ಎಲೆಕ್ಟ್ರಿಕ್ ವಾಹನ ಖರೀದಿಗೆ ಸಬ್ಸಿಡಿ ಅಗತ್ಯ
Team Udayavani, Jun 28, 2019, 12:52 PM IST
ಬೆಂಗಳೂರು: ನಗರಗಳಲ್ಲಿ ಎಲೆಕ್ಟ್ರಿಕ್ ವಾಹನ ಬಳಕೆ ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಸಬ್ಸಿಡಿ ನೀಡಬೇಕು ಎಂದು ಇನ್ಫಿನಿಟಿ ಎಕ್ಸ್‌ಪೊಸಿಷನ್ ಸಂಸ್ಥೆಯ ಜಾರ್ಜ್ ಜಾನ್ಸ್ ನ್ ಅಭಿಪ್ರಾಯಪಟ್ಟರು.
ನಿಮಾನ್ಸ್‌ನ ಸಭಾಂಗಣದಲ್ಲಿ ನಡೆದ ವಿದ್ಯುತ್ ಚಾಲಿತ ವಾಹನಗಳ ಚಾರ್ಜಿಂಗ್ ಸಮಸ್ಯೆ ಕುರಿತ ವಿಚಾರ ಸಂಕಿರಣ ಮತ್ತು ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಎಲೆಕ್ಟ್ರಿಕ್ ವಾಹನ ಬಳಕೆಗೆ ಪ್ರೊತ್ಸಾಹ ಅಗತ್ಯವಿದೆ. ಕೇಂದ್ರ ಸರ್ಕಾರ ಸಬ್ಸಿಡಿ ನೀಡಿದಾಗ ಮಾತ್ರ ಸಾರ್ವಜನಿಕರು ಪೆಟ್ರೋಲ್ ವಾಹನ ಬಿಟ್ಟು ಎಲೆಕ್ಟ್ರಿಕ್ ವಾಹನ ಕಡೆ ಮುಖ ಮಾಡುತ್ತಾರೆ ಎಂದು ಹೇಳಿದರು.
ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಫೇಮ್-2 ಯೋಜನೆಗೆ 10 ಸಾವಿರ ಕೋಟಿ ರೂ. ಘೋಷಿಸಿದೆ. ಎಲೆಕ್ಟ್ರಿಕ್ ಬಸ್ಸುಗಳು, ತ್ರಿಚಕ್ರ ವಾಹನಗಳು ಮತ್ತು ನಾಲ್ಕು ಚಕ್ರಗಳ ವಾಹನಗಳನ್ನು ವಾಣಿಜ್ಯ ಉದ್ದೇಶಗಳಿಗಾಗಿ ಬಳಸಲು ಸರ್ಕಾರ ಪ್ರೋತ್ಸಾಹ ನೀಡಲಿದೆ. ಎಲೆಕ್ಟ್ರಿಕ್ ವಾಹನಗಳಿಗೆ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲು 1 ಸಾವಿರ ಕೋಟಿ ರೂ. ನಿಗದಿಪಡಿಸಲಾಗಿದೆ. ನಗರಗಳಲ್ಲಿ ಪ್ರತಿ ಮೂರು ಕಿ.ಮೀ ಮತ್ತು ಹೆದ್ದಾರಿಗಳ ಎರಡೂ ಬದಿಗಳಲ್ಲಿ ಪ್ರತಿ 25 ಕಿ.ಮೀ.ಗೆ ಒಂದು ಚಾರ್ಜಿಂಗ್ ಸ್ಟೇಷನ್ ಸ್ಥಾಪಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಪ್ರದರ್ಶನದಲ್ಲಿ ವೆಲ್ಲೂರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸ್ಕೂಲ್ ಆಫ್ ಅಡ್ವಾನ್ಸ್‌ಡ್ ಸ್ಟಡೀಸ್‌ನ ಡಾ.ಸಿ.ಕೆ ಸುಬ್ರಹ್ಮಣಿಯಂ, ಪಿಸಿಆರ್‌ಎ ಉಪನಿರ್ದೇಶಕ ಚಂದ್ರಮೋಹನ್, ಐಪಿಐ ವಾಣಿಜ್ಯ ವಿಭಾಗದ ಮುಖ್ಯಸ್ಥ ಕೆ.ಶಿವಕುಮಾರ್, ಜಾಕ್ಸನ್ ಎನರ್ಜಿ ಸಂಸ್ಥೆಯ ಪ್ರಶಾಂತ್ ಕುಮಾರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.