬೇಸರ ವ್ಯಕ್ತ ಪಡಿಸಿದರು.
ಯಾರು ನೀನು ಬಿಜೆಪಿಯವನಾ ?
ಭಾಷಣದ ವೇಳೆ ವೇದಿಕೆ ಬಳಿ ನಿಂತು ಮಾತಾನಾಡುತ್ತಿದ್ದ ವ್ಯಕ್ತಿಯೊಬ್ಬನ ಮೇಲೆ ಗರಂ ಆದ ಸಿದ್ದರಾಮಯ್ಯ ಅವರು , ಏಯ್ ಸುಮ್ನಿರಯ್ಯಾ … ಯಾರು ನೀನು ಬಿಜೆಪಿಯವನಾ ಎಂದು ಗರಂ ಆದರು. ಈ ವೇಳೆ ಆತನನ್ನು ಎಳೆದೊಯ್ಯಲು ಆಗಮಿಸಿದ ಪೊಲೀಸರ ಬಳಿ, ಬಿಡ್ರಪ್ಪಾ.. ಅವನನ್ನು ಎಳೆದಾಡಬೇಡಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್
Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!
MUST WATCH
ಹೊಸ ಸೇರ್ಪಡೆ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.