ಕಾರ್‌-ಟು-ಬುಲೆಟ್‌ ಟ್ರೈನ್‌ : ಜಪಾನ್‌ ಬಾಂಧವ್ಯವನ್ನು ಬಣ್ಣಿಸಿದ ಪ್ರಧಾನಿ ಮೋದಿ

Team Udayavani, Jun 28, 2019, 5:50 AM IST

cara-to-bullet-train

ಒಸಾಕ/ಕೋಬೆ: “ಜಿ20′ ಶೃಂಗಕ್ಕಾಗಿ ಜಪಾನ್‌ನ ಒಸಾಕಾಗೆ ಗುರುವಾರ ತೆರಳಿರುವ ಪ್ರಧಾನಿ ನರೇಂದ್ರ ಮೋದಿ, ಜಪಾನ್‌ ಪ್ರಧಾನಿ ಶಿಂಜೋ ಅಬೆ ಜತೆಗೆ ಮಾತುಕತೆ ನಡೆಸಿದ್ದಾರೆ. ಜಾಗತಿಕ ಆರ್ಥಿಕತೆ, ಆರ್ಥಿಕ ಅಪರಾಧಿಗಳು ಹಾಗೂ ವಿಪತ್ತು ನಿರ್ವಹಣೆಯಲ್ಲಿ ಸಹಕಾರ ಸಹಿತ ಹಲವು ವಿಚಾರಗಳ ಕುರಿತು ಉಭಯ ಮುಖಂಡರು ಚರ್ಚೆ ನಡೆಸಿದ್ದಾರೆ.

ಈಶಾನ್ಯ ಭಾರತದ ಹಲವು ಯೋಜನೆಗÙಲ್ಲಿ ಜಪಾನ್‌ ತೊಡಗಿಸಿಕೊಂಡಿದ್ದು, ಇದಕ್ಕಾಗಿ ಮೋದಿ ಜಪಾನ್‌ಗೆ ಧನ್ಯವಾದ ತಿಳಿಸಿದ್ದಾರೆ. ಅಲ್ಲದೆ, ಬುಲೆಟ್‌ ರೈಲು ಯೋಜನೆಯಲ್ಲೂ ಜಪಾನ್‌ನ ಜೈಕಾ ಸಂಸ್ಥೆ ತೊಡಗಿಸಿಕೊಂಡಿದ್ದು, ಈ ಕುರಿತೂ ಚರ್ಚೆ ನಡೆಸಲಾಗಿದೆ. ಭಾರತದಲ್ಲಿ ವಿಪತ್ತು ನಿರ್ವಹಣೆ ಕುರಿತ ಮೂಲಸೌಕರ್ಯದಲ್ಲಿ ಜಪಾನ್‌ ನೀಡಿದ ನೆರವನ್ನು ಮೋದಿ ಈ ವೇಳೆ ನೆನಪಿಸಿಕೊಂಡಿದ್ದಾರೆ.

ಅಲ್ಲದೆ ನೆರೆ ದೇಶಗಳಲ್ಲಿ ಭಾರತದ ಯೋಜನೆಗಳಿಗೆ ಜಪಾನ್‌ ನೆರವು ಕುರಿತೂ ಚರ್ಚೆ ನಡೆಸಲಾಗಿದೆ. ಕೀನ್ಯಾದಲ್ಲಿ ಕ್ಯಾನ್ಸರ್‌ ಆಸ್ಪತ್ರೆಯನ್ನು ಜಪಾನ್‌ ಸಹಭಾಗಿತ್ವದಲ್ಲಿ ಭಾರತ ನಿರ್ಮಿಸುತ್ತಿದೆ. ಮೋದಿ ಮತ್ತು ಅಬೆ ಮಾತುಕತೆ ಅನಂತರದಲ್ಲಿ ಜಪಾನ್‌, ಭಾರತದ ವಿದೇಶಾಂಗ ಮತ್ತು ರಕ್ಷಣಾ ಸಚಿವರು ಮಾತುಕತೆ ನಡೆಸಿದ್ದಾರೆ. ಅಲ್ಲದೆ, ಜಿ20 ಶೃಂಗದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಚೀನ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌, ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಮತ್ತು ಇತರ ನಾಯಕರನ್ನು ಭೇಟಿ ಮಾಡಲಿದ್ದಾರೆ.

ಮೋದಿಗೆ ಅಬೆ ಶುಭಾಶಯ: ಮರಳಿ ಅಧಿಕಾರಕ್ಕೇರಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿಯನ್ನು ಜಪಾನ್‌ ಪ್ರಧಾನಿ ಶಿಂಜೋ ಅಬೆ ಶುಭಾಶಯ ಕೋರಿದ್ದಾರೆ. ಚುನಾವಣೆ ಫ‌ಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ದೂರವಾಣಿ ಮೂಲಕ ಶುಭಾಶಯ ಕೋರಿದವರಲ್ಲಿ ನೀವೇ ಮೊದಲಿಗರು ಎಂದು ಮೋದಿ ಈ ವೇಳೆ ನೆನಪಿಸಿಕೊಂಡಿದ್ದಾರೆ. ಈ ಮಧ್ಯೆ ಈ ವರ್ಷದಲ್ಲೇ ಭಾರತಕ್ಕೆ ಭೇಟಿ ನೀಡುವುದಾಗಿಯೂ ಅಬೆ ಘೋಷಿಸಿದ್ದಾರೆ. ಇನ್ನೊಂದೆಡೆ, ಅಕ್ಟೋಬರ್‌ನಲ್ಲಿ ದೊರೆ ನರುಹಿತೊ ಪಟ್ಟಾಭಿಷೇಕ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಭಾಗವಹಿಸಲಿದ್ದಾರೆ ಎಂದು ಮೋದಿ ಈ ವೇಳೆ ಅಬೆಗೆ ತಿಳಿಸಿದ್ದಾರೆ.

ಜಪಾನ್‌ನಲ್ಲಿ ಜೈ ಶ್ರೀರಾಂ!
ಪ್ರಧಾನಿ ಮೋದಿ ಜಪಾನ್‌ನ ಕೊಬೆಯಲ್ಲಿರುವ ಹ್ಯೂಗೋ ಪ್ರಿಫೆಕ್ಟರ್‌ ಗೆಸ್ಟ್‌ ಹೌಸ್‌ಗೆ ಕಾಲಿಡುತ್ತಿದ್ದಂತೆಯೇ ಜೈ ಶ್ರೀರಾಮ್‌, ವಂದೇ ಮಾತರಂ, ಭಾರತ್‌ ಮಾತಾ ಕೀ ಜೈ ಘೋಷಣೆ ಮೊಳಗಿದೆ. ಇಲ್ಲಿನ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ.

ಮೋದಿ ಆಗಮಿಸುತ್ತಿದ್ದಂತೆಯೇ ಇಲ್ಲಿ ಸೇರಿದ್ದ ಜನರು ಘೋಷಣೆಗಳನ್ನು ಕೂಗಿದರು. ಭಾರತದ ಅಭಿವೃದ್ಧಿಯಲ್ಲಿ ಜಪಾನ್‌ ಮಹತ್ವದ ಪಾತ್ರ ವಹಿಸಿದೆ. ಕಾರಿನಿಂದ ಬುಲೆಟ್‌ ರೈಲಿನವರೆಗೂ ಜಪಾನ್‌ನ ಸ್ನೇಹ ಹಸ್ತ ಚಾಚಿದೆ. ಭಾರತದ ಬಹತೇಕ ದೊಡ್ಡ ಯೋಜನೆಗಳಲ್ಲಿ ಜಪಾನ್‌ನ ಪಾತ್ರವಿದೆ ಎಂದು ಮೋದಿ ಹೇಳಿದ್ದಾರೆ.

ಮಹಾತ್ಮಾ ಗಾಂಧಿ ಹೇಳುತ್ತಿದ್ದ ಮೂರು ಮಂಗಗಳ ಕಥೆಯು 17ನೇ ಶತಮಾನದ ಜಪಾನ್‌ ಜಾನಪದ ಕಥೆಯಾಗಿತ್ತು. ಕೆಟ್ಟದ್ದನ್ನು ನೋಡಬೇಡ, ಕೆಟ್ಟದ್ದನ್ನು ಕೇಳಬೇಡ, ಕೆಟ್ಟದ್ದನ್ನು ನುಡಿಯಬೇಡ ಎಂಬ ನೀತಿಯುಳ್ಳ ಈ ಕಥೆಯನ್ನು ಅವರು ಜಪಾನ್‌ನಿಂದ ತಂದು ನಮಗೆ ಹೇಳಿದ್ದರು ಎಂದೂ ಮೋದಿ ಈ ವೇಳೆ ನೆನಪಿಸಿಕೊಂಡಿದ್ದಾರೆ.

ಜಿ20ಯಲ್ಲಿ ವ್ಯಾಪಾರ, ಯುದ್ಧದ್ದೇ ಸದ್ದು!
ಒಸಾಕಾದಲ್ಲಿ 28, 29ರಂದು ನಡೆಯಲಿರುವ ಜಿ20 ಶೃಂಗದಲ್ಲಿ ಈ ಬಾರಿ ಅತಿ ಹೆಚ್ಚು ಚರ್ಚೆಗೆ ಒಳಗಾಗುವ ವಿಷಯವೇ ಅಮೆರಿಕ, ಚೀನ ಹಾಗೂ ಇತರ ರಾಷ್ಟ್ರಗಳ ಮಧ್ಯೆ ನಡೆಯುತ್ತಿರುವ ವ್ಯಾಪಾರ ಸಂಘರ್ಷ ಎಂಬುದು ಬಹುತೇಕ ನಿಚ್ಚಳವಾಗಿದೆ. ಶುಕ್ರವಾರ ಹಾಗೂ ಶನಿವಾರ ನಡೆಯಲಿರುವ ಶೃಂಗದಲ್ಲಿ ವ್ಯಾಪಾರ ಸಂಘರ್ಷ, ಇರಾನ್‌ ಹಾಗೂ ಅಮೆರಿಕದ ಸಂಘರ್ಷ ಸೇರಿದಂತೆ ಹಲವು ವಿಚಾರಗಳು ಚರ್ಚೆಗೆ ಬರಲಿವೆ. ಆದರೆ ಅದೆಲ್ಲಕ್ಕಿಂತ ಹೆಚ್ಚು ಪ್ರಮುಖವಾಗಿ ವ್ಯಾಪಾರ ಸಂಘರ್ಷ ಚರ್ಚೆಗೆ ಒಳಗಾಗ ಲಿದೆ. ಶನಿವಾರ ಟ್ರಂಪ್‌ ಹಾಗೂ ಚೀನ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಮಾತುಕತೆ ನಡೆಸಲಿದ್ದಾರೆ. ಇರಾನ್‌ ಹಾಗೂ ಅಮೆ ರಿಕದ ಮಧ್ಯೆ ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿರುವ ಸಂಘರ್ಷವೂ ಚರ್ಚೆ ಬರುವ ಸಾಧ್ಯತೆಯಿದೆ.

ಭಾರತದ ವಿರುದ್ಧ ಹರಿಹಾಯ್ದ ಟ್ರಂಪ್‌
ಭಾರತ ವಿಧಿಸಿರುವ ತೆರಿಗೆಯನ್ನು ಒಪ್ಪಲಾಗದು. ಶೀಘ್ರವೇ ಹೆಚ್ಚುವರಿ ತೆರಿಗೆಯನ್ನು ಹಿಂಪಡೆಯಬೇಕು ಎಂದು ಭಾರತದ ವಿರುದ್ಧ ಟ್ರಂಪ್‌ ಹರಿಹಾಯ್ದಿದ್ದಾರೆ. ಇತ್ತೀಚೆಗೆ ಭಾರತವನ್ನು ಆದ್ಯತೆಯ ರಾಷ್ಟ್ರ ಎಂಬ ಪಟ್ಟಿಯಿಂದ ಅಮೆರಿಕ ಕೈಬಿಟ್ಟಿದ್ದಕ್ಕೆ ಪ್ರತಿಯಾಗಿ, ಅಮೆರಿಕದ 28 ಉತ್ಪನ್ನಗಳ ಮೇಲೆ ಭಾರತ ತೆರಿಗೆ ಹೆಚ್ಚಳ ಮಾಡಿತ್ತು. ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಟ್ರಂಪ್‌ ಮಾತುಕತೆ ನಡೆಸಲಿದ್ದು, ಇದಕ್ಕೂ ಮುನ್ನ ಟ್ರಂಪ್‌ ಈ ಹೇಳಿಕೆ ಮಹತ್ವ ಪಡೆದಿದೆ. ಅಲ್ಲದೆ ಮೋದಿ ಜೊತೆಗೆ ಮಾತುಕತೆ ವೇಳೆ ಈ ವಿಚಾರವನ್ನು ಪ್ರಸ್ತಾವಿಸುತ್ತೇನೆ ಎಂದೂ ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.