ಪ್ಯೂರ್‌ ಲವ್‌ಸ್ಟೋರಿ

ಅಂದದ ಸಿನಿಮಾ ಚೆಂದದ ಮಾತು

Team Udayavani, Jun 28, 2019, 5:00 AM IST

Udayavani Kannada Newspaper

ಪ್ರಶ್ನೆ- ಪ್ಯೂರ್‌ ಲವ್‌ ಅಂದರೇನು?
ಉತ್ತರ- ಜೀವನ ಪರ್ಯಂತ ಒಂದೇ ಹುಡುಗಿಯನ್ನು ಲವ್‌ ಮಾಡುವುದಕ್ಕೆ ಪ್ಯೂರ್‌ ಲವ್‌ ಅಂತಾರೆ.

– ಮೇಲಿನ ಈ ಪ್ರಶ್ನೋತ್ತರ ಅಪ್ಪ-ಮಗನ ನಡುವಿನದ್ದು. ಚಿಕ್ಕಂದಿನಿಂದಲೂ ರೇಡಿಯೋ ಕೇಳುವ ಹುಚ್ಚು ಆ ಹುಡುಗನದ್ದು. ಹಾಗೊಮ್ಮೆ ರೇಡಿಯೋದಲ್ಲಿ ಪದೇ ಪದೇ ಬರುತ್ತಿದ್ದ ಪದವೊಂದನ್ನು ಕೇಳುವ ಆ ಹುಡುಗ, ಒಮ್ಮೆ ತನ್ನ ಅಪ್ಪನ ಬಳಿ ಬಂದು, “ಅಪ್ಪ ಆ ಪದದ ಅರ್ಥವೇನು’ ಎಂಬ ಪ್ರಶ್ನೆ ಮುಂದಿಟ್ಟಾಗ, ಅಪ್ಪನ ಉತ್ತರ ಹೀಗಿರುತ್ತೆ.’ ಹಾಗಾದರೆ, ಈ ಪ್ರಶ್ನೋತ್ತರ ಎಲ್ಲಿಯದ್ದು ಎಂಬುದಕ್ಕೆ “ಅಂದವಾದ ‘ ಸಿನಿಮಾ ಉತ್ತರ.

ಹೌದು, ಇದೇ ಮೊದಲ ಸಲ ಹೊಸಬರು ಸೇರಿ ಮಾಡಿರುವ ಚಿತ್ರವಿದು. ಸದ್ಯಕ್ಕೆ ಸೆನ್ಸಾರ್‌ ಅಂಗಳದಲ್ಲಿದ್ದು, ಬಿಡುಗಡೆ ತಯಾರಿಯಲ್ಲಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಜುಲೈ ಅಂತ್ಯದಲ್ಲಿ ಚಿತ್ರ ಬಿಡುಗಡೆಯಾಗಲಿದೆ. ಈ ಚಿತ್ರದ ಮೂಲಕ ಚಲ ನಿರ್ದೇಶಕರಾಗಿದ್ದಾರೆ. ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿರುವ ಚಲ, ಚಿತ್ರದ ಬಗ್ಗೆ ಹೇಳುವುದು ಇಷ್ಟು. “ಪ್ಯೂರ್‌ ಲವ್‌ ಅನ್ನೋದು ಈ ಕಾಲಕ್ಕೆ ಸರಿಹೊಂದುತ್ತಾ? ಒಂದೇ ಹುಡುಗಿಯನ್ನು ಲವ್‌ ಮಾಡುವುದು ಈಗಿನ ಕಾಲದಲ್ಲಿ ಕಷ್ಟನಾ, ಸುಲಭನಾ ಎಂಬುದನ್ನು ಹಾಸ್ಯಮಯವಾಗಿ ತೋರಿಸುವ ಪ್ರಯತ್ನ ಮಾಡಲಾಗಿದೆ. ಇದೊಂದು ರೊಮ್ಯಾಂಟಿಕ್‌ ಕಾಮಿಡಿ ಜಾನರ್‌ ಸಿನಿಮಾ ಆಗಿದ್ದು, ಚಿತ್ರದಲ್ಲಿ ಅನುಷಾ ನಾಯಕಿಯಾಗಿದ್ದಾರೆ. ಜೈ ಎಂಬ ಹೊಸ ಪ್ರತಿಭೆ ನಾಯಕನಾಗಿ ಎಂಟ್ರಿಕೊಟ್ಟಿದ್ದಾನೆ. ಅವರಿಬ್ಬರದು ಇಲ್ಲಿ ಲವ್‌ ಪ್ಯೂರ್‌ ಆಗಿ ಉಳಿಯುತ್ತಾ ಇಲ್ಲವಾ ಎಂಬ ಪ್ರೀತಿ ಕಥೆಯನ್ನೇ ಇಲ್ಲಿ ಹೊಸದಾಗಿ ಹೇಳುವ ಪ್ರಯತ್ನ ಮಾಡಿರುವುದಾಗಿ ಹೇಳುತ್ತಾರೆ ಚಲ.

ಸದ್ಯಕ್ಕೆ ಆಡಿಯೋ ಬಿಡುಗಡೆಗೆ ಸಜ್ಜಾಗಿರುವ ಚಿತ್ರಕ್ಕೆ ಗುರುಕಿರಣ್‌ ಹಿನ್ನೆಲೆ ಸಂಗೀತ ನೀಡಿದ್ದಾರೆ. ಎ.ಆರ್‌.ರೆಹಮಾನ್‌ ಅವರ ಜೊತೆ ಕೆಲಸ ಮಾಡಿರುವ ವಿಕ್ರಮ್‌ ವರ್ಮನ್‌ ಸಂಗೀತವಿದ್ದು, ಜಯಂತ್‌ ಕಾಯ್ಕಿಣಿ, ಯೋಗರಾಜ್‌ಭಟ್‌, ಹೃದಯಶಿವ ಎಂಟು ಗೀತೆಗಳನ್ನು ರಚಿಸಿದ್ದಾರೆ. ಇದುವರೆಗೆ ಖಳ ಪಾತ್ರಗಳಲ್ಲೇ ಹೆಚ್ಚು ಕಾಣಿಸಿಕೊಂಡಿದ್ದ ಹರೀಶ್‌ ರಾಯ್‌ ಇಲ್ಲಿ ನಾಯಕನ ಒಳ್ಳೆಯ ತಂದೆಯಾಗಿ ನಟಿಸಿದ್ದಾರೆ. ಶ್ರೀಧರ್‌ ನಾಯಕಿಯ ತಂದೆಯಾಗಿ ಕಾಣಿಸಿಕೊಂಡಿದ್ದಾರೆ. ಕೊಡಚಾದ್ರಿ, ಸಕಲೇಶಪುರ ಸುತ್ತಮುತ್ತ ಚಿತ್ರೀಕರಣವಾಗಿದ್ದು, ಬಹುತೇಕ ಚಿತ್ರ ಮಳೆ ಮತ್ತು ಮಂಜುವಿನಲ್ಲೇ ಚಿತ್ರಿತಗೊಂಡಿದೆ. ಫ್ಯಾಷನ್‌ ಡಿಸೈನರ್‌ ಆಗಿರುವ ಮಧು ರಾಜ್‌ ನಿರ್ಮಾಕರಾಗಿದ್ದು, ಅವರಿಗೆ ಇದು ಮೊದಲ ಚಿತ್ರ.

ಟಾಪ್ ನ್ಯೂಸ್

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರ ಪೈಕಿ ಓರ್ವ ಮೃತ್ಯು, ಸಹಸವಾರೆ ಗಾಯ

SriLanka ನೌಕಾಪಡೆಯಿಂದ 17 ತಮಿಳುನಾಡಿನ ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

12-google-search

Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?

Jaipur: 13 ಮಂದಿಯನ್ನು ಬಲಿ ಪಡೆದ ದುರಂತದಲ್ಲಿ LPG ಟ್ಯಾಂಕರ್ ಚಾಲಕ ಬದುಕುಳಿದಿದ್ದೇ ರೋಚಕ

ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Yearender 2024:ಸುಶೀಲ್‌ ಕುಮಾರ್‌ ಮೋದಿ To ಬಾಬಾ-2024ರಲ್ಲಿ ವಿಧಿವಶರಾದ ರಾಜಕೀಯ ಮುಖಂಡರು

Yearender 2024:ಸುಶೀಲ್‌ ಕುಮಾರ್‌ ಮೋದಿ To ಬಾಬಾ-2024ರಲ್ಲಿ ವಿಧಿವಶರಾದ ರಾಜಕೀಯ ಮುಖಂಡರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

Sandalwood: ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರ ಪೈಕಿ ಓರ್ವ ಮೃತ್ಯು, ಸಹಸವಾರೆ ಗಾಯ

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.