ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗಕ್ಕೆ “ಎ’ ಗ್ರೇಡ್‌ ಮಾನ್ಯತೆ


Team Udayavani, Jun 28, 2019, 5:46 PM IST

kannada

ಮುಂಬಯಿ: ಮುಂಬಯಿ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ನಿರ್ದೇಶನದಂತೆ ನ್ಯಾಕ್‌ ಮಾನ್ಯತೆ ಅಂಗವಾಗಿ ಮುಂಬಯಿ ವಿಶ್ವ ವಿದ್ಯಾಲಯದ ಎಲ್ಲ ಸ್ನಾತಕೋತ್ತರ ವಿಭಾಗಗಳ ಬಾಹ್ಯ ಶೈಕ್ಷಣಿಕ ಮೌಲ್ಯ ಮಾಪನ ನಡೆಸಿ ಫಲಿತಾಂಶ ಪ್ರಕಟಿಸಿದ್ದು ಕನ್ನಡ ವಿಭಾಗ “ಎ’ ಗ್ರೇಡ್‌ ಮಾನ್ಯತೆಗೆ ಪಾತ್ರವಾಗಿದೆ.

ಇದೇ ಮೊದಲ ಬಾರಿಗೆ ಮುಂಬಯಿ ವಿಶ್ವವಿದ್ಯಾಲಯ ತನ್ನ ಅಧೀನದ ಎಲ್ಲ ವಿಭಾಗಗಳ ಸಾಧನೆಗಳನ್ನು ಒರೆಗೆ ಹಚ್ಚಿ ಗ್ರೇಡ್‌ ನೀಡುವ ನೂತನ ಉಪಕ್ರಮ ಜಾರಿಗೆ ತಂದಿದ್ದು ಎ ಗ್ರೇಡ್‌ ಪಡೆದ ಕೆಲವೇ ಕೆಲವು ವಿಭಾಗಗಳಲ್ಲಿ ಕನ್ನಡ ವಿಭಾಗಕ್ಕೂ ಸ್ಥಾನ ದೊರಕಿದೆ. ಕನ್ನಡ ವಿಭಾಗ ಎಂ.ಎ., ಎಂ.ಫಿಲ್‌., ಪಿಎಚ್‌.ಡಿ. ತರಗತಿಗಳಲ್ಲದೆ ಕನ್ನಡೇತರರಿಗೆ ನಗರದ ಎಲ್ಲೆಡೆ ಕನ್ನಡ ಕಲಿಕಾ ಕೇಂದ್ರ ಗಳ ಮೂಲಕ ಸರ್ಟಿಫಿಕೇಟ್‌, ಡಿಪ್ಲೋಮಾ ತರಗತಿ ನಡೆಸಿಕೊಂಡು ಬರುತ್ತಿದೆ.

ವಿಭಾಗದ ಪ್ರಕಟನೆೆ, ಸಂಶೋಧನ ಕೃತಿಗಳು, ಅತಿ ಹೆಚ್ಚು ದತ್ತಿ ನಿಧಿಗಳ ಸ್ಥಾಪನೆ, ಪ್ರತ್ಯೇಕ ಗ್ರಂಥಾಲಯ, ಸಮುದಾಯದ ಜೊತೆಗೆ ಬೆಸೆದುಕೊಂಡು ವಿವಿಧ ಸಂಸ್ಥೆಗಳ ಸಹಕಾರದಲ್ಲಿ ಸಮಾಜಮುಖೀ ಚಟುವಟಿಕೆಗಳಲ್ಲಿ ನಿರತವಾಗಿರುವುದಕ್ಕೆ ಮೌಲ್ಯಮಾಪನ ಸಮಿತಿ ತನ್ನ ಲಿಖೀತ ವರದಿಯಲ್ಲಿ ಪ್ರಶಂಸೆಗೈದಿದ್ದು ವಿಭಾಗದಲ್ಲಿ ಖಾಲಿ ಇರುವ ಪ್ರಾಧ್ಯಾಪಕ ಹುದ್ದೆಗಳನ್ನು ಶೀಘ್ರದಲ್ಲಿ ತುಂಬುವಂತೆಯೂ ಸಮಿತಿಯು ಮುಂಬಯಿ ವಿಶ್ವವಿದ್ಯಾಲ ಯಕ್ಕೆ ಸಲಹೆ ನೀಡಿದೆ.

ಈ ಮನ್ನಣೆ ಶಿಕ್ಷಕರು, ವಿದ್ಯಾರ್ಥಿಗಳು, ಸಮುದಾಯದ ವಿವಿಧ ಸಂಸ್ಥೆಗಳ ಸಹಕಾರದಿಂದ ಸಾಧ್ಯ ವಾಗಿದೆ. ಕಳೆದ ಹತ್ತು ವರ್ಷಗಳಲ್ಲಿ ವಿಭಾಗದ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳವಾಗಿದೆ. ವಿಭಾಗದ ಪ್ರಾಧ್ಯಾಪಕರಾದ ಡಾ| ಪೂರ್ಣಿಮಾ. ಎಸ್‌. ಶೆಟ್ಟಿ, ಡಾ| ಜೀವಿ ಕುಲಕರ್ಣಿ, ಡಾ| ವಿಶ್ವನಾಥ ಕಾರ್ನಾಡ, ಡಾ| ರಘುನಾಥ್‌, ಕನ್ನಡ ಕಲಿಕಾ ತರಗತಿಗಳ ಜವಾಬ್ದಾರಿ ಹೊತ್ತಿರುವ ಶ್ರೀಪಾದ ಪತಕಿ, ಡಾ| ಶ್ಯಾಮಲಾ ಪ್ರಕಾಶ್‌, ಕುಮುದಾ ಆಳ್ವ, ಗೀತಾ ಮಂಜುನಾಥ್‌, ಡಾ| ಉಮಾರಾವ್‌, ಆಂತರಿಕ ಮೌಲ್ಯ ಮಾಪನ ನಡೆಸಿದ ಖ್ಯಾತ ವಿದ್ವಾಂಸ ಡಾ| ಸುಧೀಂದ್ರ ಭವಾನಿ, ವಿಜ್ಞಾನಿ, ಸಾಹಿತಿ ಡಾ| ವ್ಯಾಸರಾವ್‌ ನಿಂಜೂರು ಮೊದಲಾದವರ ಸಹಕಾರಕ್ಕೆ ವಿಭಾಗದ ಮುಖ್ಯಸ್ಥ ಡಾ| ಜಿ. ಎನ್‌. ಉಪಾಧ್ಯ ಅವರು ಈ ಸಂದರ್ಭದಲ್ಲಿ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Perth test: Jasprit Bumrah’s bowling style in doubt: What is the controversy?

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!

ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

3

Kannada: ವೀರ ಕನ್ನಡಿಗ: ತನು ಕನ್ನಡ, ಮನ(ನೆ) ಕನ್ನಡ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.