ನರೇಗಾದಡಿ ಜಲಾಮೃತ ಯೋಜನೆ ಆರಂಭಿಸಲು ಒತ್ತಾಯ
ನೀರಿನ ಸಮಸ್ಯೆಗೆ ಪರಿಹಾರ ಕಲ್ಪಿಸಲು ಆಗ್ರಹ
Team Udayavani, Jun 28, 2019, 10:35 AM IST
ಬೈಲಹೊಂಗಲ: ದೊಡವಾಡ ಗ್ರಾಮ ಪಂಚಾಯತಿಯಲ್ಲಿ ಸಾಮಾನ್ಯ ಸಭೆ ಜರುಗಿತು.
ಬೈಲಹೊಂಗಲ: ರೈತರಿಗೆ ನರೇಗಾದಡಿ ಕೇವಲ ಕೆರೆ ಹೂಳೆತ್ತುವ ಕಾಮಗಾರಿಗಳನ್ನು ಕೊಡುವ ಬದಲು ಜಲಾಮೃತ ಯೋಜನೆಯಡಿ ರೈತರು ತಮ್ಮ ಜಮೀನು ಹಾಗೂ ಸ್ವಂತ ಜಾಗದಲ್ಲಿ ವಿವಿಧ ಕೆಲಸಗಳನ್ನು ಮಾಡಿಕೊಳ್ಳಲು ಅನುಕೂಲ ಮಾಡಿಕೊಡಬೇಕು ಎಂದು ತಾಪಂ ಸದಸ್ಯ ಸಂಗಯ್ಯ ದಾಭಿಮಠ ಆಗ್ರಹಿಸಿದರು.
ತಾಲೂಕಿನ ದೊಡವಾಡ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಗುರುವಾರ ಜರುಗಿದ ಗ್ರಾಪಂ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಇದರಿಂದ ಕಾಮಗಾರಿ ಮತ್ತು ಯೋಜನೆ ಪರಿಪೂರ್ಣವಾಗುತ್ತವೆ. ಗ್ರಾಮದಲ್ಲಿ ಈ ಯೋಜನೆ ಅನುಷ್ಠಾನದ ಕುರಿತಾಗಿ ಈಗಾಗಲೇ ತಾಪಂ ಇಒ ಹಾಗೂ ಜಿಪಂ ಅಧಿಕಾರಿಗಳ ಗಮನಕ್ಕೆ ತಂದಿರುವುದಾಗಿ ಸಭೆಯಲ್ಲಿ ತಿಳಿಸಿದರು. ಎಲ್ಲ ಸದಸ್ಯರು ಇದಕ್ಕೆ ಸಹಮತ ವ್ಯಕ್ತ ಪಡಿಸಿದರು.
ವಾರ್ಡ್ ಸಂಖ್ಯೆ 5ರ ಸದಸ್ಯ ಯಮನಪ್ಪ ಅಟಗಲ್ಲ ಮಾತನಾಡಿ, ತಮ್ಮ ವಾರ್ಡಿನ ನಿವಾಸಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಶೀಘ್ರ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿದರು. ಶಿಥಿಲಾವಸ್ಥೆಯಲ್ಲಿರುವ ಕಟ್ಟಡ ದುರಸ್ತಿ ಸೇರಿದಂತೆ ನಾನಾ ಸಮಸ್ಯೆಗಳ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರು ಪಿಡಿಒ ಹಾಗೂ ಸದಸ್ಯರ ಗಮನಕ್ಕೆ ತಂದರು. ಗ್ರಾಮದಲ್ಲಿ ಹೆಚ್ಚುತ್ತಿರುವ ಡೆಂಘೀ ಜ್ವರ ಪ್ರಕರಣಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ ಸದಸ್ಯರು ವಾರಕ್ಕೊಮ್ಮೆ ಫಾಗಿಂಗ್ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕೆಂದು ತಿಳಿಸಿದರು. ಮುಖಂಡ ಮುದಕಪ್ಪ ಮಾಡಲಗಿ ಮಾತನಾಡಿ, ತಾಲೂಕಿನಲ್ಲೇ ಹೆಚ್ಚಿನ ವಿದ್ಯುತ್ ಬಿಲ್ ಪಾವತಿಸುವ ಗ್ರಾಮಕ್ಕೆ ವಿದ್ಯುತ್ ಪೂರೈಕೆಯಲ್ಲಿ ಆಗುತ್ತಿರುವ ತೊಂದರೆ ನಿವಾರಣೆಗೆ ಪ್ರತ್ಯೇಕ ಸರಬರಾಜು ವ್ಯವಸ್ಥೆ ಮಾಡಿಕೊಡಲು ಹೆಸ್ಕಾಂ ಮೇಲಧಿಕಾರಿಗಳ ಗಮನಕ್ಕೆ ತಂದು ಶೀಘ್ರ ಕೆಲಸ ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು.
ಇದೇ ವೇಳೆ ಬಸವ ಆವಾಸ ವಸತಿ ಯೋಜನೆಯಡಿ ಮನೆ ನಿರ್ಮಿಸಿಕೊಳ್ಳಲು ಆಯ್ಕೆಯಾದ 20 ಫಲಾನುಭವಿಗಳ ಹೆಸರನ್ನು ಸಭೆಯಲ್ಲಿ ಘೋಷಿಸಲಾಯಿತು.
ಗ್ರಾಪಂ ಅಧ್ಯಕ್ಷೆ ಸಕ್ಕೂಬಾಯಿ ಕಾಳಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಗಂಗಪ್ಪ ಕಂಬಾರ, ನೋಡಲ್ ಅಧಿಕಾರಿ ಗಾಯತ್ರಿ ಲೋಕನ್ನವರ ವೇದಿಕೆ ಮೇಲಿದ್ದರು. ಪಿಡಿಓ ಎಸ್.ಐ. ದಾನಪ್ಪನವರ ನಿರೂಪಿಸಿ ವಂದಿಸಿದರು. ಗ್ರಾಪಂನ ಎಲ್ಲ ಸದಸ್ಯರು, ವಿವಿಧ ಇಲಾಖೆ ಸಿಬ್ಬಂದಿ ಸೇರಿದಂತೆ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.