ಸಂವಿಧಾನಕ್ಕೆ ಎದುರಾದ ಸವಾಲು ಹಿಮ್ಮೆಟ್ಟಿಸಿ

ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಚ್.ಎನ್‌.ನಾಗಮೋಹನದಾಸ್‌ ಸಲಹೆ

Team Udayavani, Jun 29, 2019, 4:14 PM IST

29-June-30

ಚಿಕ್ಕಮಗಳೂರು: ನಗರದ ಕುವೆಂಪು ಕಲಾಮಂದಿರದಲ್ಲಿ ಏರ್ಪಡಿಸಿದ್ದ ಸಂವಿಧಾನ ಓದು ಕಾರ್ಯಾಗಾರವನ್ನು ನ್ಯಾಯಮೂರ್ತಿ ಎಚ್.ಎನ್‌.ನಾಗಮೋಹನದಾಸ್‌ ಉದ್ಘಾಟಿಸಿದರು.

ಚಿಕ್ಕಮಗಳೂರು: ದೇಶದ ಸಂವಿಧಾನ ಪ್ರಸ್ತುತ ಎದುರಿಸುತ್ತಿರುವ ಸವಾಲುಗಳನ್ನು ಎಲ್ಲರೂ ಒಟ್ಟಾಗಿ ಹಿಮ್ಮೆಟ್ಟಿಸಬೇಕೆಂದು ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಚ್.ಎನ್‌.ನಾಗಮೋಹನದಾಸ್‌ ಕರೆ ನೀಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ವಿವಿಧ ಇಲಾಖೆ ಹಾಗೂ ಸಮುದಾಯ ಮತ್ತು ಸಹಯಾನ ಸಂಘಟನೆಗಳ ಸಹಯೋಗದಲ್ಲಿ ಕುವೆಂಪು ಕಲಾಮಂದಿರದಲ್ಲಿ ಗ್ರಾಪಂ, ತಾಪಂ ಜನಪ್ರತಿನಿಧಿಗಳು ಮತ್ತು ಪಿಡಿಒಗಳಿಗೆ ಶುಕ್ರವಾರ ಏರ್ಪಡಿಸಿದ್ದ ‘ಸಂವಿಧಾನ ಓದು’ ಕಾರ್ಯಾಗಾರದಲ್ಲಿ ಅವರು ಉಪನ್ಯಾಸ ನೀಡಿದರು.

ಭಾರತದ ಸಂವಿಧಾನದಲ್ಲಿ ಯಾವುದೇ ದೋಷವಿಲ್ಲ. ಅದನ್ನು ಜಾರಿ ಮಾಡುವವರಲ್ಲಿ ದೋಷವಿದೆ. ಹಾಗಾಗಿ, ಪ್ರಸ್ತುತ ಸಂವಿಧಾನ ಸಾಕಷ್ಟು ಸವಾಲು ಎದುರಿಸುವಂತಾಗಿದೆ. ಈ ಸವಾಲುಗಳ್ನು ಹಿಮ್ಮೆಟ್ಟಿಸುವ ಹೊಣೆಗಾರಿಕೆ ಎಲ್ಲರ ಮೇಲಿದೆ ಎಂದು ಹೇಳಿದರು.

ಹುಟ್ಟಿನಿಂದ ಸಾಯುವವರೆಗೂ ನಾವು ಕಾನೂನಿನ ನಿಯಂತ್ರಣಕ್ಕೊಳಪಡುತ್ತೇವೆ. ಎಲ್ಲ ಕಾನೂನುಗಳ ತಾಯಿ ಸಂವಿಧಾನ. ಆ ತಾಯಿಯನ್ನು ಅರ್ಥ ಮಾಡಿಕೊಳ್ಳಬೇಕು. ಹಿಂದು, ಕ್ರೈಸ್ತ, ಮುಸಲ್ಮಾನ ಮತ್ತಿತರೆ ಧರ್ಮದವರಿಗೆ ಅವರದೇ ಆದ ಧರ್ಮ ಗ್ರಂಥಗಳಿವೆ. ಆದರೆ, ಇವರೆಲ್ಲರಿಗೂ ಸಂವಿಧಾನವೇ ಮಹಾಗ್ರಂಥ ಎಂದರು.

ಒಂದು ದೇಶ ಅಂದರೆ ಕೇವಲ ಮಣ್ಣಲ್ಲ. ಇತಿಹಾಸ, ಇಲ್ಲಿನ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ, ಆರ್ಥಿಕ ವ್ಯವಸ್ಥೆ, ಇಲ್ಲಿನ ಜನ ಸಂಸ್ಕೃತಿ, ಪರಂಪರೆ, ಮಾನವೀಯ ಮೌಲ್ಯಗಳ ಸಮ್ಮಿಳತವೇ ಒಂದು ದೇಶ. ಈ ಬಗ್ಗೆ ಕನಿಷ್ಠ ತಿಳಿವಳಿಕೆ ಇಲ್ಲದಿದ್ದರೆ ಸಂವಿಧಾನ, ಪ್ರಜಾಪ್ರಭುತ್ವ ಅರ್ಥವಾಗುವುದಿಲ್ಲ. ಇಲ್ಲಿ 4,635 ಜಾತಿಗಳು 325 ಭಾಷೆ, 25 ಲಿಪಿಗಳಿವೆ. ಬಹತ್ವದಲ್ಲಿ ನಂಬಿಕೆ ಇಟ್ಟಿರುವ ದೇಶ ನಮ್ಮದು. ಹಾಗಾಗಿ, ವಿವಿಧತೆಯಲ್ಲಿ ಏಕತೆ ಸಾಧಿಸಿದ್ದೇವೆ. ಇಲ್ಲಿ ಜಾತಿ, ಧರ್ಮ, ಲಿಂಗ, ಭಾಷೆ ಅಧಾರದ ಮೇಲೆ ತಾರತಮ್ಯ ತೋರಬಾರದು. ಸಮಾನ ಅವಕಾಶ, ಸಮಾನ ನ್ಯಾಯ ಕೊಡಬೇಕು ಎಂದು ಸಂವಿಧಾನದ ಪ್ರತಿಪಾದಿಸಿದೆ ಎಂದು ಹೇಳಿದರು.

ರಾಜರು, ಪಾಳೆಯಗಾರರ ಕೈಯಲ್ಲಿದ್ದ ಒಂದು ಭಾಗದ ಅಧಿಕಾರ ಈಗ ಜನಪ್ರತಿನಿಧಿಗಳ ಕೈಗೆ ಬರಲು ಸಂವಿಧಾನವೇ ಕಾರಣ. ರಾಜಮಹಾರಾಜರ ಕಾಲಹೋಗಿ ಈಗ ಪ್ರಜಾಫ್ರಭುತ್ವ ಅಸ್ತಿತ್ವಕ್ಕೆ ಬಂದಿದೆ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗದ ಮೂಲಕ ಅಧಿಕಾರ ವಿಂಗಡಣೆಯಾಗಿ ಅವುಗಳು ಸಮರ್ಪಕವಾಗಿ ಕಾರ್ಯ ನಡೆಸಲು ರಚನೆಯಾಗಿರುವುದೇ ನಮ್ಮ ಸಂವಿಧಾನ ಎಂದರು.

ಈವರೆಗೆ ನಮ್ಮನ್ನಾಳಿದ ಸರ್ಕಾರಗಳು ಸಂವಿಧಾನವನ್ನು ಜನರಿಗೆ ತಿಳಿಸುವ ಕೆಲಸ ಮಾಡಲಿಲ್ಲ. ನಾವೂ ಕೂಡ ತಿಳಿದುಕೊಳ್ಳುವ ಪ್ರಯತ್ನ ಮಾಡಲಿಲ್ಲ. ನಮಗೆ ಓದು ಬರಹ ಕಲಿಸಿದ್ದಾರೆ. ಆದರೆ, ಕಾನೂನು ಶಿಕ್ಷಣ ನೀಡಲಿಲ್ಲ. ಕಾನೂನು ಅರಿವಿಲ್ಲದ ಕಾರಣ ಸ್ಥಳೀಯ ಸಂಸ್ಥೆಗಳಲ್ಲಿ ಜನಪ್ರತಿನಿಧಿ ಮತ್ತು ಅಧಿಕಾರಿಗಳ ನಡುವೆ ಸಂಘರ್ಷ ಮುಂದುವರಿದಿದೆ. ಸಮಾಜ, ಸಮುದಾಯಕ್ಕೆ ಒಳಿತಾಗಬೇಕೆಂದರೆ ಸಂವಿಧಾನವನ್ನು ಓದಿ ಅರ್ಥಮಾಡಿಕೊಳ್ಳಬೇಕೆಂದು ಸಲಹೆ ನೀಡಿದರು.

ಸಂವಿಧಾನ ಓದು ಸಮಿತಿ ರಾಜ್ಯ ಸಂಚಾಲಕಿ ಕೆ.ಎಸ್‌.ವಿಮಲಾ ಪ್ರಾಸ್ತಾವಿಕವಾಗಿ ಮಾತನಾಡಿ, ಸಂವಿಧಾನದ ಕರಡು ರಚಿಸಿದ ಡಾ.ಅಂಬೇಡ್ಕರ್‌ ಅವರನ್ನು ಆರಾಧನೆ, ಅವಗಣನೆ ಮಾಡುವಂತಹ ವೈಪರೀತ್ಯಗಳನ್ನು ಇತ್ತೀಚೆಗೆ ಕಾಣುತ್ತಿದ್ದೇವೆ. ಸಂವಿಧಾನದ ವಿಚಾರಗಳನ್ನು ನಮ್ಮೊಳಗೆ ಅವಗಾಹನೆ ಮಾಡಿಕೊಳ್ಳದಿದ್ದರೆ ಅಂಬೇಡ್ಕರ್‌ ಕೇವಲ ಆರಾಧನೆಗೆ ಸೀಮಿತರಾಗುತ್ತಾರೆ ಎಂದು ಎಚ್ಚರಿಸಿದರು.

ಜಿಲ್ಲಾ ನ್ಯಾಯಾಧೀಶ ಉಮೇಶ್‌ ಎಂ.ಅಡಿಗ ಮಾತನಾಡಿ, ಸಂವಿಧಾನ ಓದದ ಕಾರಣ ದೇಶದಲ್ಲಿ ವೈಷಮ್ಯ, ದ್ವೇಷದ ಹೇಳಿಕೆಗಳು ಕೇಳಿಬರುತ್ತಿವೆ. ಸಂಕುಚಿತ ಮನೋಭಾವದಿಂದ ಸಂವಿಧಾನವನ್ನು ನೋಡುವವರಿಗೆ ಅದರಲ್ಲಿ ದೋಷ ಕಾಣುತ್ತದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌ ಮಾತನಾಡಿ, ನಾಗಮೋಹನ್‌ದಾಸ್‌ ಅವರು ಹೈಕೋರ್ಟ್‌ ನ್ಯಾಯಾಮೂರ್ತಿಯಾಗಿದ್ದಾಗ ಜನಪರವಾಗಿ ಕಾರ್ಯನಿರ್ವಹಿಸಿದವರು ಎಂದರು.

ಜಿ.ಕಾ.ಸೇ.ಪ್ರಾ. ಸದಸ್ಯ ಕಾರ್ಯದರ್ಶಿ ಬಸವರಾಜ ಚೇಂಗಟಿ, ತಾಪಂ ಇಒ ತಾರಾನಾಥ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಸ್‌.ಎಸ್‌.ವೆಂಕಟೇಶ್‌ ಹಾಜರಿದ್ದರು. ವಕೀಲ ಜಗದೀಶ್‌ ನಿರೂಪಿಸಿದರು.

ಟಾಪ್ ನ್ಯೂಸ್

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

5-udupi

Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ

Brijesh-Chowta-Leter

Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ

New Delhi: BSNL invites tender for 5G service

New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್‌ ಆಹ್ವಾನ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

J&K: If Vajpayee had lived, Jammu and Kashmir would not have become a Union Territory: Omar Abdullah

J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

5-udupi

Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ

Commonwealth ಸಂಸದೀಯ ಸಭೆ; ಸ್ಪೀಕರ್‌ ಯು.ಟಿ. ಖಾದರ್‌ ಭಾಗಿ

Commonwealth ಸಂಸದೀಯ ಸಭೆ; ಸ್ಪೀಕರ್‌ ಯು.ಟಿ. ಖಾದರ್‌ ಭಾಗಿ

Brijesh-Chowta-Leter

Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

5-udupi

Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ

Commonwealth ಸಂಸದೀಯ ಸಭೆ; ಸ್ಪೀಕರ್‌ ಯು.ಟಿ. ಖಾದರ್‌ ಭಾಗಿ

Commonwealth ಸಂಸದೀಯ ಸಭೆ; ಸ್ಪೀಕರ್‌ ಯು.ಟಿ. ಖಾದರ್‌ ಭಾಗಿ

Apologize or give 5 crores: Another threat to actor Salman

Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೂಂದು ಬೆದರಿಕೆ

Brijesh-Chowta-Leter

Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.