ಹದಗೆಟ್ಟಿರುವ ರಸ್ತೆ ದುರಸ್ತಿಗೆ ಆಗ್ರಹ
ಮತದಾನ ಬಹಿಷ್ಕರಿಸಿದ್ದರೂ ರಸ್ತೆ ದುರಸ್ತಿ ಆಗಲಿಲ್ಲ: ಆಕ್ರೋಶ
Team Udayavani, Jun 28, 2019, 7:57 AM IST
ಗ್ರಾಮಸ್ಥರು ಜಿಪಂ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಬಾಗೇಪಲ್ಲಿ: ಚುನಾವಣೆಯಲ್ಲಿ ಮತದಾನಕ್ಕೆ ಬಹಿಷ್ಕಾರ ಹಾಕಿ ಸರ್ಕಾರದ ಗಮನ ಸೆಳೆದಿದ್ದರೂ ಹದಗೆಟ್ಟಿರುವ ಐವಾರ‌್ಲಪಲ್ಲಿ ಕ್ರಾಸ್‌ನಿಂದ ಮರವಪಲ್ಲಿ, ಸಿದ್ದನಪಲ್ಲಿ, ಕಾಗಾನಪಲ್ಲಿ, ಮೈನಾಗಾನಪಲ್ಲಿ ರಸ್ತೆಯನ್ನು ದುರಸ್ತಿ ಮಾಡಿಸಲು ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಪ್ರಾಂತ ರೈತ ಸಂಘದ ತಾಲೂಕು ಕಾರ್ಯದರ್ಶಿ ಜೆಸಿಬಿ ಪಿ. ಮಂಜುನಾಥರೆಡ್ಡಿ ಮಾತನಾಡಿ, ಹಲವು ದಶಕಗಳಿಂದಲೂ ರಸ್ತೆಯಲ್ಲಿ ಹಳ್ಳ ಗುಣಿಗಳು ಬಿದ್ದು ಸಂಪೂರ್ಣವಾಗಿ ಹಾಳಾಗಿದೆ. ಬಸ್ ಸಂಚಾರವಿಲ್ಲದ ಈ ರಸ್ತೆಯಲ್ಲಿ ಆಟೋ ಚಾಲಕರು ಬರಲು ನಿರಾಕರಿಸುತ್ತಾರೆ.
ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಹೋಗಿ ಬರಲು ಐವಾರ‌್ಲಪಲ್ಲಿ ಕ್ರಾಸ್‌ಗೆ 3 ಕಿ.ಮೀ ನಡೆದು ನಂತರ ಬಸ್‌ನಲ್ಲಿ ಪ್ರಯಾ ಣಿಸಬೇಕಾಗಿದೆ. ರೋಗಿಗಳ ಪರಿಸ್ಥಿತಿ ಕಳವಳಕಾರಿಯಾಗಿದೆ. ಈ ಬಗ್ಗೆ ಅನೇಕ ವರ್ಷಗಳಿಂದ ಸಂಬಂಧಪಟ್ಟ ಅಧಿಕಾರಿ ಗಳ ಗಮನಕ್ಕೆ ತಂದರೂ ಪ್ರಯೋಜನವಾ ಗಿಲ್ಲ. ರಸ್ತೆ ಕಾಮಗಾರಿ ಪ್ರಾರಂಭ ಮಾಡು ವವರಿಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಎಚ್ಚರಿಸಿದರು.
ತಾಲೂಕು ದಂಡಾಧಿಕಾರಿ ಎಂ.ನಾಗರಾಜ್ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭನಕಾರರೊಂದಿಗೆ ಮಾತುಕತೆ ನಡೆಸಿ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಅನುದಾನ ಬಿಡು ಗಡೆ ಮಾಡಿಸಿ ರಸ್ತೆ ಕಾಮಗಾರಿ ಕೈಗೆತ್ತಿ ಕೊಳ್ಳಲಾಗುವುದು ಎಂದು ಭರವಸೆ ನೀಡಿ ದರು. ಪ್ರತಿಭಟನೆಯಲ್ಲಿ ತಾಲೂಕು ಸಿಪಿಎಂ ಕಾರ್ಯದರ್ಶಿ ಚನ್ನರಾಯಪ್ಪ, ತಾಪಂ ಸದಸ್ಯ ಶ್ರೀರಾಮನಾಯ್ಕ ,ಡಿವೈಎಫ್‌ಐ ಅಧ್ಯಕ್ಷ ಬಿ.ಎಂ.ಹೇಮಚಂದ್ರ ಮತ್ತು ಗ್ರಾಮಸ್ಥರಾದ ಶಂಕರನಾಯ್ಕ , ಆದಿನಾರಾಯಣ ನಾಯ್ಕ, ಶಿವಾನಂದರೆಡ್ಡಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಹೊಸ ಸೇರ್ಪಡೆ
Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ
Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್
Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.