ಕೂಲಿ ಕೆಲಸಕ್ಕೆ ಆಗ್ರಹಿಸಿ ಪ್ರತಿಭಟನೆ
Team Udayavani, Jun 29, 2019, 2:04 PM IST
ದೋಟಿಹಾಳ: ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸಕ್ಕೆ ಆಗ್ರಹಿಸಿ ಕೂಲಿ ಕಾರ್ಮಿಕರು ಬಿಜಕಲ್ ಗ್ರಾಪಂ ಮುಂದೆ ಪ್ರತಿಭಟನೆ ನಡೆಸಿದರು.
ದೋಟಿಹಾಳ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡಲು ಆಗ್ರಹಿಸಿ ಕೂಲಿಕಾರರು ಬಿಜಕಲ್ ಗ್ರಾಪಂಗೆ ಮುತ್ತಿಗೆ ಪ್ರತಿಭಟನೆ ನಡೆಸಿದರು.
ಈ ವೇಳೆ ಕರ್ನಾಟಕ ಪ್ರಾಂತ ರೈತ ಸಂಘದ ದೊಡ್ಡನಗೌಡ ಪಾಟೀಲ ಬಿಜಕಲ್ ಮಾತನಾಡಿ, ಬಿಜಕಲ್ ಗ್ರಾಪಂ ವ್ಯಾಪ್ತಿಯಲ್ಲಿ ಕೂಲಿಕಾರರು ಫಾರಂ ನಂ.6 ಸಲ್ಲಿಸಿ 25 ದಿನಗಳಾದರು ಕೆಲಸ ನೀಡುತ್ತಿಲ್ಲ. ಸ್ಥಳೀಯವಾಗಿ ಕೆಲಸ ನೀಡದ ಹಿನ್ನೆಲೆಯಲ್ಲಿ ಬೆಂಗಳೂರು, ಗೋವಾ, ಮಂಗಳೂರಿಗೆ ಹೋಗುವುದು ಅನಿವಾರ್ಯವಾಗಿದೆ. ಇಲ್ಲಿ ಮಾಡಲು ಕೆಲಸ ಬೇಕಾದಷ್ಟಿದ್ದರೂ, ಕೆಲಸ ನೀಡುತ್ತಿಲ್ಲ. ಯಾವುದೇ ಕಾರಣಕ್ಕೂ ಈ ಯೋಜನೆಯಲ್ಲಿ ಯಂತ್ರಗಳಿಂದ ಕೆಲಸ ನಿರ್ವಹಿಸದೇ ಕೂಲಿಕಾರರಿಂದ ಕೆಲಸ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ತಾಲೂಕು ಅಧ್ಯಕ್ಷ ಗವಿಸಿದ್ದಪ್ಪ ಗಡಾದ್ ಮಾತನಾಡಿ, ಕೂಲಿಕಾರರರು ಬಾಕಿ ವೇತನ ಪಾವತಿಸಬೇಕು. 14ನೇ ಹಣಕಾಸು ಯೋಜನೆ ಖರ್ಚು ವೆಚ್ಚದ ಮಾಹಿತಿ ನೀಡಬೇಕು. ಉದ್ಯೋಗ ಖಾತ್ರಿ ಯೋಜನೆಯ ಕ್ರಿಯಾ ಯೋಜನೆ ಮಾಹಿತಿ, ವಸತಿ ಯೋಜನೆಗಳಲ್ಲಿ ಫಲಾನುಭವಿಗಳ ಮಾಹಿತಿ, 2014-15ರಿಂದ 2018-2019ನೇ ಸಾಲಿನ ಜಮಾ ಬಂದಿ, ಅಂಗವಿಕಲರ ಅನುದಾನ, ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ನೀಡಿದ ಅನುದಾನದ ಸಂಪೂರ್ಣ ಮಾಹಿತಿಗೆ ಆಗ್ರಹಿಸಿದರು. ಇದೇ ವೇಳೆ ಬಸವರಾಜ್ ಬೆಳಗಲ್ಲ, ವಿರೂಪನಗೌಡ ಪಾಟೀಲ, ಭದ್ರಮ್ಮ ಗುಜಮಾಗಡಿ, ಹನಮವ್ವ ವಡ್ಡರ್, ಮಹಾಂತೇಶ ವಂಕಲಕುಂಟ, ಸಂಗಮೇಶ ಕೊಪ್ಪಳ, ಶಾವಂತ್ರೆವ್ವ ತಳವಾರ, ಮಾನಮ್ಮ ಬಡಿಗೇರ, ಪಾರ್ವತಿ ಹೂಗಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.