ಕುಗ್ಗುತ್ತಿದೆ ಕಾಂಗ್ರೆಸ್ ಬಲ
•ಅಧ್ಯಕ್ಷರಿಗೂ ಇಲ್ಲ ಪಕ್ಷದ ಮೇಲೆ ಭರವಸೆ•ಸೋತರೂ ಧೃತಿಗೆಡದ ಬಿಜೆಪಿ
Team Udayavani, Jun 29, 2019, 12:39 PM IST
ಬೆಳಗಾವಿ: ನಗರದಲ್ಲಿ ನಡೆದ ಬಿಜೆಪಿ ಸದಸ್ಯತ್ವ ಅಭಿಯಾನದ ಪೂರ್ವಭಾವಿ ಸಭೆಯನ್ನು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ ಉದ್ಘಾಟಿಸಿದರು.
ಬೆಳಗಾವಿ: ಕಾಂಗ್ರೆಸ್ ಪಕ್ಷದ ಮೇಲೆ ಈಗ ದೇಶದ ಜನರಲ್ಲಿ ಭರವಸೆ ಹೊರಟುಹೋಗಿದೆ. ಸ್ವತಃ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಪಕ್ಷದ ಮೇಲೆ ಭರವಸೆ ಇಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ ಲೇವಡಿ ಮಾಡಿದರು.
ನಗರದ ಖಾಸಗಿ ಹೋಟೆಲ್ನಲ್ಲಿ ಶುಕ್ರವಾರ ನಡೆದ ಬಿಜೆಪಿ ಸದಸ್ಯತ್ವ ಅಭಿಯಾನ ಪೂರ್ವಭಾವಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರೇ ಭರವಸೆ ಕಳೆದುಕೊಂಡ ಏಕೈಕ ಪಕ್ಷ ಎಂದರೆ ಅದು ಕಾಂಗ್ರೆಸ್ ಎಂದು ಟೀಕಿಸಿದರು.
ದೇಶದ ಅನೇಕ ಚುನಾವಣೆಗಳಲ್ಲಿ ಬಿಜೆಪಿ ಅತೀ ಹೆಚ್ಚು ಸೋತ ಪಕ್ಷ. ಆದರೆ ಎಂದಿಗೂ ನಿರಾಶವಾಗದ, ನಂಬಿಕೆ, ವಿಶ್ವಾಸ ಹಾಗೂ ಭರವಸೆ ಕಳೆದುಕೊಳ್ಳದ ಪಕ್ಷವಾಗಿ ನಿಂತಿದೆ. ಸಾಕಷ್ಟು ಬಾರಿ ಸೋತರೂ ಅದರಿಂದ ಧೃತಿ ಗೆಡಲಿಲ್ಲ. ಜನರ ಪ್ರೀತಿ ಕಳೆದುಕೊಳ್ಳಲಿಲ್ಲ. ಆದರೆ ಕಾಂಗ್ರೆಸ್ ಪ್ರತಿ ಬಾರಿ ಸೋತಾಗ ಇಭ್ಭಾಗವಾಗುತ್ತಲೇ ಹೋಗುತ್ತಿದೆ ಎಂದರು.
ಬಿಜೆಪಿ ಅಲ್ಪಸಂಖ್ಯಾತ ವಿರೋಧಿಗಳು ಎಂದು ಕಾಂಗ್ರೆಸ್‌ನವರು ಯಾವಾಗಲೂ ಬಿಂಬಿಸಿ ಮತಬ್ಯಾಂಕ್ ರಾಜಕಾರಣ ಮಾಡಿದರು. ಆದರೆ ಅಲ್ಪಸಂಖ್ಯಾತರ ಅಭಿವೃದ್ಧಿ ಮಾಡಲಿಲ್ಲ. ಬದಲಾಗಿ ಅವರನ್ನು ತಮ್ಮ ಮೆಟ್ಟಿಲುಗಳನ್ನಾಗಿ ಬಳಕೆ ಮಾಡಿಕೊಂಡರು. ಅದು ಈಗ ಜನರಿಗೆ ಅರಿವಾಗುತ್ತಿದೆ. ಅದರ ಪಾಠ ಚುನಾವಣೆಯಲ್ಲಿ ಒಂದೊಂದಾಗಿ ಹೊರಬರುತ್ತಿದ್ದು ಇದರಿಂದ ಕಾಂಗ್ರೆಸ್ ಬಲ ಕರಗುತ್ತ ಹೋಗುತ್ತಿದೆ ಎಂದು ಅವರು ಹೇಳಿದರು.
ಬಿಜೆಪಿ ಯಾವತ್ತೂ ಜಾತಿ, ಧರ್ಮದ ಮೇಲೆ ಚುನಾವಣೆಗೆ ಹೋಗಿಲ್ಲ. ಜನರ ನಂಬಿಕೆ, ಪಕ್ಷ ಸಂಘಟನೆ ಹಾಗೂ ಅಭಿವೃದ್ಧಿ ಕಾರ್ಯಗಳ ಮೇಲೆ ಚುನಾವಣೆ ಎದುರಿಸಿದೆ. ಒಂದು ಪಕ್ಷ ಸಂಘಟನೆಯ ಆಧಾರದ ಮೇಲೆ ಹೇಗೆ ಚುನಾವಣೆ ಗೆಲ್ಲಬಲ್ಲದು ಎಂಬುದನ್ನು ಬಿಜೆಪಿ ಅಧ್ಯಕ್ಷ ಅಮಿತ್ ಶಾ ತೋರಿಸಿಕೊಟ್ಟಿದ್ದಾರೆ. ಕಳೆದ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸರಕಾರ ಮಾಡಿದ ಸಾಧನೆ ಆಧಾರದ ಮೇಲೆ ನಾವು ಚುನಾವಣೆ ಎದುರಿಸಿದ್ದೆವು. ಅದಕ್ಕೆ ಈಗ ಬಂದಿರುವ ಫಲಿತಾಂಶವೇ ಸಾಕ್ಷಿ ಎಂದರು.
ಬಿಜೆಪಿ ಈಗ ಜಗತ್ತಿನಲ್ಲೇ ಅತೀ ಹೆಚ್ಚು ಅಂದರೆ 11 ಕೋಟಿ ಸದಸ್ಯತ್ವ ಹೊಂದಿದ ಪಕ್ಷವಾಗಿ ದಾಖಲೆ ಮಾಡಿದೆ. ಕೇರಳ, ತಮಿಳುನಾಡು, ಅಂಧ್ರಪ್ರದೇಶ ಸೇರಿದಂತೆ ಇಡೀ ಭಾರತವನ್ನು ಅವರಿಸಿಕೊಳ್ಳಬೇಕಿರುವುದು ಈಗ ನಮ್ಮ ಮುಂದಿರುವ ಸವಾಲು. ಅದಕ್ಕೆ ನಮ್ಮ ಕಾರ್ಯಕರ್ತರು ಸಿದ್ಧರಾಗಬೇಕಿದೆ ಎಂದು ಹೇಳಿದರು.
ಬಿಜೆಪಿ ಬೆಳಗಾವಿ ಜಿಲ್ಲಾ ಗ್ರಾಮೀಣ ಅಧ್ಯಕ್ಷ ಡಾ. ವಿಶ್ವನಾಥ ಪಾಟೀಲ ಮಾತನಾಡಿ, ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕಾರ್ಯಕರ್ತರ ಸಮೀಪ ಹೋಗದ ಕಾರಣ ಹೀನಾಯ ಸೋಲು ಅನುಭವಿಸಿದೆ. ನಮಗೆ ಅಂತಹ ಪರಿಸ್ಥಿತಿ ಬರುವುದು ಬೇಡ. ಆದ್ದರಿಂದ ಕಾರ್ಯಕರ್ತರು ಮುಂದಿನ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈಗಿನಿಂದಲೇ ಮನೆ ಮನೆಗೆ ತೆರಳಿ ಹೆಚ್ಚು ಸದಸ್ಯರನ್ನು ಮಾಡಬೇಕು ಎಂದು ಹೇಳಿದರು.
ಕಳೆದ ಬಾರಿ ರಾಜ್ಯದಲ್ಲಿ 80 ಲಕ್ಷ ಸದಸ್ಯತ್ವ ಗುರಿಯನ್ನು ನಮಗೆ ಪಕ್ಷದ ವರಿಷ್ಠರು ನೀಡಿದ್ದರು. ಈ ಬಾರಿ 50 ಲಕ್ಷದ ಗುರಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾವು ಪಕ್ಷ ಸಂಘಟನೆಗೆ ಇನ್ನೂ ಹೆಚ್ಚಿನ ಒತ್ತು ನೀಡಬೇಕು ಎಂದರು.
ಕಿತ್ತೂರ ಶಾಸಕ ಮಹಾಂತೇಶ ದೊಡ್ಡಗೌಡರ ಮಾತನಾಡಿ, ನಮ್ಮ ಸಂಘಟನೆ ಲೋಕಸಭೆ ಚುನಾವಣೆಯ ಅಭೂತ ಪೂರ್ವ ಫಲಿತಾಂಶದ ಮೂಲಕ ಒಳ್ಳೆಯ ಸಂದೇಶ ನೀಡಿದೆ. ಇದು ಮುಂದುವರಿಯಬೇಕು. ಚುನಾವಣೆಯಲ್ಲಿ ಗೆದ್ದಿದ್ದೇವೆ ಎಂದು ಮೈಮರೆತು ಕೂಡುವ ಕಾಲ ಇದಲ್ಲ ಎಂದು ಹೇಳಿದರು.
ಸಭೆಯಲ್ಲಿ ಬಿಜೆಪಿ ಬೆಳಗಾವಿ ವಿಭಾಗದ ಪ್ರಭಾರಿ ಈರಣ್ಣ ಕಡಾಡಿ, ನಗರ ಘಟಕದ ಅಧ್ಯಕ್ಷ ರಾಜೇಂದ್ರ ಹರಕುಣಿ, ಜಿಲ್ಲಾ
ಪ್ರಧಾನ ಕಾರ್ಯದರ್ಶಿ ಧನಂಜಯ ಜಾಧವ, ಮಾಜಿ ಶಾಸಕರಾದ ಸಂಜಯ ಪಾಟೀಲ, ಜಗದೀಶ ಮೆಟಗುಡ್, ಗುರುಪಾದ ಕಳ್ಳಿ ಮುರುಘೇಂದ್ರ ಪಾಟೀಲ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.