ರಸ್ತೆ ಭೂಸ್ವಾಧೀನ ವಿಳಂಬ: ತಹಶೀಲ್ದಾರ್‌ ತರಾಟೆಗೆ

•ಕೆಡಿಪಿ ತ್ತೈಮಾಸಿಕ ಸಭೆಯಲ್ಲಿ ಶಾಸಕ ಸಿದ್ದರಾಮಯ್ಯ ಗರಂ •ದೂರು ಬರದ ಹಾಗೆ ಕಾರ್ಯ ನಿರ್ವಹಿಸಿ

Team Udayavani, Jun 29, 2019, 9:29 AM IST

bk-tdy-1..

ಬಾದಾಮಿ: ಕೆಡಿಪಿ ಸಭೆಯಲ್ಲಿ ಮಾಜಿ ಸಿಎಂ, ಶಾಸಕ ಸಿದ್ದರಾಮಯ್ಯ ಮಾತನಾಡಿದರು.

ಬಾದಾಮಿ: ತಾಲೂಕಿನ ಮಲ್ಲಾಪುರ ಎಸ್‌.ಎಲ್. ರಸ್ತೆ ಭೂಸ್ವಾಧಿಧೀನ ವಿಳಂಬ ಮಾಡುತ್ತಿರುವುದಕ್ಕೆ ತಹಶೀಲ್ದಾರ್‌ ಇಂಗಳೆ ಇವರನ್ನು ಶಾಸಕ ಸಿದ್ದರಾಮಯ್ಯ ತೀವ್ರ ತರಾಟೆಗೆ ತೆಗೆದುಕೊಂಡರು.

ತಾಪಂ ಸಭಾಭವನದಲ್ಲಿ ಕೆಡಿಪಿ ತ್ತೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸುಳ್ಳು ಹೇಳ್ತಿಯಾ ನೀನು ಎಂದು ಸಭೆಯಲ್ಲಿ ತಹಶೀಲ್ದಾರ್‌ ಮೇಲೆ ಗರಂ ಆದರು. ಸ್ವತಂತ್ರ ಬಂದು ಇಷ್ಟು ವರ್ಷವಾದರೂ ಒಂದು ಗ್ರಾಮಕ್ಕೆ ರಸ್ತೆ ಕಲ್ಪಿಸಲು ಆಗಲಿಲ್ಲ ಎಂದರೆ ಇಷ್ಟು ದಿನ ಏನು ಕೆಲಸ ಮಾಡಿದಿರಿ. ನಿನ್ನೆ ಶಾಲಾ ಮಕ್ಕಳು, ಗ್ರಾಮಸ್ಥರು ಬಾದಾಮಿಗೆ ಬಂದು ಅರ್ಜಿ ಸಲ್ಲಿಸಿದ್ದಾರೆ. ಇಷ್ಟೊಂದು ಅಹವಾಲು ಬರುತ್ತವೆ ಎಂದರೆ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ಶೀಘ್ರವೇ ಬಸ್‌ ಓಡಾಡುವಂತೆ ರಸ್ತೆ ನಿರ್ಮಿಸಿ, ಭೂಮಿ ಸ್ವಾಧೀನ ಮಾಡುವಂತೆ ಸಿದ್ದರಾಮಯ್ಯ ಸೂಚನೆ ನೀಡಿದರು. ನಾವು ಜನಪ್ರತಿನಿಧಿಗಳು ಜನರ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತರುತ್ತೇವೆ. ನೀವು ಸರಿಯಾಗಿ ಕೆಲಸ ಮಾಡಿದರೆ ಅವರು ನಮ್ಮ ಹತ್ತಿರ ಬರುವುದಿಲ್ಲ. ನೀವು ಸರಿಯಾಗಿ ಕೆಲಸ ಮಾಡದಿದ್ದರೆ ಅವರು ನಮ್ಮ ಹತ್ತಿರ ಬರುತ್ತಾರೆ. ಗ್ರಾಮೀಣ ಭಾಗಗಳಲ್ಲಿ ಸಂಚರಿಸಿ, ಸಮಸ್ಯೆ ಅರಿತು ಕೆಲಸ ಮಾಡಿರಿ. ಪ್ರತಿ ದಿನ ಮಧ್ಯಾಹ್ನ 3ರಿಂದ 5 ಗಂಟೆಯವರೆಗೆ ಸಾರ್ವಜನಿಕರ ಸಮಸ್ಯೆ, ಕುಂದುಕೊರತೆಗಳನ್ನು ಆಲಿಸಿ, ಸಮಸ್ಯೆ ಬಗೆಹರಿಸಿರಿ. ಅಧಿಕಾರದ ದರ್ಪ ತೋರಿಸಬೇಡಿರಿ. ಸರಿಯಾಗಿ ಕೆಲಸ ಮಾಡಿರಿ ಇಲ್ಲವೆ ಜಾಗ ಖಾಲಿ ಮಾಡಿರಿ ಎಂದು ಖಡಕ್‌ ಸೂಚನೆ ನೀಡಿದರು. ಸಭೆಗೆ ಗೈರು ಹಾಜರಾದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್‌ ಜಾರಿ ಮಾಡುವಂತೆ ತಾಪಂ ಇಒ ಭೀಮಪ್ಪ ಲಾಳಿ ಇವರಿಗೆ ಸೂಚಿಸಿದರು.

ಫುಟ್ಪಾತ್‌ ಅಂಗಡಿ ತೆರವುಗೊಳಿಸಿ: ಫುಟ್ಪಾತ್‌ನಲ್ಲಿ ಅಂಗಡಿ ಹಾಕಿದರೆ ಜನರು ಎಲ್ಲಿ ನಡೆದಾಡಬೇಕು. ಮುಂದಿನ ಬಾರಿ ಬರುವವರೆಗೆ ಯಾವುದೇ ಫುಟ್ಪಾಥ್‌ ಮೇಲೆ ಅಂಗಡಿ ಕಾಣಬಾರದು ಎಂದು ಪುರಸಭೆ ಮುಖ್ಯಾಧಿಕಾರಿ ಜ್ಯೋತಿ ಗಿರೀಶ ಮತ್ತು ಸಿಪಿಐ ಕರಿಯಪ್ಪ ಹಟ್ಟಿ ಇವರಿಗೆ ಸೂಚಿಸಿದರು.

ತಾಲೂಕಿನ ಎಪಿಎಂಸಿ, ತಾಲೂಕಾ ವೈದ್ಯಾಧಿಕಾರಿ, ರೇಷ್ಮೆ ಇಲಾಖೆ, ಕೆಇಬಿ, ಎಡಿಎಲ್ಆರ್‌, ಪಿಡಬ್ಲೂಡಿ, ಕೃಷಿ ಇಲಾಖೆ, ಸಣ್ಣ ನೀರಾವರಿ, ಕುಡಿಯುವ ನೀರು ವಿಭಾಗ, ಲ್ಯಾಂಡ್‌ ಆರ್ಮಿ, ತೋಟಗಾರಿಕೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಪ್ರಭಾರಿ ಅಧಿಕಾರಿಗಳಿರುವುದನ್ನು ಮಾಹಿತಿ ಪಡೆದ ಸಿದ್ದರಾಮಯ್ಯ ಕಾಯಂ ಅಧಿಕಾರಿಗಳ ನಿಯುಕ್ತಿ ಮಾಡಲಾಗುವುದು ಎಂದು ಹೇಳಿದರು.

ಎಲ್ಲ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ತಾಪಂ ಅಧ್ಯಕ್ಷ ರೇಣುಕಾ ಕೊಳ್ಳನ್ನವರ, ಉಪಾಧ್ಯಕ್ಷೆ ಪೂರ್ಣಿಮಾ ಪಾಟೀಲ, ಎಸಿ ಎಚ್.ಜಯಾ ಹಾಜರಿದ್ದರು.

ಟಾಪ್ ನ್ಯೂಸ್

Sidda Speach

B.Z. Zameer Ahmed Khan ‘ಕರಿಯ’ ಎನ್ನಬಾರದಿತ್ತು: ಸಿಎಂ ಸಿದ್ದರಾಮಯ್ಯ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

yadiyurappa

40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Sidda Speach

B.Z. Zameer Ahmed Khan ‘ಕರಿಯ’ ಎನ್ನಬಾರದಿತ್ತು: ಸಿಎಂ ಸಿದ್ದರಾಮಯ್ಯ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.