ದಾವಣಗೆರೆ-ಬಳ್ಳಾರಿ ಉಪವಿಭಾಗಗಳ ಮರು ಹಂಚಿಕೆ

ಹಡಗಲಿ-ಹರಪನಹಳ್ಳಿ ಪೊಲೀಸ್‌ ಉಪ ವಿಭಾಗಕ್ಕೆ ಸೇರ್ಪಡೆ

Team Udayavani, Jun 28, 2019, 3:44 PM IST

28-June-26

ಹರಪನಹಳ್ಳಿ: ದಾವಣಗೆರೆ ಮತ್ತು ಬಳ್ಳಾರಿ ಪೊಲೀಸ್‌ ಉಪವಿಭಾಗಗಳ ಮರು ಹಂಚಿಕೆ ಮಾಡಿ ಹೊರಡಿಸಿರುವ ಆದೇಶದ ಪ್ರತಿ ಹರಪನಹಳ್ಳಿಯಲ್ಲಿರುವ ಡಿವೈಎಸ್ಪಿ ಕಚೇರಿ.

ಹರಪನಹಳ್ಳಿ: ದಾವಣಗೆರೆ ಜಿಲ್ಲೆಯಿಂದ ಬೇರ್ಪಡಿಸಿ ಹರಪನಹಳ್ಳಿ ತಾಲೂಕನ್ನು ಬಳ್ಳಾರಿ ಜಿಲ್ಲೆಗೆ ಸೇರಿರುವ ಹಿನ್ನೆಲೆಯಲ್ಲಿ ದಾವಣಗೆರೆ ಮತ್ತು ಬಳ್ಳಾರಿ ಜಿಲ್ಲೆಯ ಪೊಲೀಸ್‌ ಉಪ ವಿಭಾಗಗಳನ್ನು ಮರು ಹಂಚಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಬಳ್ಳಾರಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಡಗಲಿ ಉಪ-ವಿಭಾಗವನ್ನು ಕೈಬಿಟ್ಟು ಹರಪನಹಳ್ಳಿ ಪೊಲೀಸ್‌ ಉಪ ವಿಭಾಗವನ್ನಾಗಿ ಸೃಜಿಸಿ, ಇದಕ್ಕೆ ಹೊಂದಿಕೊಂಡಿರುವ ಹರಪನಹಳ್ಳಿ, ಅರಸೀಕೆರೆ, ಹಲುವಾಗಲು, ಚಿಗಟೇರಿ ಪೊಲೀಸ್‌ ಠಾಣೆಗಳನ್ನು ಮತ್ತು ಹಡಗಲಿ ಉಪವಿಭಾಗ ವ್ಯಾಪ್ತಿಯಲ್ಲಿರುವ ಹಡಗಲಿ, ಹಿರೇ ಹಡಗಲಿ, ಇಟಗಿ ಪೊಲೀಸ್‌ ಠಾಣೆ ಹಾಗೂ ಪ್ರಸ್ತುತ ಕೂಡ್ಲಿಗಿ ಉಪ ವಿಭಾಗದಲ್ಲಿರುವ ಕೊಟ್ಟೂರು ವೃತ್ತ ಕಚೇರಿ ಮತ್ತು ಅದಕ್ಕೆ ಸಂಬಂಧಿಸಿದ ಕೊಟ್ಟೂರು, ಹೊಸಹಳ್ಳಿ ಪೊಲೀಸ್‌ ಠಾಣೆಗಳನ್ನು ಸೇರಿಸಿ ಹರಪನಹಳ್ಳಿ ಉಪ ವಿಭಾಗವೆಂದು ರಚಿಸಲಾಗಿದೆ.

ಹಗರಿಬೊಮ್ಮನಹಳ್ಳಿ ವೃತ್ತ ಮತ್ತು ಅದಕ್ಕೆ ಸಂಬಂಧಿಸಿದ ಹಗರಿಬೊಮ್ಮನಹಳ್ಳಿ ಮತ್ತು ತಂಬ್ರಹಳ್ಳಿ ಪೊಲೀಸ್‌ ಠಾಣೆಗಳನ್ನು ಹೊಸಪೇಟೆ ವಿಭಾಗಕ್ಕೆ ಸೇರ್ಪಡೆ ಮತ್ತು ಕೂಡ್ಲಿಗಿ ವೃತ್ತ ಮತ್ತು ಸಂಡೂರು ವೃತ್ತ ಮತ್ತು ಅದಕ್ಕೆ ಸಂಬಂಧಿಸಿದ ಪೊಲೀಸ್‌ ಠಾಣೆಗಳನ್ನು ಕೂಡ್ಲಿಗಿ ಉಪ-ವಿಭಾಗದಲ್ಲಿಯೇ ಮುಂದುವರಿಸಿ ಆದೇಶ ಹೊರಡಿಸಲಾಗಿದೆ.

ದಾವಣಗೆರೆ ಜಿಲ್ಲೆಯಲ್ಲಿರುವ ದಾವಣಗೆರೆ ಗ್ರಾಮಾಂತರ ಉಪ ವಿಭಾಗದಿಂದ ಚನ್ನಗಿರಿ ವೃತ್ತದ ಚನ್ನಗಿರಿ, ಸಂತೆಬೆನ್ನೂರು, ಬಸವಪಟ್ಟಣ ಪೊಲೀಸ್‌ ಠಾಣೆ, ಹೊನ್ನಾಳ್ಳಿ ವೃತ್ತದ ಹೊನ್ನಾಳ್ಳಿ, ನ್ಯಾಮತಿ ಪೋಲಿಸ್‌ ಠಾಣೆ ಸೇರ್ಪಡೆಗೊಳಿಸಿ ಚನ್ನಗಿರಿ ಉಪ-ವಿಭಾಗವೆಂದು ರಚಿಸಿ ಸದರಿ ಉಪವಿಭಾಗಕ್ಕೆ ಅವಶ್ಯಕವಿರುವ ಡಿವೈಎಸ್ಪಿ ಹುದ್ದೆಯನ್ನು ಬಳ್ಳಾರಿ ಜಿಲ್ಲೆಯ ಹಡಗಲಿ ಪೊಲೀಸ್‌ ಉಪ ವಿಭಾಗದಿಂದ ವರ್ಗಾಯಿಸಲಾಗಿದೆ. ಹರಪನಹಳ್ಳಿ ಉಪ ವಿಭಾಗದಿಂದ ಹರಪನಹಳ್ಳಿ ವೃತ್ತ ಮತ್ತು ಅದಕ್ಕೆ ಹೊಂದಿಕೊಂಡ ಪೊಲೀಸ್‌ ಠಾಣೆಗಳನ್ನು ಬಳ್ಳಾರಿ ಜಿಲ್ಲೆಗೆ ಸೇರ್ಪಡೆ ನಂತರ ಉಳಿಯುವ ಜಗಳೂರು ವೃತ್ತದ ಜಗಳೂರು, ಬಿಳಿಚೋಡ್‌ ಪೊಲೀಸ್‌ ಠಾಣೆಗಳನ್ನು ದಾವಣಗೆರೆ ಗ್ರಾಮಾಂತರ ಉಪವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ ಎಂದು ಒಳಾಡಳಿತ ಇಲಾಖೆಯ(ಪೊಲೀಸ್‌ ವೆಚ್ಚ) ಸರ್ಕಾರದ ಅಧೀನ ಕಾರ್ಯದರ್ಶಿ ಎಸ್‌.ಎಸ್‌.ಗೋಪಾಲ್ ಆದೇಶ ಹೊರಡಿಸಿದ್ದಾರೆ.

ಹೋರಾಟದ ಪ್ರತಿಫಲ
ಹರಪನಹಳ್ಳಿ ಪೊಲೀಸ್‌ ಉಪವಿಭಾಗವನ್ನು ಇಲ್ಲಿಯಿಂದ ವರ್ಗಾಯಿಸದಂತೆ ಮಾಜಿ ಶಾಸಕ ದಿ.ಎಂ.ಪಿ.ರವೀಂದ್ರ ಸೇರಿದಂತೆ ಅನೇಕರು ಸರ್ಕಾರಕ್ಕೆ ಪತ್ರ ಬರೆದು ಒತ್ತಾಯಿಸಿದ್ದರು. ಆದರೆ ಹರಪನಹಳ್ಳಿ ಉಪ ವಿಭಾಗ ಉಳಿಯುವುದರ ಜತೆಗೆ ಹಡಗಲಿ ತಾಲೂಕು ಕೂಡ ಇಲ್ಲಿಗೆ ಸೇರ್ಪಡೆಗೊಳಿಸಿ ಆದೇಶ ಹೊರಡಿಸಿರುವುದರಿಂದ ಉಪವಿಭಾಗದ ವ್ಯಾಪ್ತಿ ಕೂಡ ದೊಡ್ಡದಾಗಿದೆ. ಪೊಲೀಸ್‌ ಇಲಾಖೆಯಲ್ಲಿ ಸಿಂಹಪಾಲು ಪಡೆಯುವಲ್ಲಿ ಹರಪನಹಳ್ಳಿ ಯಶಸ್ವಿಯಾಗಿದೆ ಎಂದೇ ಹೇಳಬಹುದು.

ಟಾಪ್ ನ್ಯೂಸ್

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ

3-vitla

Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

2

Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

3

Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ

3-vitla

Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.