ಪೊಲೀಸ್ ಆಯುಕ್ತರಿಂದ ಸಂಚಾರ ಪರಿಶೀಲನೆ
Team Udayavani, Jun 29, 2019, 5:00 AM IST
ಮಹಾನಗರ: ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರು ನಗರದ ಸಂಚಾರ ಸುವ್ಯವಸ್ಥೆಯನ್ನು ಮತ್ತಷ್ಟು ಸುಧಾರಣೆ ಮಾಡುವ ನಿಟ್ಟಿನಲ್ಲಿ ಶುಕ್ರವಾರ ಕಾವೂರು ಮತ್ತು ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಫುಟ್ಪಾತ್ನಲ್ಲಿ ವಾಹನ ನಿಲುಗಡೆ, ಬಸ್ಬೇನಲ್ಲಿ ಬಸ್ ನಿಲ್ಲಿಸದೆ ಇರುವುದು, ಜಂಕ್ಷನ್ಗಳಲ್ಲಿ ಸಂಚಾರಿ ಪೊಲೀಸರಿಗೆ ಕೊಡೆ ಹಾಕದಿರುವ ಬಗ್ಗೆ ಫೋನ್-ಇನ್ ಕಾರ್ಯಕ್ರಮದಲ್ಲಿ ದೂರು ಬಂದ ಹಿನ್ನೆಲೆಯಲ್ಲಿ ಶುಕ್ರವಾರವೇ ಕಮಿಷನರ್ ಕಾರ್ಯಾಚರಣೆಗೆ ಇಳಿದರು.
ಕಾವೂರಿಗೆ ಭೇಟಿ ನೀಡಿದ ಕಮಿಷನರ್ ಅವರು, ಕಡ್ಡಾಯವಾಗಿ ಬಸ್ ಬೇ ನಲ್ಲಿ ಬಸ್ಗಳನ್ನು ನಿಲ್ಲಿಸಲು ಕ್ರಮಕೈಗೊಳ್ಳ ಬೇಕು, ಫುಟ್ಪಾತ್ಗಳಲ್ಲಿ ನಿಲ್ಲಿಸಿದ ವಾಹನಗಳನ್ನು ತೆರವುಗೊಳಿಸುವಂತೆ ಸೂಚಿಸಿದರು. ರೈಲು ನಿಲ್ದಾಣದ ಮುತ್ತಪ್ಪ ಗುಡಿ ಬಳಿ ಟ್ರಾಫಿಕ್ ಅಂಬ್ರೆಲ್ಲಾ ಹಾಕುವಂತೆ ಸಲಹೆ ಮಾಡಿದರು.
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಎಸ್ಡಿಪಿಐ ಪ್ರತಿಭಟನೆಗೆ ಏರ್ಪಡಿಸಿದ್ದ ಬಂದೋ ಬಸ್ತು ವೀಕ್ಷಿಸಿದರು. ಸಿಟಿ ರೌಂಡಪ್ ವೇಳೆ ನಗರ ಸಂಚಾರ ಮತ್ತು ಅಪರಾಧ ವಿಭಾಗ ಡಿಸಿಪಿ ಲಕ್ಷ್ಮೀಗಣೇಶ್, ಎಸಿಪಿ ಮಂಜುನಾಥ ಶೆಟ್ಟಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.