ಕೆಲಸ ಮಾಡಿದ್ರೂ ಮತ ಹಾಕದಿದ್ರೆ ಬೇಸರವಾಗುತ್ತೆ
Team Udayavani, Jun 29, 2019, 3:03 AM IST
ಬೆಂಗಳೂರು: “ಸಂಸದರಾಗಿ ಮಲ್ಲಿಕಾರ್ಜುನ ಖರ್ಗೆ ಮಾಡಿರುವಷ್ಟು ಕೆಲಸವನ್ನು ಬೇರೆ ಯಾರೂ ಮಾಡಿರಲಿಲ್ಲ. ವೀರಪ್ಪ ಮೊಯ್ಲಿ, ಕೆ.ಎಚ್. ಮುನಿಯಪ್ಪ, ಧ್ರುವ ನಾರಾಯಣ ಎಲ್ಲರೂ ಜನಪರವಾಗಿ ಕೆಲಸ ಮಾಡಿದ್ದರೂ, ಚುನಾವಣೆಯಲ್ಲಿ ಅವರನ್ನು ಜನ ಸೋಲಿಸಿರುವುದರಿಂದ ರಾಜಕೀಯವಾಗಿ ನೋವಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
“ಮೋದಿಗೆ ಓಟ್ ಹಾಕಿ, ನಮ್ಮ ಬಳಿ ಮತ ಕೇಳುತ್ತೀರಾ’ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಶುಕ್ರವಾರ ಪ್ರತಿಕ್ರಿಯಿಸಿರುವ ಅವರು, “ಕಾಂಗ್ರೆಸ್ ಸಂಸದರು ಎಷ್ಟೆಲ್ಲಾ ಜನಪರ ಕೆಲಸ ಮಾಡಿ, ಹೋರಾಟ ಮಾಡಿದರೂ. ರಾಜ್ಯದಲ್ಲಿ ಕೇವಲ ಒಂದು ಸ್ಥಾನ ನೀಡಿರುವುದರಿಂದ ರಾಜಕೀಯವಾಗಿ ನೋವಾಗಿದೆ. ಜನರು ನಮ್ಮನ್ನು ಯಾಕೆ ಪರಿಗಣಿಸಲಿಲ್ಲ ಎಂಬ ಕಾರಣಕ್ಕೆ ಬೇಸರವಾಗಿದೆ’ ಎಂದು ಹೇಳಿದರು.
ಪ್ರಚೋದನಾತ್ಮಕ ಭಾಷಣ ಮಾಡಿದವರು ದೊಡ್ಡ ಅಂತರದಲ್ಲಿ ಗೆದ್ದರು. ಪ್ರಾಮಾಣಿಕವಾಗಿ ಕೆಲಸ ಮಾಡಿದರೂ ಜನರು ಯಾಕೆ ನಮ್ಮ ಪರವಾಗಿ ನಿಲ್ಲಲಿಲ್ಲ ಎಂದು ಪ್ರಶ್ನಿಸಿದ್ದಾರೆ. ನಾವು ಯಾರ ಪರ ಹೋರಾಟ ಮಾಡಿದ್ದೆವೋ ಅವರೇ ನಮಗೆ ಮತ ಹಾಕಿಲ್ಲ. ಹೀಗಾಗಿ ಸಹಜವಾಗಿ ಮಾತನಾಡುವ ಸಂದರ್ಭದಲ್ಲಿ ಆ ರೀತಿ ಕೇಳಿದ್ದಾರೆಯೇ ಹೊರತು ಮತದಾರರಿಗೆ ಅಗೌರವ ತೋರುವ ಉದ್ದೇಶದಿಂದಲ್ಲ ಎಂದು ಸಮರ್ಥಿಸಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.