ಅಧಿಕಾರ ಭಾಗ್ಯವಿಲ್ಲದೇ ಅಭಿವೃದ್ಧಿ ಸೊನ್ನೆ
•ವರ್ಷವಾದರೂ ಪ್ರಕಟವಾಗಿಲ್ಲ ಮೀಸಲಾತಿ•ಚಿಕ್ಕೋಡಿ-ನಿಪ್ಪಾಣಿ-ಸದಲಗಾದಲ್ಲಿ ಅಧಿಕಾರಿಗಳದ್ದೇ ರಾಜ್ಯ
Team Udayavani, Jun 28, 2019, 10:16 AM IST
ಚಿಕ್ಕೋಡಿ: ಚಿಕ್ಕೋಡಿ ಪುರಸಭೆ ಕಾರ್ಯಾಲಯ.
ಚಿಕ್ಕೋಡಿ: ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಗಿದು ಒಂದು ವರ್ಷ ಸಮೀಪಿಸುತ್ತಾ ಬಂದರೂ ಅಧ್ಯಕ್ಷ-ಉಪಾಧ್ಯಕ್ಷ ಆಯ್ಕೆಗೆ ಕೋರ್ಟ್ ತಡೆಯಾಜ್ಞೆ ಹೊರಡಿಸಿದ್ದರಿಂದ ಮೀಸಲಾತಿ ಪ್ರಕಟವಾಗದೇ ಚುನಾಯಿತ ಸದಸ್ಯರಿಗೆ ಅಧಿಕಾರ ಭಾಗ್ಯ ಇಲ್ಲದಂತಾಗಿದೆ.
ಮೊದಲ ಹಂತದಲ್ಲಿ ಜರುಗಿದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಚಿಕ್ಕೋಡಿ ಪುರಸಭೆ, ನಿಪ್ಪಾಣಿ ನಗರಸಭೆ ಮತ್ತು ಸದಲಗಾ ಪುರಸಭೆಗಳಿಗೆ ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಚುನಾವಣೆ ನಡೆದಿವೆ. ಆದರೂ ಇಲ್ಲಿಯವರಿಗೆ ಚುನಾಯಿತ ಸದಸ್ಯರಿಗೆ ಅಧಿಕಾರ ಭಾಗ್ಯ ಸಿಕ್ಕಿಲ್ಲ, ಹೀಗಾಗಿ ಅಭಿವೃದ್ಧಿ ಕಾರ್ಯಗಳು ಮಂದಗತಿಯಲ್ಲಿ ಸಾಗಿದ್ದು, ಸಾರ್ವಜನಿಕರು ನಿತ್ಯ ಪರದಾಡುತ್ತಿದ್ದಾರೆ.
ರಾಜ್ಯದ ನೂರಕ್ಕೂ ಹೆಚ್ಚಿನ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿಗಳಿಗೆ ಮೊದಲ ಹಂತದಲ್ಲಿ ಚುನಾವಣೆ ಜರುಗಿದೆ. ಚುನಾವಣೆ ಫಲಿತಾಂಶ ಹೊರಬಿದ್ದ ದಿನವೇ ಸರ್ಕಾರ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿ ಪ್ರಕಟ ಮಾಡಿದೆ. ಆದರೆ ಕೆಲವರು ಮೀಸಲಾತಿ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರಿಂದ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿಗೆ ಕೋರ್ಟ್ ತಡೆಯಾಜ್ಞೆ ನೀಡಿತ್ತು. ನಂತರ ಸರ್ಕಾರ ಮರುಪರಿಶೀಲನೆ ಮೀಸಲಾತಿ ಪ್ರಕಟಿಸಿ ಆದೇಶ ಹೊರಡಿಸಿತು. ಇದಕ್ಕೂ ಸಹ ಎರಡನೆ ಬಾರಿಗೆ ಕೋರ್ಟ್ ತಡೆಯಾಜ್ಞೆ ಹೊರಡಿಸಿದ್ದರಿಂದ ಮೀಸಲಾತಿ ಪ್ರಕಟಣೆೆ ವಿಳಂಬವಾಗಿ ಪ್ರಕಟಗೊಂಡಿಲ್ಲ. ಹೀಗಾಗಿ ಚುನಾವಣೆ ಮುಗಿದು 11 ತಿಂಗಳು ಕಳೆದರೂ ಚುನಾವಣೆಯಲ್ಲಿ ಆಯ್ಕೆಯಾದ ಸದಸ್ಯರಿಗೆ ಮಾತ್ರ ಅಧಿಕಾರ ಸಿಕ್ಕಿಲ್ಲ, ತಮ್ಮ ವಾರ್ಡ್‌ಗಳಲ್ಲಿ ಆಗಬೇಕಾದ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ, ಮತದಾರ ಮಾತ್ರ ಚುನಾಯಿತ ಸದಸ್ಯರ ಮೇಲೆ ಮುನಿಸಿಕೊಳ್ಳುವುದು ಸರ್ವೇ ಸಾಮಾನ್ಯವಾಗಿದೆ.
•ಮಹಾದೇವ ಪೂಜೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.