ಸ್ಫೋಟಕ ಪತ್ತೆ: ನಿವಾಸಿಗಳಲ್ಲಿ ಹೆಚ್ಚಿದ ಆತಂಕ

ವಿದೇಶಿ ನಾಗರಿಕರ ಪತ್ತೆ ಕಾರ್ಯ ಮುಗಿದಿಲ್ಲ • ಮಕ್ಕಳನ್ನು ಶಾಲೆಗೆ ಕಳುಹಿಸಲು ಧೈರ್ಯ ತೋರದ ಪೋಷಕರು

Team Udayavani, Jun 29, 2019, 11:05 AM IST

rn-tdy-1..

ರಾಮನಗರದಲ್ಲಿ ಸುಧಾರಿತ ಸ್ಫೋಟಕಗಳು ಪತ್ತೆಯದ ಸ್ಥಳ.

ರಾಮನಗರ: ನಗರದ ಟಿಪ್ಪು ನಗರದಲ್ಲಿ ಪತ್ತೆಯಾದ ಎರಡು ಸುಧಾರಿತ ಸ್ಫೋಟಕಗಳ ಪ್ರಕರಣ ಜಿಲ್ಲಾ ಕೇಂದ್ರದ ನಾಗರಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ವಿಶೇಷವಾಗಿ ಟಿಪ್ಪು ನಗರದ ನಿವಾಸಿಗಳು ಆತಂಕದಿಂದ ಹೊರ ಬಂದಿಲ್ಲ.

ಸ್ಫೋಟಕಗಳು ಪತ್ತೆಯಾದ ಸ್ಥಳದ ಬಳಿಯಲ್ಲೇ ಇರುವ ಖಾಸಗಿ ಶಾಲೆಯಲ್ಲಿ ಮಕ್ಕಳ ಹಾಜರಾತಿ ತೀರಾ ವಿರಳವಾಗಿರುವುದು ಇದಕ್ಕೆ ಸಾಕ್ಷಿ. ಶಾಲೆ ನಡೆಯುತ್ತಿದೆ ಎಂದು ಶಿಕ್ಷಕರು ಪೋಷಕರಿಗೆ ತಿಳಿಸಿದರು, ಆತಂಕದಲ್ಲಿ ರುವ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸುವ ಧೈರ್ಯ ತೋರಲಿಲ್ಲ. ಎನ್‌ಐಎ ಅಧಿಕಾರಿಗಳು ಸ್ಫೋಟಕಗಳ ಪತ್ತೆಗೆ ಮುನ್ನ ಸದರಿ ಶಾಲೆಯ ತರಗತಿಗಳನ್ನು ಸ್ಥಗಿತಗೊಳಿಸಿ, ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿದ್ದರು. ತದ ನಂತರ ಈ ಭಾಗದಲ್ಲಿ ವಿಭಿನ್ನವಾದ ವದಂತಿಗಳು ನಗರದಲ್ಲಿ ಹರಡಿದ್ದವು. ಇವು ಪೋಷಕರಲ್ಲಿ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಸ್ಫೋಟಕಗಳು ಪತ್ತೆಯಾದ ರಸ್ತೆಯಲ್ಲಿ ಜನ ಸಂಚಾರವೂ ಎಂದಿನಂತೆ ಇರಲಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.

ನಗರವಾಸಿಗಳಲ್ಲಿ ಹೆಚ್ಚಿದೆ ಆತಂಕ: ದೊಡ್ಡಬಳ್ಳಾಪುರದಲ್ಲಿ ಸಿಕ್ಕಿಬಿದ್ದ ಶಂಕಿತ ಉಗ್ರ ಹಬೀಬುರ್‌ ಕೊಟ್ಟ ಸುಳಿವಿನ ಮೇರೆಗೆ ರಾಷ್ಟ್ರೀಯ ತನಿಖಾ ದಳ ರಾಮನಗರದ ಟಿಪ್ಪುನಗರದ ಸೀರಹಳ್ಳದ ಸೇತುವೆ ಬಳಿ ಎರಡು ಸುಧಾರಿತ ಸ್ಫೋಟಕಗಳನ್ನು ಪತ್ತೆ ಹಚ್ಚಿದ್ದರು. ಈ ಪ್ರಕರಣ ಜಿಲ್ಲಾ ಕೇಂದ್ರದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಕಳೆದ ವರ್ಷವಷ್ಟೇ ಶಂಕಿತ ಉಗ್ರನೊಬ್ಬ ಇಲ್ಲಿ ಪತ್ತೆಯಾಗಿದ್ದ ಪ್ರಕರಣ ಇನ್ನು ಜನಮಾನಸದಲ್ಲಿ ಮಾಸುವ ಮುನ್ನವೇ ಸ್ಫೋಟಕಗಳು ಪತ್ತೆಯಾಗಿರುವುದು ಜನರ ಆತಂಕವನ್ನು ಹೆಚ್ಚಿಸಿದೆ. ಇಡೀ ನಗರದಲ್ಲಿ ಇದೇ ಚರ್ಚೆಯ ವಸ್ತುವಾಗಿದೆ.

ಬಾಡಿಗೆ ಸಹವಾಸವೇ ಬೇಡ ಎನ್ನುತ್ತಿರುವ ಮಾಲೀಕರು: ಸೀರಳ್ಳ, ಟಿಪ್ಪು ನಗರ ಮತ್ತು ಸುತ್ತಮು ತ್ತಲ ಸ್ಥಳಗಳಲ್ಲಿ ವಾಸಿಸುವ ನಾಗರಿಕರು ಹೊಸಬರನ್ನು ಅನುಮಾನದಿಂದಲೇ ನೋಡುವಂತಾಗಿದೆ. ಕೆಲವು ಮನೆ ಮತ್ತು ಅಂಗಡಿ ಮಳಿಗೆಯ ಮಾಲೀಕರು ಬಾಡಿಗೆ ಸಹವಾಸವೇ ಸಾಕೆನಿಸಿದೆ ಎಂದಿದ್ದಾರೆ. ಗುರುತಿಸಿಕೊಳ್ಳಲು ಇಚ್ಛಿಸದ ವ್ಯಕ್ತಿಯೊಬ್ಬರು, ಈ ಭಾಗದಲ್ಲಿ ಇನ್ನು ಮುಂದೆ ಆಧಾರ್‌ ಕಾರ್ಡಿನಲ್ಲಿ ಕರ್ನಾಟಕದ ವಿಳಾಸವಿದ್ದರೆ ಮಾತ್ರ ಬಾಡಿಗೆಗೆ ಕೊಡುವ ಬಗ್ಗೆ ಚಿಂತನೆ ನಡೆಸಿರುವ ಬಗ್ಗೆ ತಿಳಿಸಿದ್ದಾರೆ.

● ಬಿ.ವಿ.ಸೂರ್ಯ ಪ್ರಕಾಶ್‌

ಟಾಪ್ ನ್ಯೂಸ್

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

1-eewq

ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ

1-5555

Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಪ್ರೋತ್ಸಾಹ ಧನ: ಸಚಿವ ಶಿವಾನಂದ ಪಾಟೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Ramanagara: ವಿಪಕ್ಷ, ಕಾಂಗ್ರೆಸ್‌ ನಾಯಕರಿದಂಲೂ ಸಿದ್ದರಾಮಯ್ಯ ಟಾರ್ಗೆಟ್‌; ವಾಟಾಳ್‌

Kanakapura: ಕನಕಪುರ ಸರ್ಕಾರಿ ಬಸ್‌ನಲ್ಲಿ ಖಾಸಗಿ ವ್ಯಕ್ತಿ ಕಂಡಕ್ಟರ್!

Kanakapura: ಕನಕಪುರ ಸರ್ಕಾರಿ ಬಸ್‌ನಲ್ಲಿ ಖಾಸಗಿ ವ್ಯಕ್ತಿ ಕಂಡಕ್ಟರ್!

4-ramanagara

Ramanagara: ಬಸ್ ಪ್ರಯಾಣ ದರ ಹೆಚ್ಚಳ‌ ಖಂಡಿಸಿ ಗ್ರಾಮಸ್ಥರಿಂದ ಪ್ರತಿಭಟನೆ

Ramanagar; ಎಲ್&ಟಿ ಮುಖ್ಯಸ್ಥ ಸುಬ್ರಮಣಿಯನ್ ಹೇಳಿಕೆ ವಿರುದ್ದ ವಾಟಾಳ್ ನಾಗರಾಜ್‌ ಪ್ರತಿಭಟನೆ

Ramanagar; ಎಲ್&ಟಿ ಮುಖ್ಯಸ್ಥ ಸುಬ್ರಮಣಿಯನ್ ಹೇಳಿಕೆ ವಿರುದ್ದ ವಾಟಾಳ್ ನಾಗರಾಜ್‌ ಪ್ರತಿಭಟನೆ

DK-Ramanagra

Ramanagara: ಡ್ರೋನ್‌ ಮೂಲಕ ಕೃಷಿಭೂಮಿ ಮರು ಸರ್ವೇ ಯಶಸ್ವಿ: ದೇಶದಲ್ಲೇ ಮೊದಲು

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

POlice

Puttur: ಅನಾಥ ಸ್ಥಿತಿಯಲ್ಲಿ ಎರಡು ಬೈಕ್‌; ವಶಕ್ಕೆ ಪಡೆದುಕೊಂಡ ಪೊಲೀಸರು

1-eewq

ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ

1-5555

Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.