ಬಿಜೆಪಿ ಅಭಿಯಾನ : ಕೊಡಗಿನಲ್ಲಿ ಒಂದು ಲಕ್ಷ ಸದಸ್ಯರ ಗುರಿ


Team Udayavani, Jun 28, 2019, 5:25 AM IST

BJP-545

ಮಡಿಕೇರಿ: ಭಾರತೀಯ ಜನತಾ ಪಾರ್ಟಿಯನ್ನು ಮತ್ತಷ್ಟು ಬಲಗೊಳಿಸುವ ನಿಟ್ಟಿನಲ್ಲಿ ಜು.6ರಿಂದ ಆ.11ರವರೆಗೆ ದೇಶಾದ್ಯಂತ ಸಂಘಟನ್‌ ಪರ್ವ ಸದಸ್ಯತ್ವ ಅಭಿಯಾನ ನಡೆಯಲಿದೆ. ಈ ಸಂದರ್ಭ ಕೊಡಗು ಜಿಲ್ಲೆಯಲ್ಲಿ ಒಂದು ಲಕ್ಷ ಸದಸ್ಯರನ್ನು ನೋಂದಾಯಿಸುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಬಿ.ಭಾರತೀಶ್‌ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಬಿಜೆಪಿ ಈಗಾಗಲೇ ಸಮಾಜದ ಎಲ್ಲ ವರ್ಗದ ಜನರನ್ನು ತಲುಪುವುದರೊಂದಿಗೆ ವಿಶ್ವದ ನಂಬರ್‌ ಒನ್‌ ರಾಜಕೀಯ ಪಕ್ಷವಾಗಿ ಹೊರಹೊಮ್ಮಿದೆ. ದೇಶದಲ್ಲಿ ಸುಮಾರು 11 ಕೋಟಿ ಸಕ್ರಿಯ ಸದಸ್ಯರನ್ನು ಪಕ್ಷ ಹೊಂದಿದ್ದು, ಕರ್ನಾಟಕದಲ್ಲಿ 83 ಲಕ್ಷ ಹಾಗೂ ಕೊಡಗು ಜಿಲೆಯಲ್ಲಿ 45 ಸಾವಿರ ಸದಸ್ಯರು ಕಳೆದ ಬಾರಿ ನೋಂದಣಿ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

ಪ್ರತೀ ಆರು ವರ್ಷಗಳಿಗೊಮ್ಮೆ ಪಕ್ಷದ ಸದಸ್ಯತ್ವ ಅಭಿಯಾನ ಹಮ್ಮಿ ಕೊಳ್ಳಲಾಗುತ್ತಿದ್ದು, ಅದರಂತೆ ಈ ಬಾರಿ ಜು.6ರಿಂದ ಆ.11 ರವರೆಗೆ ಅಭಿ ಯಾನ ನಡೆ‌ಯಲಿದೆ. ಸದಸ್ಯರಾಗಲು ಬಯಸುವವರು ಜು.6ರಿಂದ 8980808080 ಸಂಖ್ಯೆಗೆ ಮಿಸ್ಡ್ ಕಾಲ್‌ ನೀಡುವ ಮೂಲಕ ನೋಂದಾಯಿ ಸಿಕೊಳ್ಳಬಹುದು. ಈ ರೀತಿ ಕರೆ ಮಾಡಿದ ಸದಸ್ಯರಿಗೆ ಅವರ ವಿಳಾಸ ನೀಡುವಂತೆ ಎಸ್‌ಎಂಎಸ್‌ ಬರಲಿದ್ದು, ಆ ಸಂದರ್ಭ ತಮ್ಮ ವಿಳಾಸವನ್ನು ನೀಡುವ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಮಾಹಿತಿ ನೀಡಿದರು.

ಕಳೆದ ಬಾರಿ ಕೊಡಗು ಜಿಲ್ಲೆಯಲ್ಲಿ 45 ಸಾವಿರ ಮಂದಿ ಸದಸ್ಯರನ್ನು ನೋಂದಾಯಿಸಲಾಗಿದ್ದು, ಈ ಬಾರಿ ಇದನ್ನು ಒಂದು ಲಕ್ಷಕ್ಕೆ ತಲುಪಿಸುವ ಗುರಿ ಹೊಂದಲಾಗಿದೆ. ಸದಸ್ಯತ್ವ ನೋಂದಣೆಯ ಜವಾಬ್ದಾರಿಗಾಗಿ ಜಿಲ್ಲಾ ಸಂಚಾಲಕರಾಗಿ ಶಾಂತೆಯಂಡ ರವಿಕುಶಾಲಪ್ಪ, ಸಹ ಸಂಚಾಲಕರಾಗಿ ನಾಪಂಡ ರವಿ ಕಾಳಪ್ಪ ಹಾಗೂ ದಾಖಲಾತಿ ಪ್ರಮುಖರಾಗಿ ವಿ.ಕೆ.ಲೋಕೇಶ್‌ ಕಾರ್ಯನಿರ್ವಹಿಸಲಿದ್ದಾರೆ ಎಂದರು.

ಸದಾನಂದಗೌಡರೊಂದಿಗೆ ಚರ್ಚೆ
ಪ್ರಕೃತಿ ವಿಕೋಪ ಸಂತ್ರಸ್ತರ ನಿರ್ವಹಣೆ ಸೇರಿದಂತೆ ವಿವಿಧ ವಿಚಾರಗಳ ವೈಫ‌ಲ್ಯದ ಬಗ್ಗೆ ಬಿಜೆಪಿ ಹೋರಾಟದ ಎಚ್ಚರಿಕೆ ನೀಡಿದ ಬಳಿಕ ಆಡಳಿತ ವ್ಯವಸ್ಥೆಯಲ್ಲಿ ಸ್ವಲ್ಪ ಮಟ್ಟಿಗೆ ಸುಧಾರಣೆಯಾಗಿದೆ. ಆದರೆ ಇನ್ನೂ ಪೂರ್ಣ ಪ್ರಮಾಣದಲ್ಲಿ ಸಕ್ರಿಯವಾಗಿಲ್ಲ ಮುಂದಿನ ದಿನಗಳಲ್ಲಿ ಜಿಲ್ಲಾಡಳಿತ ಮತ್ತಷ್ಟು ಚುರುಕು ಗೊಳ್ಳದಿದ್ದಲ್ಲಿ ಹೋರಾಟ ಅನಿವಾ ರ್ಯವಾಗಲಿದೆ ಎಂದರು.

ಕೊಡಗಿನ ಜ್ವಲಂತ ಸಮ ಸ್ಯೆಗಳ ಬಗ್ಗೆ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರೊಂದಿಗೆ ಜಿಲ್ಲಾ ಬಿಜೆಪಿ ಚರ್ಚಿಸಿದೆ. ಜಿಲ್ಲೆ ಹಾಗೂ ರಾಜ್ಯದ ಸಂಸದರ ವಿಶೇಷ ಸಭೆ ನಡೆಸಿ ಆಯಾ ಪ್ರದೇಶಗಳ ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆ ಸದಾನಂದಗೌಡರಿಂದ ದೊರೆತ್ತಿದೆ ಎಂದು ಭಾರತೀಶ್‌ ಹೇಳಿದರು. ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶಾಂತೆಯಂಡ ರವಿ ಕುಶಾಲಪ್ಪ, ನಾಪಂಡ ರವಿ ಕಾಳಪ್ಪ, ರಾಬಿನ್‌ ದೇವಯ್ಯ, ವಿ.ಕೆ.ಲೋಕೇಶ್‌ ಹಾಗೂ ಸಾಮಾಜಿಕ ಜಾಲತಾಣ ವಿಭಾಗದ ಕಾಳಚಂಡ ಅಪ್ಪಣ್ಣ ಉಪಸ್ಥಿತರಿದ್ದರು.

ಸಾಥ್‌ ಆಯೇ-ದೇಶ್‌ ಬನಾಯೇ
ಈ ಬಾರಿ ಸಾಥ್‌ ಆಯೇ-ದೇಶ್‌ ಬನಾಯೇ ಎಂಬ ಘೋಷ ವಾಕ್ಯದೊಂದಿಗೆ ಸದಸ್ಯತ್ವ ಅಭಿಯಾನ ನಡೆಯಲಿದ್ದು, ರಾಜಕೀಯದ ಮೂಲಕ ದೇಶ ಸೇವೆ ಮಾಡಲಿಚ್ಛಿಸುವ ಯುವಜನರು, ಎನ್‌ಜಿಒಗಳು, ಎಲ್ಲ ವರ್ಗದ ಜನರು ಈ ಸದಸ್ಯತ್ವ ಅಭಿಯಾನದಲ್ಲಿ ಭಾಗಿಯಾಗಬಹುದಾಗಿದೆ ಎಂದು ಭಾರತೀಶ್‌ ತಿಳಿಸಿದರು.

ಟಾಪ್ ನ್ಯೂಸ್

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

120

Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!

Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.