ಸಾಮಾಜಿಕ ಸೇವೆಯಲ್ಲಿ ಸಂತೃಪ್ತ ಭಾವನೆ ಕಂಡುಕೊಳ್ಳಿ’
Team Udayavani, Jun 29, 2019, 5:27 AM IST
ಉಡುಪಿ: ರೋಟರಿ ಅಂತಾರಾಷ್ಟ್ರೀಯ ಸಂಸ್ಥೆಯು ತನ್ನ ಸ್ಥಾಪನೆಯಾದ ದಿನದಿಂದಲೂ ಸಾಮಾಜಿಕ ಸೇವೆಯನ್ನೇ ಮುಡಿಪಾಗಿರಿಸಿ ಕೊಂಡು ಬಂದಿದೆ ಮತ್ತು ಸಮಾಜದ ಕುಂದು ಕೊರತೆಗಳನ್ನು ಗಮನಿಸಿ ತನ್ನ ಕಾರ್ಯಾಚರಣೆಯಲ್ಲಿ ತೊಡಗ ಲಾರಂಭಿಸುತ್ತದೆ ಎಂದು ರೊಟರಿ ಸೇವಾ ಸಂಸ್ಥೆಗಳ ನಿರ್ದೇಶಕ ಎಚ್.ಎಲ್. ರವಿ ಹೇಳಿದರು.
ಇಲ್ಲಿನ ದೇವಾಡಿಗರ ಭವನದಲ್ಲಿ ರೋಟರಿ ಕ್ಲಬ್ ಉಡುಪಿ ರಾಯಲ್ಸ್ ನ ನೂತನ ಅಧ್ಯಕ್ಷ ಯಶವಂತ ಬಿ.ಕೆ. ಅವರ ಪದಪ್ರದಾನ ಸಮಾರಂಭದಲ್ಲಿ ಪದ ಪ್ರಧಾನ ಅಧಿಕಾರಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ನೂತನ ಸಮಿತಿಯ ಅಧಿಕಾರ ಸ್ವೀಕರಿಸುತ್ತಲೆ ಡಾ| ಬಾಲಕೃಷ್ಣ ಮದ್ದೋಡಿ ಮತ್ತು ಅರಣ್ಯ ಇಲಾಖೆಯ ಸಹಕಾರದಲ್ಲಿ ಗಿಡಗಳನ್ನು ವಿತರಿಸಿ ವನಮಹೋತ್ಸವ ಆಚರಿಸುವುದರೊಂದಿಗೆ ಮುಂದಿನ ಸಾಲಿನ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.
ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಿಸಲಾಯಿತು.
ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆಯ ಸಮಯದಲ್ಲಿ ಶಾಸಕ ಕೆ.ರಘುಪತಿ ಭಟ್ ಅವರ ಪ್ರಾಯೋಜಕತ್ವದ ಉಚಿತ ಕುಡಿಯುವ ನೀರಿನ ಸರಬರಾಜಿನಲ್ಲಿ ಟ್ಯಾಂಕರ್‌ಗಳ ಮೂಲಕ ನೀರು ವಿತರಿಸಿದ ನಿತೇಶ್, ರಮೇಶ್ ನಾಯ್ಕ, ತಾರಾನಾಥ್ ಕುಂದರ್ ಅವರನ್ನು ಅಭಿನಂದಿಸಲಾಯಿತು.
ನಿರ್ಗಮನ ಅಧ್ಯಕ್ಷ ರತ್ನಾಕರ್ ಇಂದ್ರಾಳಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. 2020ರ ಸಾಲಿನ ಸಹಾಯಕ ಗವರ್ನರ್ ಡಾ| ಸೇಸಪ್ಪರೈ ಸಂಸ್ಥೆಯ ವಾರ್ಷಿಕ ವಾರ್ತಾಸಂಚಿಕೆಯನ್ನು ಬಿಡುಗಡೆ ಗೊಳಿಸಿದರು. ಖ್ಯಾತ ನೇತ್ರ ತಜ್ಞ ಡಾ| ಕೆ.ಕೃಷ್ಣಪ್ರಸಾದ್ ಅವರನ್ನು ಸಮ್ಮಾನಿಸಲಾಯಿತು.
ರೋಟರಿ ಪ್ರಮುಖರಾದ ದಿನೇಶ್ ಹೆಗ್ಡೆ ಆತ್ರಾಡಿ, ಡಾ| ಗಣೇಶ್ ಎ., ಡಾ| ಸುರೇಶ್ ಶೆಣೈ, ಚಂದ್ರ ನಾಯ್ಕ, ತೇಜೇಶ್ವರ್ ರಾವ್, ನಗರಸಭಾ ಸದಸ್ಯೆ ವಿಜಯಲಕ್ಷ್ಮೀ ಉಪಸ್ಥಿತರಿದ್ದರು.
ನಿಯೋಜಿತ ಕಾರ್ಯದರ್ಶಿ ಮಂಜುನಾಥ್ ಮಣಿಪಾಲ ವಂದಿಸಿದರು. ಆಲ್ವಿನ್ ಅಂದ್ರಾದೆ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.