ವರ್ಷವಿಡೀ ಭಿನ್ನಮತ-ಅತೃಪ್ತ ಶಾಸಕರದ್ದೇ ಸದ್ದು!
•ಸೋದರರನ್ನು ಸಮಾಧಾನ ಪಡಿಸುವಲ್ಲೇ ಕಾಲಹರಣ•ಕಾಗದದಲ್ಲೇ ಉಳಿದ ಬಹುತೇಕ ಬೇಡಿಕೆ
Team Udayavani, Jun 29, 2019, 9:46 AM IST
ಚಿಕ್ಕೋಡಿ: ಹಿರೇಕೋಡಿ ಸೇರಿದಂತೆ 10 ಗ್ರಾಮಗಳಿಗೆ ಕೃಷ್ಣಾ ನದಿಯಿಂದ ನೀರು ತರುವ ಯೋಜನೆಗೆ ಶಾಸಕ ಗಣೇಶ ಹುಕ್ಕೇರಿ ಹಾಗೂ ಪ್ರಕಾಶ ಹುಕ್ಕೇರಿ ಚಾಲನೆ ನೀಡಿದ್ದರು. (ಸಂಗ್ರಹ ಚಿತ್ರ)
ಬೆಳಗಾವಿ: ಅಧಿಕಾರಕ್ಕೆ ಬಂದಾಗಿನಿಂದ ಅಸಮಾಧಾನ, ಅತೃಪ್ತಿ ಹಾಗೂ ಭಿನ್ನಮತದ ಆತಂಕವನ್ನೇ ಎದುರಿಸುತ್ತ ಬಂದಿರುವ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರಕಾರ ಒಂದು ವರ್ಷ ಪೂರೈಸಿದೆ. ಸಾಕಷ್ಟು ಅಳೆದು-ತೂಗಿ ನಡೆದ ಈ ಒಂದು ವರ್ಷದ ಅವಧಿಯಲ್ಲಿ ಗಡಿನಾಡು ಬೆಳಗಾವಿ ಜಿಲ್ಲೆಗೆ ಅಭಿವೃದ್ಧಿಯ ವಿಷಯದಲ್ಲಿ ಮಿಶ್ರ ಫಲ ಸಿಕ್ಕಿದೆ.
ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರಕಾರ ಬಂದಾಗ ಬೆಳಗಾವಿ ಜಿಲ್ಲೆಯ ಜನರಲ್ಲಿ ಸಾಕಷ್ಟು ನಿರೀಕ್ಷೆಗಳು ಗರಿಗೆದರಿದ್ದವು. 2006 ರಲ್ಲಿ ಇದೇ ರೀತಿ ಎಚ್.ಡಿ. ಕುಮಾರಸ್ವಾಮಿ ಮೊದಲ ಬಾರಿಗೆ ಸಮ್ಮಿಶ್ರ ಸರಕಾರದ ಮುಖ್ಯಮಂತ್ರಿಯಾದಾಗ ಬೆಳಗಾವಿಗೆ ಕೊಡುಗೆಗಳ ಮಹಾಪೂರವೇ ಹರಿದುಬಂದಿತ್ತು. ಆದರೆ ಈ ಬಾರಿ ಅಂತಹ ಬೆಳವಣಿಗೆ ಕಾಣುತ್ತಿಲ್ಲ.
ಈ ಸರಕಾರದಲ್ಲಿ ಬೆಳಗಾವಿ ಜಿಲ್ಲೆ ಸರಕಾರದ ಕೊಡುಗೆಗಳಿಂದ ಸುದ್ದಿ ಮಾಡಲಿಲ್ಲ. ಬದಲಾಗಿ ಭಿನ್ನಮತ, ಅತೃಪ್ತ ಶಾಸಕರು ಎಂಬ ಸುದ್ದಿಯಲ್ಲೇ ವರ್ಷ ಕಳೆಯಿತು. ಜಿಲ್ಲೆಗೆ ಹಲವಾರು ಯೋಜನೆಗಳನ್ನು ಪ್ರಕಟಿಸಬೇಕಿದ್ದ ಸರಕಾರ ಹಾಗೂ ಮುಖ್ಯಮಂತ್ರಿಗಳು ಜಾರಕಿಹೊಳಿ ಸೋದರರನ್ನು ಸಮಾಧಾನಪಡಿಸುವದರಲ್ಲೇ ಹೆಚ್ಚು ಕಾಲ ಕಳೆಯಬೇಕಾಯಿತು. ಇದರಿಂದ ಜಿಲ್ಲೆಯ ಜನರ ಬಹುತೇಕ ಬೇಡಿಕೆಗಳು ಕಾಗದದಲ್ಲೇ ಉಳಿದುಕೊಂಡವು.
ಮೈತ್ರಿ ಸರಕಾರ ರಚನೆಯಾದ ಮೇಲೆ ಉತ್ತರ ಕರ್ನಾಟಕದ ಅದರಲ್ಲೂ ವಿಶೇಷವಾಗಿ ಜಿಲ್ಲೆಯ ಬಹುತೇಕ ಮಠಾಧೀಶರು ಸುವರ್ಣ ವಿಧಾನಸೌಧದ ಮುಂದೆ ಧರಣಿ ನಡೆಸಿ ಕಚೇರಿಗಳ ಸ್ಥಳಾಂತರಕ್ಕೆ ಆಗ್ರಹಿಸಿದ್ದರು. ಅದಕ್ಕೆ ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ ಸಕ್ಕರೆ ನಿರ್ದೇಶನಾಲಯ, ನೀರಾವರಿ ಸೇರಿದಂತೆ ಒಂಬತ್ತು ಕಚೇರಿಗಳ ಸ್ಥಳಾಂತರ ಘೋಷಣೆ ಸಹ ಮಾಡಿದರು. ಆದರೆ ಇವತ್ತಿನವರೆಗೂ ಒಂದೇ ಒಂದು ಕಚೇರಿ ಉತ್ತರ ಕರ್ನಾಟಕಕ್ಕೆ ಬಂದಿಲ್ಲ ಎಂಬ ಅಸಮಾಧಾನ ಈ ಭಾಗದ ಜನರಲ್ಲಿದೆ.
ಇದಲ್ಲದೇ ಬೆಳಗಾವಿ ನಗರದಲ್ಲಿ ಆರು ದಶಕಗಳಿಂದ ಹಾಗೇ ಇರುವ ಕುಡಿಯುವ ನೀರು ಪೈಪ್‌ಲೈನ್‌ಗಳ ಬದಲಾವಣೆ, ಒಳಚರಂಡಿ ನಿರ್ಮಾಣ ಹಾಗೂ ನಗರದಲ್ಲಿ ಫ್ಲೈಓವರ್‌ಗಳ ನಿರ್ಮಾಣ ಸರಕಾರದ ಮುಂದಿರುವ ಪ್ರಮುಖ ಬೇಡಿಕೆಗಳು. ಹಿಂದಿನ ಸರಕಾರದ ಅವಧಿಯಲ್ಲಿ ಫ್ಲೈಓವರ್‌ಗಳ ನಿರ್ಮಾಣಕ್ಕೆ ಹಣ ಮಂಜೂರಾಗಿದ್ದರೂ ಅದು ಕಾರ್ಯಗತವಾಗಲೇ ಇಲ್ಲ.
ಸರಕಾರ ಬಂದ ನಂತರ ಕೆಲ ಶಾಸಕರು ತಮ್ಮ ಪ್ರಭಾವ ಬಳಸಿ ಕ್ಷೇತ್ರಕ್ಕೆ ಒಂದಿಷ್ಟು ಅನುದಾನ ತಂದರು. ಕೆರೆ ತುಂಬಿಸುವ ಯೋಜನೆಗಳಿಗೆ ಚಾಲನೆ ಸಿಕ್ಕಿತಾದರೂ ಅವುಗಳ ಕಾಮಗಾರಿ ನಿರೀಕ್ಷೆ ಮಾಡಿದಂತೆ ವೇಗ ಪಡೆದುಕೊಳ್ಳಲಿಲ್ಲ. ಈ ಸರಕಾರದಲ್ಲಿ ಅನುದಾನ ಬಿಡುಗಡೆ ವಿಷಯದಲ್ಲಿ ಬಹಳಷ್ಟು ತಾರತಮ್ಯವಾಗುತ್ತಿದೆ ಎಂಬ ಆರೋಪ ಬಿಜೆಪಿ ಶಾಸಕರದ್ದು. ಕಾಂಗ್ರೆಸ್ ಶಾಸಕರು ಇರುವ ಕ್ಷೇತ್ರಗಳಿಗೆ ಲೋಕೋಪಯೋಗಿ. ನೀರಾವರಿ, ಕುಡಿಯುವ ನೀರಿನ ಬಹುತೇಕ ಪ್ರಸ್ತಾವನೆಗಳಿಗೆ ಅನುಮೋದನೆ ಸಿಕ್ಕಿದೆ. ಆದರೆ ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಯಾವುದೇ ಅನುದಾನ ಇಲ್ಲ ಎಂಬ ಅಸಮಾಧಾನ ವ್ಯಕ್ತವಾಗಿದೆ.
ಜಿಲ್ಲೆ ವಿಭಜನೆ: ಮೈತ್ರಿ ಸರಕಾರದ ಮುಂದಿರುವ ಬಹು ದೊಡ್ಡ ಬೇಡಿಕೆಗಳಲ್ಲಿ ಇದೂ ಸಹ ಒಂದು. ಆಡಳಿತಾತ್ಮಕ ಅನುಕೂಲತೆ ದೃಷ್ಟಿಯಿಂದ ಬೆಳಗಾವಿ ವಿಭಜನೆ ಮಾಡಿ ಚಿಕ್ಕೋಡಿ ಹಾಗೂ ಗೋಕಾಕ ಹೊಸ ಜಿಲ್ಲೆಗಳನ್ನಾಗಿ ಮಾಡಬೇಕು ಎಂಬ ಬೇಡಿಕೆ ಸರಕಾರದ ಮೊದಲ ಅವಧಿಯಲ್ಲೂ ಈಡೇರಲಿಲ್ಲ. ಇದಕ್ಕಾಗಿ ಸರಕಾರದ ಮೇಲೆ ಸಾಕಷ್ಟು ಒತ್ತಡ ಹಾಕಲಾಗಿತ್ತು. ಹೋರಾಟಗಳು ನಡೆದವು. ಆದರೆ ರಾಜಕೀಯ ಪಕ್ಷಗಳಲ್ಲಿನ ಒಗ್ಗಟ್ಟಿನ ಕೊರತೆಯಿಂದ ಇದು ನನೆಗುದಿಗೆ ಬಿದ್ದಿತು.
ಕಳೆದ ಬಜೆಟ್ದಲ್ಲಿ ಬೆಳಗಾವಿಯಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು ಎಂದು ಘೋಷಣೆ ಮಾಡಲಾಗಿತ್ತು. ಆದರೆ ಬಜೆಟ್ ನಂತರ ಅಂತಹ ಯಾವುದೇ ಪ್ರಗತಿ ಕಾಣಲಿಲ್ಲ.
•ಕೇಶವ ಆದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.