ಗೋ ಕಳವು, ಅಕ್ರಮ ಸಾಗಾಟ ವಿರುದ್ಧ ಕಣ್ಗಾವಲು
ಪತ್ತೆಗೆ ವಿಶೇಷ ತಂಡ ರಚನೆ: ಸಂದೀಪ್ ಪಾಟೀಲ್
Team Udayavani, Jun 29, 2019, 11:05 AM IST
ಮಂಗಳೂರು: ಗೋ ಕಳವು ಮತ್ತು ಅಕ್ರಮ ಸಾಗಾಟ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿ ಗಣಿಸಿದ್ದು, ಇವುಗಳ ಮೇಲೆ ಕಟ್ಟುನಿಟ್ಟಿನ ಕಣ್ಗಾವಲು ಇರಿಸಲು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ಅವರು ಶುಕ್ರವಾರ ಫೋನ್ ಇನ್ ಕಾರ್ಯಕ್ರಮದ ಬಳಿಕ ಸುದ್ದಿಗಾರರ ಜತೆ ಮಾತನಾಡಿ, ಜೋಕಟ್ಟೆ ಪ್ರಕರಣದಲ್ಲಿ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿ ಇಬ್ಬರನ್ನು ಬಂಧಿಸಲಾಗಿದೆ ಎಂದರು.
ಗೋವು ಕಳ್ಳತನಕ್ಕೆ ಸಂಬಂಧಿಸಿ ಹಳೆ ಆರೋಪಿಗಳ ಬಗ್ಗೆ ನಿಗಾ ಇರಿಸಲಾಗುತ್ತಿದೆ. ಎಲ್ಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ಗಸ್ತು ಬಿಗಿ ಗೊಳಿಸುವುದರ ಜತೆಗೆ ಹೆಚ್ಚಿಸಲಾಗುತ್ತಿದೆ. ಗೋ ಕಳವು ಅಪರಾಧಿಗಳ ಚಟುವಟಿಕೆಗಳನ್ನು ಪರಿಶೀಲಿಸುವ ನಿಟ್ಟಿನಲ್ಲಿ ಅವರ ಮನೆಗಳಲ್ಲಿಯೂ ತಪಾಸಣೆ ನಡೆಸಲಾಗುವುದು. ಕೆಲವು ನಿರ್ದಿಷ್ಟ ಪ್ರದೇಶಗಳ ಗೋ ಕಳವು ಅಪರಾಧಿಗಳ ಮೇಲೂ ನಿಗಾ ಇರಿಸಲಾಗಿದೆ ಎಂದರು.
ಮಂಗಳೂರು ನಗರ ಮಾತ್ರ ವಲ್ಲದೆ, ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳಿಗೆ ಸಂಬಂಧಿಸಿದ ಇಂತಹ ಅಪರಾಧಿಗಳ ಬಗ್ಗೆಯೂ ಸಂಬಂಧಪಟ್ಟ ಪೊಲೀಸ್ ವರಿಷ್ಠರಿಗೆ ಪತ್ರ ಬರೆಯಲಾಗಿದೆ. ಕುಟ್ಟ ಇಮ್ರಾನ್, ಬಶೀರ್, ಅನ್ಸಾರ್ ಮೊದಲಾದ ತಲೆಮರೆಸಿಕೊಂಡಿರುವ ಗೋ ಕಳವು ಅಪರಾಧಿಗಳನ್ನು ಬಂಧಿ ಸಲು ವಿಶೇಷ ತಂಡದ ಮೂಲಕ ಪತ್ತೆ ನಡೆಯುತ್ತಿದೆ ಎಂದು ತಿಳಿಸಿದರು.
“ಕಾನೂನು ಕೈಗೆತ್ತಿಕೊಳ್ಳದಿರಿ; ನಮಗೆ ಮಾಹಿತಿ ಕೊಡಿ ‘ ಅಕ್ರಮ ಗೋ ಸಾಗಾಟ, ಗೋ ಕಳವಿಗೆ ಸಂಬಂಧಿಸಿ ಮಾಹಿತಿ ದೊರಕಿದಾಗ ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು ಎಂದು ಮನವಿ ಮಾಡಿದ ಪೊಲೀಸ್ ಆಯುಕ್ತರು, ಅಕ್ರಮ ವ್ಯವಹಾರದ ಬಗ್ಗೆ ಮಾಹಿತಿ ಕೊಡಿ; ನಾವು ಕಠಿನ ಕ್ರಮ ಕೈಗೊಳ್ಳು ತ್ತೇವೆ ಎಂದರು. ರಾತ್ರಿ ಗಸ್ತು ಕಾರ್ಯಾಚರಣೆ ಜತೆಗೆ ನಾಕಾಬಂದಿ ಮಾಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
MUST WATCH
ಹೊಸ ಸೇರ್ಪಡೆ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.