ಗಣತಿಯಲ್ಲಿ ನಿಖರ ಅಂಕಿ-ಅಂಶ ಸಂಗ್ರಹಿಸಿ

ಜಿಲ್ಲೆಯ ಪ್ರತಿ ಹಳ್ಳಿಯಲ್ಲಿ ಒಬ್ಬ ಗಣತಿದಾರ ಇರುವಂತೆ ನೋಡಿಕೊಳ್ಳಿ: ಕೂರ್ಮಾರಾವ್‌

Team Udayavani, Jun 28, 2019, 1:13 PM IST

28-June-21

ಯಾದಗಿರಿ: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ 7ನೇ ಆರ್ಥಿಕ ಗಣತಿಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌ ಮಾತನಾಡಿದರು.

ಯಾದಗಿರಿ: ಜಿಲ್ಲೆಯಲ್ಲಿ ಜೂನ್‌ ತಿಂಗಳಿಂದ ಸೆಪ್ಟೆಂಬರ್‌ ಅಂತ್ಯದವರೆಗೆ ಕೈಗೊಳ್ಳುತ್ತಿರುವ 7ನೇ ಆರ್ಥಿಕ ಗಣತಿಯಲ್ಲಿ ಪ್ರತಿ ಮನೆ, ಉದ್ಯಮ/ಘಟಕಗಳಿಗೆ ಭೇಟಿ ನೀಡಿ, ನಿಖರ ಅಂಕಿ-ಅಂಶ ಸಂಗ್ರಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ 7ನೇ ಆರ್ಥಿಕ ಗಣತಿಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಏಳನೆಯ ಆರ್ಥಿಕ ಗಣತಿಯು ಕಾಮನ್‌ ಸರ್ವೀಸ್‌ ಸೆಂಟರ್‌, ಇ-ಗವರ್ನನ್ಸ್‌ ಸರ್ವೀಸ್‌ ಇಂಡಿಯಾ ಲಿಮಿಟೆಡ್‌ ಹಾಗೂ ನ್ಯಾಷನಲ್ ಸ್ಯಾಂಪಲ್ ಸರ್ವೇ ಆರ್ಗನೈಸೇಷನ್‌ ಅವರ ಜವಾಬ್ದಾರಿ ಹಾಗೂ ನೇತೃತ್ವದಲ್ಲಿ ನಡೆಯಲಿದೆ. ಈ ಬಾರಿ ಮೊಬೈಲ್ ಆ್ಯಪ್‌ ಮೂಲಕ ಗಣತಿ ನಡೆಸಲಾಗುತ್ತಿದೆ. ಕಳೆದ ಬಾರಿಯ ಗಣತಿಗೆ ಒಂದು ತಿಂಗಳು ಮಾತ್ರ ಅವಧಿ ನಿಗದಿಪಡಿಸಲಾಗಿತ್ತು. ಈ ಬಾರಿ ಮೂರು ತಿಂಗಳು ಕಾಲಾವಕಾಶ ಇದೆ. ಈ ಅವಧಿಯಲ್ಲಿ ವಿವಿಧ ಇಲಾಖೆಗಳ ಪರಸ್ಪರ ಸಹಕಾರದೊಂದಿಗೆ ಗಣತಿಯನ್ನು ಯಶಸ್ವಿಗೊಳಿಸಬೇಕು ಎಂದು ಸೂಚಿಸಿದರು.

ಆರನೆಯ ಆರ್ಥಿಕ ಗಣತಿ 2012-13ರಲ್ಲಿ ನಡೆದಿದ್ದು, ಜಿಲ್ಲೆಯಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶ ಸೇರಿದಂತೆ ಒಟ್ಟು 2,114 ಬ್ಲಾಕ್‌ (ಅಂದಾಜು 150 ಮನೆಗಳಿಗೆ ಒಂದು ಬ್ಲಾಕ್‌) ಗಳನ್ನು ರಚನೆ ಮಾಡಲಾಗಿತ್ತು. 585 ಗಣತಿದಾರರಿಂದ 2.61 ಲಕ್ಷ ಕಟ್ಟಡಗಳನ್ನು ಭೇಟಿ ಮಾಡಿ ಮಾಹಿತಿ ಸಂಗ್ರಹಿಸಲಾಗಿತ್ತು. ಇದರ ಆಧಾರದ ಮೇಲೆ ನಗರ ಪ್ರದೇಶದಲ್ಲಿ ನಗರಸಭೆ ಪೌರಾಯುಕ್ತರು, ಗ್ರಾಮೀಣ ಪ್ರದೇಶದಲ್ಲಿ ತಹಶೀಲ್ದಾರ್‌ ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳ ಸಹಯೋಗದಲ್ಲಿ ಬ್ಲಾಕ್‌ಗಳನ್ನು ಗುರುತಿಸಬೇಕು ಎಂದು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಸುನೀಲ್ ಬಿಸ್ವಾಸ್‌ ಅವರಿಗೆ ಸೂಚಿಸಿದರು.

ಈ ಬಾರಿ ಶೇ. 10ರಷ್ಟು ಬ್ಲಾಕ್‌ಗಳು ಹೆಚ್ಚಾಗಬಹುದು. ಪ್ರಸಕ್ತ ಗಣತಿಯ ಅವಧಿ ಹೆಚ್ಚು ಇರುವ ಹಿನ್ನೆಲೆಯಲ್ಲಿ 500 ಗಣತಿದಾರರನ್ನು ಜೂನ್‌ 30ರೊಳಗೆ ನೇಮಕ ಮಾಡಬೇಕು. ಇದರಲ್ಲಿ ಜಿಲ್ಲೆಯ ಪ್ರತಿ ಹಳ್ಳಿಯಲ್ಲಿ ಒಬ್ಬ ಗಣತಿದಾರ ಇರುವಂತೆ ನೋಡಿಕೊಳ್ಳಬೇಕು. ಅಲ್ಲದೆ, ಗ್ರಾಮೀಣದಲ್ಲಿ 10 ಗಣತಿದಾರರಿಗೆ ಒಬ್ಬರಂತೆ, ನಗರ ಪ್ರದೇಶದಲ್ಲಿ 20 ಗಣತಿದಾರರಿಗೆ ಒಬ್ಬರಂತೆ ಮೇಲ್ವಿಚಾರಕರನ್ನು ನೇಮಕ ಮಾಡಿಕೊಳ್ಳುವ ಪ್ರಕ್ರಿಯೆ ಪೂರ್ಣಗೊಳಿಸಬೇಕು. ತದನಂತರ ತಾಲೂಕುವಾರು ತರಬೇತಿ ನೀಡಿ, ಶೀಘ್ರ ಗಣತಿ ಆರಂಭಿಸುವಂತೆ ನಿರ್ದೇಶಿಸಿದರು.

ಏನಿದು ಆರ್ಥಿಕ ಗಣತಿ?:ಆರ್ಥಿಕ ಗಣತಿಯು ದೇಶದ ಭೌಗೋಳಿಕ ಗಡಿಯೊಳಗೆ ನೆಲೆಗೊಂಡು ಸ್ವಂತ ಉಪಯೋಗಕ್ಕಲ್ಲದ ಸರಕುಗಳ ಉತ್ಪಾದನೆ ಅಥವಾ ಅವುಗಳ ವಿತರಣೆ, ಮಾರಾಟ ಅಥವಾ ಸೇವೆ ಇತ್ಯಾದಿ ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿರುವ ಉದ್ಯಮ/ಘಟಕಗಳ ಪೂರ್ಣ ಎಣಿಕೆಯಾಗಿರುತ್ತದೆ. ಈ ಗಣತಿಯಲ್ಲಿ ಸಂಘಟಿತ ಮತ್ತು ಅಸಂಘಟಿತ ವಲಯಗಳ ಎಲ್ಲ ಉದ್ಯಮಗಳ ಗಣತಿ ಮಾಡಲಾಗುತ್ತದೆ. ಸರಕುಗಳ ಉತ್ಪಾದನೆ, ಅವುಗಳ ವಿತರಣೆ, ಮಾರಾಟ ಅಥವಾ ಸೇವಾ ಚಟುವಟಿಕೆಯಿಂದ ರಾಷ್ಟ್ರೀಯ ಉತ್ಪನ್ನಕ್ಕೆ ಮೌಲ್ಯವನ್ನು ತಂದು ಕೊಡುತ್ತದೆಯೋ ಅಂತಹವುಗಳನ್ನು ಆರ್ಥಿಕ ಚಟುವಟಿಕೆ ಎಂದು ಪರಿಗಣಿಸಲಾಗುವುದು. ಆರ್ಥಿಕ ಗಣತಿಯು ದೇಶದ ಪ್ರಗತಿಯಲ್ಲಿ ರಾಷ್ಟ್ರೀಯ ತಲಾದಾಯ ಮತ್ತು ಜಿಡಿಪಿಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ, ನಗರಸಭೆಯ ಪೌರಾಯುಕ್ತ ರಮೇಶ ಸುಣಗಾರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶ್ರೀಶೈಲ ಬಿರಾದಾರ, ಸಹಕಾರ ಸಂಘಗಳ ಉಪ ನಿಬಂಧಕ ವಿಶ್ವನಾಥ ಮಲಕೂಡ, ಜಿಲ್ಲಾ ಸಂಖ್ಯಾ ಸಂಗ್ರಹಣ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ ನಾಗೂರ, ಕಾಮನ್‌ ಸರ್ವೀಸ್‌ ಸೆಂಟರ್‌ ಜಿಲ್ಲಾ ವ್ಯವಸ್ಥಾಪಕ ವೈಜನಾಥರೆಡ್ಡಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.