ರಸ್ತೆ ಮೇಲೆ ಹರಿದ ಕೊಳಚೆ ನೀರು;ವ್ಹೀಲ್ಚೇರ್ ಇರಿಸಿ ಪ್ರತಿಭಟನೆ
Team Udayavani, Jun 29, 2019, 11:23 AM IST
ಹುಬ್ಬಳ್ಳಿ: ಒಳಚರಂಡಿ ಕೊಳಚೆ ರಸ್ತೆ ಮೇಲೆ ಹರಿಯುತ್ತಿದ್ದರೂ ಕ್ರಮ ಕೈಗೊಳ್ಳದಿದ್ದರಿಂದ ತಿಮ್ಮಸಾಗರ ದೇವಸ್ಥಾನ ರಸ್ತೆಯಲ್ಲಿ ಡಾ| ಎಂ.ಸಿ.ಸಿಂಧೂರ ನೇತೃತ್ವದಲ್ಲಿ ನಿವಾಸಿಗಳು ಪ್ರತಿಭಟನೆ ನಡೆಸಿದರು.
ಹುಬ್ಬಳ್ಳಿ: ಒಳಚರಂಡಿ ಕೊಳಚೆ ರಸ್ತೆ ಮೇಲೆ ಹರಿಯುತ್ತಿದ್ದರೂ ಕ್ರಮ ಕೈಗೊಳ್ಳದಿದ್ದರಿಂದ ತಿಮ್ಮಸಾಗರ ದೇವಸ್ಥಾನ ರಸ್ತೆಯಲ್ಲಿ ಡಾ| ಎಂ.ಸಿ.ಸಿಂಧೂರ ನೇತೃತ್ವದಲ್ಲಿ ನಿವಾಸಿಗಳು ಶುಕ್ರವಾರ ವ್ಹೀಲ್ ಚೇರ್ ಇರಿಸಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.
ಕಳೆದ ಒಂದೂವರೆ ತಿಂಗಳಿಂದ ಒಳಚರಂಡಿ ತ್ಯಾಜ್ಯ ರಸ್ತೆ ಮೇಲೆ ಹರಿಯುತ್ತಿದೆ. ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು, ಜನರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ.
ಮಹಾನಗರ ಪಾಲಿಕೆಗೆ ಹಲವು ಬಾರಿ ಮನವಿ ಮಾಡಿದರೂ ಕ್ರಮ ಕೈಗೊಂಡಿಲ್ಲ. ಪೈಪ್‌ಗ್ಳು ಹಳೆಯದಾಗಿದ್ದು, ಅವುಗಳನ್ನು ಬದಲಿಸಬೇಕೆಂದು ಹೇಳುತ್ತಿದ್ದಾರೆ. ಕೂಡಲೇ ಪಾಲಿಕೆ ಕ್ರಮ ಕೈಗೊಳ್ಳಬೇಕೆಂದು ನಿವಾಸಿಗಳು ಒತ್ತಾಯಿಸಿದರು. ವಲಯ ಸಂಖ್ಯೆ 5 ಹಾಗೂ ವಲಯ ಸಂಖ್ಯೆ 9ರ ಮಧ್ಯೆ ಈ ರಸ್ತೆ ಬರುವುದರಿಂದ ರಸ್ತೆಯ ಜವಾಬ್ದಾರಿಯನ್ನು ಎರಡೂ ವಲಯದವರು ತೆಗೆದುಕೊಳ್ಳದೇ ಕಡೆಗಣಿಸಿದ್ದಾರೆಂದು ಆರೋಪಿಸಿದರು.
ಇಲ್ಲಿನ ನಿವಾಸಿಗಳು ಸಮರ್ಪಕವಾಗಿ ತೆರಿಗೆ ಪಾವತಿಸುತ್ತಿದ್ದರೂ ಬಡಾವಣೆಗೆ ಅಗತ್ಯ ಸೌಲಭ್ಯ ಕಲ್ಪಿಸುತ್ತಿಲ್ಲ. ಒಂದು ವೇಳೆ ಒಳಚರಂಡಿ ದುರಸ್ತಿ ಮಾಡದಿದ್ದರೆ ಮನೆ ತೆರಿಗೆ ತುಂಬದೇ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಅರ್ಜುನ ಪವಾರ, ತುಷಾರ ಪವಾರ, ಸೂರಜ್ ಕವಳಿ, ಮಂಜುಳಾ ಪವಾರ, ವೆಂಕಟೇಶ ನಾಯಕ, ಸಾವಿತ್ರಿ ನಾಯಕ, ನಾಗರತ್ನಾ ನವಲೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.