ಕಲುಷಿತ ನೀರು ಪೂರೈಸಿದರೆ ಕ್ರಮ ಕೈಗೊಳ್ಳಿ

ತಹಶೀಲ್ದಾರ್‌ ವಿಶ್ವನಾಥ್‌ಗೆ ಶಾಸಕ ಎಚ್.ಡಿ.ರಂಗನಾಥ್‌ ಸೂಚನೆ

Team Udayavani, Jun 28, 2019, 9:23 AM IST

tk-tdy-2..

ಕುಣಿಗಲ್ ತಾಲೂಕಿನ ಅಮೃತೂರಿನಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ರೈತನಿಗೆ ಪೌತಿ ಖಾತೆ ವರ್ಗಾವಣೆಯ ಪ್ರಮಾಣ ಪತ್ರವನ್ನು ಶಾಸಕ ಡಾ.ಎಚ್.ಡಿ.ರಂಗನಾಥ್‌ ನೀಡಿದರು.

ಕುಣಿಗಲ್: ಕಲುಷಿತ ನೀರು ಪೂರೈಸುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ತಹಶೀಲ್ದಾರ್‌ ವಿ.ಆರ್‌.ವಿಶ್ವನಾಥ್‌ಗೆ ಶಾಸಕ ಡಾ.ಎಚ್.ಡಿ.ರಂಗನಾಥ್‌ ಸೂಚಿಸಿದರು. ಅಮೃತೂರು ಸರ್ಕಾರಿ ಶಾಲಾ ಆವರಣದಲ್ಲಿ ಗುರುವಾರ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅಮೃತೂರು ಗ್ರಾಮದ ಎರಡು, ಮೂರು ಹಾಗೂ ನಾಲ್ಕನೇ ಬ್ಲಾಕ್‌ ಕೆಲ ಬಡಾವಣೆಗಳಲ್ಲಿ ಕಳೆದ ಆರು ತಿಂಗಳಿನಿಂದ ಟ್ಯಾಂಕರ್‌ ನೀರು ಸರಬರಾಜು ಮಾಡ ಲಾಗುತ್ತಿದೆ. ನೀರು ಯೋಗ್ಯವಾಗಿಲ್ಲ ಎಂದು ಶಾಸಕರಿಗೆ ದೂರು ಹೇಳಿದರು, ಕೆಂಡಾಮಂಡಲರಾದ ಶಾಸಕ, ಶಾಸಕರ ಅನುದಾನದಲ್ಲಿ ಹೊಸದಾಗಿ ಐದು ಕೊಳವೆ ಬಾವಿ ಕೊರೆಸಲಾಗಿದೆ ಆದರೂ ಶುದ್ಧ ನೀರು ಏಕೆ ಪೂರೈಸುತ್ತಿಲ್ಲ ಎಂದು ಪಿಡಿಒ ಲತಾ ಅವರನ್ನು ತರಾಟೆ ತೆಗೆದುಕೊಂಡರು. 5 ಹೊಸ ಕೊಳವೆ ಬಾವಿಗಳ ಪೈಕಿ ಎರಡು ವಿಫ‌ಲ ವಾಗಿದೆ. ಒಂದು ರೀಬೋರ್‌ ಮಾಡ ಲಾಗಿದೆ. ಉಳಿದ ಎರಡು ಕೊಳವೆ ಬಾವಿಗಳಲ್ಲಿ ಸ್ವಲ್ಪ ಪ್ರಮಾಣದಲ್ಲಿ ನೀರು ಬರುತ್ತಿದೆ. ಹಾಗಾಗಿ ಟ್ಯಾಕರ್‌ ನೀರು ಸರಬರಾಜು ಮಾಡಲಾಗುತ್ತದೆ ಎಂದು ಪಿಡಿಒ ತಿಳಿಸಿದರು. ನೀರಿನ ಗುಣಮಟ್ಟ ಪರಿಶೀಲಿಸಿದ್ದೀರ ಎಂದು ಕೇಳಿದ ಪ್ರಶ್ನೆಗೆ ಪಿಡಿಒ ನಿರುತ್ತರರಾದರು.

ಕೆರೆಗೆ ನೀರು ತುಂಬಿಸಿ: ಮಾರ್ಕೋನಹಳ್ಳಿ ಜಲಾಶಯ ದಿಂದ ಅಮೃತೂರು ಭಾಗದ ಸಾಲು ಕೆರೆಗಳಿಗೆ ನೀರು ಹರಿಸಿದರೆ, ಅಂರ್ತಜಲ ಮಟ್ಟ ಸುಧಾರಣೆಯಾಗಿ ಕೊಳವೆಬಾವಿಗಳಿಗೆ ನೀರು ಬರುತ್ತದೆ ಎಂದು ಗ್ರಾಮಸ್ಥರು ತಿಳಿಸಿದರು. ಗ್ರಾಮಸ್ಥರ ಸಲಹೆ ಸ್ವಾಗತಿಸಿದ ಶಾಸಕರು ಈ ಬಗ್ಗೆ ಕ್ರಮಕೈಗೊಳ್ಳಲಾಗುವುದೆಂದರು.

ಅಕ್ಕಿ ತೂಕದಲ್ಲಿ ಮೋಸ: ನ್ಯಾಯ ಬೆಲೆ ಅಂಗಡಿಯವರು ಅಕ್ಕಿ ಕಡಿಮೆ ಬರುತ್ತಿದೆ ಎಂದು ಆರು ಕೆ.ಜಿ ಮಾತ್ರ ಕೊಡುತ್ತಿದ್ದಾರೆ. ಅಲ್ಲದೆ ಕೆ.ಜಿ ತೊಗರಿಬೆಳೆಗೆ 38 ರೂ.ಇದ್ದರೆ 50 ರೂ ತೆಗೆದುಕೊಳ್ಳುತ್ತಿದ್ದಾರೆ ಎಂದು ನಾಗರಿಕರು ದೂರಿದರು.

ಅಕ್ರಮ ಎಸಗುವ ಅಂಗಡಿಗಳ ವಿರುದ್ಧ ಕ್ರಮ ಕೈಗೊಳ್ಳಲು ಆಹಾರ ಇನ್ಸ್‌ಸ್ಪೆಕ್ಟರ್‌ಗೆ ಸೂಚಿಸಿದರು. ತಹಶೀಲ್ದಾರ್‌ ವಿ.ಆರ್‌.ವಿಶ್ವನಾಥ್‌ ಮಾತನಾಡಿ, ತಪ್ಪಿಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಭರವಸೆ ನೀಡಿದರು. ಜು. 1ರಿಂದ ಕಂದಾಯ ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ ಕಾರ್ಯಕ್ರಮ ಹಮ್ಮಿಕೊಳ್ಳ ಲಾಗಿದೆ ಎಂದು ಶಾಸಕರು ತಿಳಿಸಿದರು.

ತರಾಟೆ: ಎಚ್ವಿಡಿಎಸ್‌ ಯೋಜನಡಿಯಲ್ಲಿ ರೈತರ ಪಂಪ್‌ ಸೆಟ್‌ಗಳಿಗೆ ವಿದ್ಯುತ್‌ ಪರಿವರ್ತಕ ಅಳವಡಿಸಿಲು 500 ಬಾರಿ ಕರೆ ಮಾಡಿದ್ದೇನೆ ಎಂದು ಬೆಸ್ಕಾಂ ಎಸ್‌ಒ ನವೀನ್‌ಕುಮಾರ್‌ ಅವರನ್ನು ಶಾಸಕರು ತರಾಟೆ ತೆಗೆದು ಕೊಂಡರು. ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಕಲ್ಪಿಸಿಕೊಂಡಿರುವ ರೈತರು ಅನ್ಯಾಯವಾಗಿ ದಂಡ ಕಟ್ಟಬೇಕಾಗುತ್ತದೆ. ಕೂಡಲೇ ಸಕ್ರಮ ಮಾಡಿಕೊಡಿ ಎಂದು ಸಲಹೆ ನೀಡಿದರು. ಇಒ ಶಿವರಾಜಯ್ಯ, ಗ್ರಾಪಂ ಅಧ್ಯಕ್ಷ ವೆಂಕಟರಾಮು, ಉಪಾಧ್ಯಕ್ಷೆ ಸೈದಾಬೇಗಂ, ಸದಸ್ಯರಾದ ಮರಿಯಪ್ಪ, ಪಾರ್ವತಮ್ಮ, ಭರತ್‌, ಸೋಮಶೇಖರ್‌, ತಾಲೂಕು ಪಂಚಾಯತಿ ಸದಸ್ಯೆ ನಾಗಮ್ಮ, ಮುಖಂಡ ರಾದ ಹರೀಶ್‌ಗೌಡ, ದಿವಾಕರ್‌ಗೌಡ, ಗೂಳಿಗೌಡ, ಬೋರೇಗೌಡ ಇದ್ದರು.

ಟಾಪ್ ನ್ಯೂಸ್

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-kunigal

Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ

14-kunigal

Kunigal: ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಐಟಿ ಉದ್ಯೋಗಿ ದುರ್ಮರಣ

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

koratagere

Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!

Accident-logo

Kunigal: ಬೈಕ್, ಕ್ಯಾಂಟರ್ ಮುಖಾಮುಖಿ ಢಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು 

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ

Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-maralu

Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ

1-swami-sm-bg

Udupi; ಸ್ವಯಂ ರಕ್ಷಣೆಗಾಗಿ ಕರಾಟೆ ಕಲೆಯ ಅಭ್ಯಾಸ ಇಂದಿನ ಅಗತ್ಯತೆ: ಪುತ್ತಿಗೆ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.