ಶ್ರೀರಾಮ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ
Team Udayavani, Jun 29, 2019, 5:17 AM IST
ಸೋಮವಾರಪೇಟೆ:ಸಹಕಾರ ಸಂಘಗಳಲ್ಲಿ ಸದಸ್ಯರುಗಳು ಕೆಲವು ನಿಬಂಧನೆಗಳನ್ನು ಪಾಲಿಸದಿದ್ದರೆ ಮತದಾನದ ಹಕ್ಕನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ಇಲ್ಲಿನ ಶ್ರೀರಾಮ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಿ.ಡಿ. ಮಂಜುನಾಥ್ ಹೇಳಿದರು.
ಇಲ್ಲಿನ ಶ್ರೀರಾಮ ಮಂದಿರದಲ್ಲಿ ಆಯೋಜಿಸಿದ್ದ ಶ್ರೀರಾಮ ಪತ್ತಿನ ಸಹಕಾರ ಸಂಘದ ಮೊದಲ ವರ್ಷದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜನತೆಯಲ್ಲಿ ಉಳಿತಾಯದ ಮನೋಭಾವನೆ ಮೂಡಿಸುವುದು, ಅವರು ಮಾಡುವ ವೃತ್ತಿ, ವ್ಯಾಪಾರಾಭಿವೃದ್ಧಿಗೆ ಆರ್ಥಿಕ ಸಹಕಾರ ನೀಡುವುದರೊಂದಿಗೆ ಪರಸ್ಪರ ಸಹಕಾರ ಮನೋಭಾವನೆಯನ್ನು ವೃದ್ಧಿಸುವ ನಿಟ್ಟಿನಲ್ಲಿ ನೂತನವಾಗಿ ಶ್ರೀ ರಾಮ ಪತ್ತಿನ ಸಹಕಾರ ಸಂಘವನ್ನು ರಚಿಸಲಾಗಿದೆ ಎಂದರು.
ಸಂಘದ ವರದಿಯನ್ನು ನಿರ್ದೇಶಕ ಬಿ.ಎಸ್. ಅನಂತ್‌ರಾಮ್ ಮಂಡಿಸಿದರು. ಸಂಘದ ಪ್ರಭಾರ ಕಾರ್ಯದರ್ಶಿ ಬಿ.ಎಂ. ಶ್ರೀಧರ್ ಲೆಕ್ಕಪತ್ರ ಮಂಡಿಸಿದರು. ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಎನ್.ಎನ್. ರಮೇಶ್ ಸೇರಿದಂತೆ ನಿರ್ದೇಶಕರು ಇದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.