ಕೆಂಪೇಗೌಡರ ದೂರದೃಷ್ಟಿ ಮಾರ್ಗದರ್ಶನ: ಶಾಸಕ
Team Udayavani, Jun 28, 2019, 8:07 AM IST
ಹಾಸನ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಏರ್ಪಡಿಸಿದ್ದ ನಾಡಪ್ರಭು ಕೆಂಪೇಗೌಡರ ಜಯಂತಿ ಅಂಗವಾಗಿ ಏರ್ಪಡಿಸಿದ್ದ ಮೆರವಣಿಗೆಗೆ ಶಾಸಕ ಪ್ರೀತಂ ಜೆ.ಗೌಡ ಚಾಲನೆ ನೀಡಿದರು. ಜಿಲ್ಲಾಧಿಕಾರಿ ಅಕ್ರಂಪಾಷಾ ಉಪಸ್ಥಿತರಿದ್ದರು.
ಹಾಸನ: ಶತಮಾನಗಳ ಹಿಂದೆಯೇ ಪರಿಸರ ಉಳಿಸುವ ನಿಟ್ಟಿನಲ್ಲಿ ಕೆರೆಗಳನ್ನು ನಿರ್ಮಿಸಿದ ನಾಡಪ್ರಭು ಕೆಂಪೇಗೌಡ ಅವರು ನಾಡಿಗೆ ಬಹುಮುಖ್ಯ ಕೊಡುಗೆ ನೀಡಿದ್ದಾರೆ. ಕೆಂಪೇಗೌಡರ ಆದರ್ಶಗಳನ್ನು ಇಂದಿನ ಆಡಳಿತಗಾರರು ಮೈಗೂಡಿಕೊಳ್ಳುವ ಅಗತ್ಯವಿದೆ ಎಂದು ಶಾಸಕ ಪ್ರೀತಂ ಜೆ.ಗೌಡ ಅಭಿಪ್ರಾಯಪಟ್ಟರು.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕಲಾಭವನದಲ್ಲಿ ಆಯೋಜಿಸಿದ್ದ ನಾಡ ಪ್ರಭು ಕೆಂಪೇಗೌಡ ಜಯಂತಿಯ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಆಧುನೀಕರಣ, ನಗರೀಕರಣಕ್ಕೆ ಮಾರು ಹೋಗಿ ಕೆಂಪೇಗೌಡರ ಕಲ್ಪನೆಯನ್ನು ಅಳಿಸುವ ನಿಟ್ಟಿನಲ್ಲಿ ಮನುಷ್ಯ ಪರಿಸರ ನಾಶಕ್ಕೆ ಮುಂದಾಗುತ್ತಿದ್ದಾನೆ ಎಂದರು.
ಕೆರೆಗಳ ಪುನಶ್ಚೇತನ: ಶತ ಮಾನಗಳ ಹಿಂದೆ ಅನೇಕ ಕೆರೆಗಳನ್ನು ಪುನಶ್ಚೇತನ ಗೊಳಿಸುವ ಮೂಲಕ ಪರಿಸರ ಉಳಿಸುವ ನಿಟ್ಟಿನಲ್ಲಿ ನಾಡಪ್ರಭು ಕೆಂಪೇಗೌಡರು ಶ್ರಮಿಸಿದ್ದರು. ಕೆಂಪೆಧೀ ಗೌಡರ ಜಯಂತಿಯು ಕೇವಲ ಆಚರಣೆಯಾಗಬಾರದು. ಅವರ ಆದರ್ಶಗಳನ್ನು ಪಾಲಿಸುವ ಮೂಲಕ ಪರಿಸರ ಮುಖೀ ಹಾಗೂ ಸಮಾಜಮುಖೀ ಕೆಲಸಗಳನ್ನು ಮಾಡಲು ಪ್ರತಿಯೊಬ್ಬರೂ ಶ್ರಮಿಸಬೇಕು ಎಂದರು.
ಬೆಂಗಳೂರಿನ ನಿರ್ಮಾತೃ: ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬಿ.ಎಸ್.ಶ್ವೇತಾ ಮಾತನಾಡಿ, ನವೀನ ಮಾದರಿಯಲ್ಲಿ ಬೆಂಗಳೂರನ್ನು ನಿರ್ಮಿಸಿದ ಕೀರ್ತಿ ನಾಡಪ್ರಭು ಕೆಂಪೇಗೌಡರಿಗೆ ಸಲ್ಲುತ್ತದೆ. ಕೆಂಪೇಗೌಡರು ಕೆರೆ, ಕಲ್ಯಾಣಿ ಸೇರಿದಂತೆ ಅನೇಕ ಜಲ ಮೂಲಗಳನ್ನು ಉಳಿಸುವ ಮೂಲಕ ನಾಡಿಗೆ ಉತ್ತಮ ಕೊಡುಗೆ ನೀಡಿದ್ದಾರೆ ಎಂದು ಸ್ಮರಿಸಿದರು.
ಯೋಜನಾಬದ್ಧ ನಗರ ನಿರ್ಮಾಣ: ಜಿಲ್ಲಾಧಿಕಾರಿ ಅಕ್ರಂಪಾಷಾ ಮಾತನಾಡಿ, ಕೆಂಪೇಗೌಡರು ಶತಮಾನಗಳ ಹಿಂದೆಯೇ ಬೆಂಗಳೂರನ್ನು ಯೋಜನಾಬದ್ಧವಾಗಿ ನಿರ್ಮಿಸಿ ಇಡೀ ದೇಶಕ್ಕೆ ಮಾದರಿಯಾಗಿದ್ದಾರೆ ಎಂದು ಬಣ್ಣಿಸಿದರು.
ನಾಡ ಪ್ರಭು ಕೆಂಪೇಗೌಡ ಅವರ ಜೀವನ ವೃತ್ತಾಂತದ ಬಗ್ಗೆ ವಿಶೇಷ ಉಪನ್ಯಾಸ ನೀಡಿದ ಮೈಸೂರು ವಿಶ್ವ ವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಮಳಲಿ ವಸಂತ್ ಕುಮಾರ್ ಅವರು, ಕೆಂಪೇಗೌಡರ ಪೂರ್ವಿಕ ರಣಭೈರೇಗೌಡ ಕಂಚಿಯವರು. ಆಗ ಕಂಚಿಯೂ ಕನ್ನಡ ನಾಡಾಗಿತ್ತು. ಚೋಳರ ಆಳ್ವಿಕೆಯಿಂದ ಬೇಸತ್ತು ಅಲ್ಲಿಂದ ಬೆಂಗಳೂರಿಗೆ ಬಂದು ಯಲಹಂಕದಲ್ಲಿ ನೆಲಸಿದ ರಣಭೈರೇಗೌಡರ ಪುತ್ರಲ್ಲೊಬ್ಬರಾದ ಕೆಂಪನಂಜೇಗೌಡ ಅವರ ಮಗ ಕೆಂಪೇಗೌಡ ಎಂದು ತಿಳಿಸಿದರು.
ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ.ರಾಜೇಗೌಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್‌ಗೌಡ ಅವರು ಕೆಂಪೇ ಗೌಡರ ಕುರಿತು ಮಾತನಾಡಿದರು. ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಜಿ.ಎಲ್. ಮುದ್ದೇಗೌಡ,ಅಪರ ಜಿಲ್ಲಾಧಿಕಾರಿ ಎಂ.ಎಲ್ ವೈಶಾಲಿ, ಜಿಲ್ಲಾ ಕಸಾಪ ಅಧ್ಯಕ್ಷ ಮಂಜೇಗೌಡ, ಹಾಸನ ತಾಲೂಕು ಪಂಚಾಯಿತಿ ಅಧ್ಯಕ್ಷ ನಿಂಗೇಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಶಿವಲಿಂಗಪ್ಪ ಎನ್. ಕುಂಬಾರ, ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ವೇತಾ ಅವರು ನಾಡಪ್ರಭು ಕೆಂಪೇಗೌಡರ ಕುರಿತ ಪುಸ್ತಕ ಬಿಡುಗಡೆ ಮಾಡಿ ದರು. ಹಾಸನ ಜಿಲ್ಲಾ ನಾಡ ಪ್ರಭು ಕೆಂಪೇಗೌಡ ರಂಗಭೂಮಿ ಕಲಾವಿದರಿಂದ ಪ್ರದರ್ಶಿತವಾದ ಪಾಂಡವರ ಸಂಗ್ರಾಮ ಎಂಬ ಪೌರಾಣಿಕ ನಾಟಕ ಪ್ರೇಕ್ಷಕರ ಮನ ರಂಜಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಹೊಸ ಸೇರ್ಪಡೆ
Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’
FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.