ಕರ್ನಾಟಕ ನಂ.1 ಮಾಡುವುದೇ ಗುರಿ
ಮೈತ್ರಿ ಸರ್ಕಾರದ ಮೇಲೆ ನಂಬಿಕೆ ಇಡಿ ; ಸರ್ಕಾರ ಸುಭದ್ರವಾಗಿ ಆಡಳಿತ ನೀಡಲಿದೆ: ಸಿಎಂ
Team Udayavani, Jun 28, 2019, 5:58 AM IST
ಬೀದರ: ‘ದೇಶದಲ್ಲಿಯೇ ಕರ್ನಾಟಕ ರಾಜ್ಯವನ್ನು ನಂ.1 ಸ್ಥಾನಕ್ಕೆ ಏರಿಸುವ ನಿಟ್ಟಿನಲ್ಲಿ ಪ್ರಯತ್ನಿಸುತ್ತಿದ್ದೇನೆ’ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಬಸವಕಲ್ಯಾಣ ತಾಲೂಕು ಉಜಳಂಬ ಗ್ರಾಮದಲ್ಲಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಸಂಕಲ್ಪ ಹೊಂದಿದ್ದು, ಸಮಾಜದ ಎಲ್ಲ ವರ್ಗದ ಜನರ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಎಲ್ಲ ಕೆಳವರ್ಗದ ಜನರಿಗೆ ರಕ್ಷಣೆ ನೀಡುವ ಕೆಲಸ ಮಾಡಲಾಗುತ್ತಿದೆ. ಮೈತ್ರಿ ಸರ್ಕಾರದ ಮೇಲೆ ರಾಜ್ಯದ ಜನರು ನಂಬಿಕೆಇಡಬೇಕು. ಸರ್ಕಾರ ಸುಭದ್ರವಾಗಿ ಆಡಳಿತ ನೀಡಲಿದೆ. ಆದರೆ, ಕೆಲವರು ಸರ್ಕಾರ ರಚನೆ ಆದಾಗಿನಿಂದ ಬೀಳಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಅವರ ಪ್ರಯತ್ನಗಳು ಫಲ ನೀಡುವುದಿಲ್ಲ ಎಂದರು.
ವಿಪಕ್ಷಗಳ ಆರೋಪದಿಂದ ಮನಸ್ಸಿಗೆ ಬೇಸರ: ಎಲ್ಲ ಜಿಲ್ಲೆಗಳಿಗೂ ಸಮಾನ ಅನುದಾನ ಹಂಚಿಕೆ ಮಾಡುತ್ತಿದ್ದರೂ ಕೂಡ ವಿರೋಧ ಪಕ್ಷದವರು 2-3 ಜಿಲ್ಲೆಗಳಿಗೆ ಸೀಮಿತ ಮುಖ್ಯಮಂತ್ರಿ ಎಂದು ಆರೋಪಿಸುತ್ತಿರುವುದು ಮನಸ್ಸಿಗೆ ನೋವುಂಟು ಮಾಡಿದೆ. ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದ ಎಲ್ಲ ರೈತರ ಸಾಲಮನ್ನಾ ಮಾಡಲಾಗಿದೆ. ಅದೇ ರೀತಿ, ಬೀದರ ಜಿಲ್ಲೆ ಒಂದಕ್ಕೆ ಒಂದು ವರ್ಷದಲ್ಲಿ 2,000 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದೇನೆ. ಅಲ್ಲದೆ, ರಾಯಚೂರು ಜಿಲ್ಲೆಗೆ 3,800 ಕೋಟಿ ರೂ., ಯಾದಗರಿ ಜಿಲ್ಲೆಗೆ 3 ಸಾವಿರ ಕೋಟಿ ರೂ. ಅನುದಾನ ನೀಡಲಾಗುತ್ತಿದ್ದು, ಈ ಮೂಲಕ ವಿವಿಧ ಯೋಜನೆಗಳ ಅನುಷ್ಠಾನ ಮಾಡಲಾಗುತ್ತಿದೆ. ಆದರೂ, ವಿರೋಧ ಪಕ್ಷದವರು ತಾರತಮ್ಯದ ಆರೋಪ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಎತ್ತಿನ ಬಂಡಿಯಲ್ಲಿ ಎಚ್‌ಡಿಕೆ ಮೆರವಣಿಗೆ
ಬಸವಕಲ್ಯಾಣ ತಾಲೂಕಿನ ಉಜಳಂಬ ಗ್ರಾಮಕ್ಕೆ ಗ್ರಾಮ ವಾಸ್ತವ್ಯಕ್ಕೆ ಗುರುವಾರ ಆಗಮಿಸಿದ ಸಿಎಂ ಕುಮಾರಸ್ವಾಮಿ ಅವರನ್ನು ಗ್ರಾಮಸ್ಥರು ಹಾಗೂ ಕಾರ್ಯಕರ್ತರು ಸಡಗರದಿಂದ ಸ್ವಾಗತಿಸಿದರು. ಮುಖ್ಯಮಂತ್ರಿ ಆಗಮಿಸುತ್ತಿದ್ದಂತೆ ಆನೆಯಿಂದ ಹೂವಿನ ಹಾರ ಹಾಕಿಸಿ, ವಿವಿಧ ಬಣ್ಣಗಳ ಹಸಿರು ತೋರಣ ಹಾಗೂ ಬಲೂನ್‌ಗಳಿಂದ ಅಲಂಕಾರ ಮಾಡಲಾಗಿದ್ದ ಎತ್ತಿನ ಬಂಡಿಯಲ್ಲಿ ವೇದಿಕೆವರೆಗೆ ಮೆರವಣಿಗೆ ಮಾಡಿದರು. ಮೆರವಣಿಗೆಯಲ್ಲಿ ಭಾಗವಹಿಸಿದ್ದ ಮಹಾರಾಷ್ಟ್ರ ಕಲಾವಿದರ ಭಜನೆ, ಡೊಳ್ಳು ಕುಣಿತ ಹಾಗೂ ಸಾಂಸ್ಕೃತಿಕ ನೃತ್ಯಗಳು ಜನರ ಗಮನ ಸೆಳೆದವು. ಗ್ರಾಮದ ಪ್ರಮುಖ ರಸ್ತೆಯಿಂದ ಆರಂಭವಾದ ಮೆರವಣಿಗೆಯುದ್ದಕ್ಕೂ ಕುಮಾರಸ್ವಾಮಿ ಎಲ್ಲರತ್ತ ಕೈ ಬೀಸಿ ನಮಸ್ಕರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.