ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್ ಡಿಪಿಆರ್ ಸಿದ್ಧತೆ ಕಾರ್ಯಾಗಾರ
Team Udayavani, Jun 29, 2019, 5:48 AM IST
ಕಾಸರಗೋಡು: ಡಾ| ಪ್ರಭಾಕರನ್ ಆಯೋಗ ವರದಿ ಪ್ರಕಾರ ಜಿಲ್ಲೆಗಾಗಿ ರಚಿಸಿರುವ ವಿಶೇಷ ಯೋಜನೆ ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್ಗಾಗಿ ಯೋಜನೆ ನಿರ್ವಹಣೆ ದಾಖಲೆ (ಡಿ.ಪಿ.ಆರ್.) ಸಿದ್ಧಗೊಳಿಸುವ ನಿಟ್ಟಿನಲ್ಲಿ ಒಂದು ದಿನದ ಕಾರ್ಯಾಗಾರ ಜರಗಿತು.
ವಿವಿಧ ಇಲಾಖೆಗಳ ಮುಖ್ಯಸ್ಥರಿಗೆ ಮತ್ತು ಸಿಬಂದಿಗಾಗಿ ಜಿಲ್ಲಾಧಿಕಾರಿ ಕಚೇರಿ ಕಿರು ಸಭಾಂಗಣದಲ್ಲಿ ಕಾರ್ಯಾಗಾರ ಜರಗಿತು. ಜಿಲ್ಲಾಧಿಕಾರಿ ಡಾ| ಡಿ. ಸಜಿತ್ ಬಾಬು ಉದ್ಘಾಟಿಸಿದರು.
ಈ ಸಂದರ್ಭ ಮಾತನಾಡಿದ ಅವರು ಯೋಜನೆಯೊಂದನ್ನು ಜಾರಿಗೊಳಿಸುವ ವೇಳೆ ಆ ಪ್ರದೇಶದ ಸಮಗ್ರ ಮಾಹಿತಿಗಳನ್ನು ಪರಿಶೀಲಿಸಬೇಕು. ಫಲಾನುಭವಿಗಳನ್ನೂ ಗಣನೆಗೆ ತೆಗೆದುಕೊಂಡು ಯೋಜನೆ ರಚಿಸಬೇಕು. ಇದು ನಾಡಿನ ಸಮಗ್ರ ಅಭಿವೃದ್ಧಿಗೆ ಕಾರಣವಾಗುತ್ತದೆ. ಸಿಬಂದಿಯ ಪ್ರಾಮಾಣಿಕ ಯತ್ನದಿಂದ ಮಾತ್ರ ಯೋಜನೆ ಯಶಸ್ವಿಯಾಗಲು ಸಾಧ್ಯ ಎಂದವರು ನುಡಿದರು.
ಪ್ರಭಾಕರನ್ ಆಯೋಗದ ವರದಿ 2012ರಲ್ಲಿ ಸಲ್ಲಿಸಲಾಗಿದ್ದರೂ, ಅದನ್ನು ಜಾರಿಗೊಳಿಸುವಲ್ಲಿನ ತಾಂತ್ರಿಕ ಅಡೆಚಣೆಗಳ ಕುರಿತು ಕಾರ್ಯಾಗಾರದಲ್ಲಿ ಚರ್ಚೆ ನಡೆಸಲಾಯಿತು.
ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್ ವಿಶೇಷ ಅ ಧಿಕಾರಿ ಇ.ಪಿ. ರಾಜ್ ಮೋಹನ್, ಕೇಂದ್ರ ವಿವಿ ಹಣಕಾಸು ಅ ಧಿಕಾರಿ ಡಾ| ಬಿ.ಆರ್. ಪ್ರಸನ್ನ ಕುಮಾರ್, ಐ.ಎಂ.ಜಿ. ಉಪನ್ಯಾಸಕ ಡಾ| ಎಸ್. ಸಜೀವ್ ಅವರು ವಿವಿಧ ವಿಚಾರಗಳ ಕುರಿತು ಮಾಹಿತಿ ನೀಡಿದರು. ಕ್ರಿಯಾತ್ಮಕ ಗೋಷ್ಠಿ ನಡೆಯಿತು. ಸಿ.ರಾಜೇಶ್ ಚಂದ್ರನ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
BGT 2024: ಐಪಿಎಲ್ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್!
Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ
Hosanagar: ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ: 29 ಮಂದಿಗೆ ಗಾಯ
ಸವದತ್ತಿ:ರೈಲು ಮಾರ್ಗ- ಸವದತ್ತಿಗೇ ಜಾಸ್ತಿ ಲಾಭ! ಆರ್ಥಿಕ ಅಭಿವೃದ್ಧಿಗೆ ನೆರವು…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.