ರಾಜ್ಯ ಪೊಲೀಸರಿಗೆ ತಮಿಳುನಾಡು ಮಾದರಿ ಇಡಿ ಅಧಿಕಾರ: ಪಾಟೀಲ
Team Udayavani, Jun 30, 2019, 3:05 AM IST
ವಿಜಯಪುರ: ರಾಜ್ಯದಲ್ಲಿ ಆರ್ಥಿಕ ಅಪರಾಧಗಳ ಸಂದರ್ಭದಲ್ಲಿ ಆಸ್ತಿ ವಶಕ್ಕೆ ಪಡೆಯಲು ತಮಿಳುನಾಡು ರಾಜ್ಯದಲ್ಲಿ ಇರುವಂತೆ ನಮ್ಮ ಪೊಲೀಸರಿಗೆ ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರ ಇಲ್ಲ. ಹೀಗಾಗಿ ರಾಜ್ಯದ ಪೊಲೀಸರಿಗೂ ಈ ಅಧಿಕಾರ ನೀಡಲು ಬರುವ ಅಧಿವೇಶನದಲ್ಲಿ ವಿಧೇಯಕಕ್ಕೆ ತಿದ್ದುಪಡಿ ತರಲಾಗುವುದು ಎಂದು ಗೃಹ ಸಚಿವ ಎಂ.ಬಿ. ಪಾಟೀಲ ಹೇಳಿದರು.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಜಮೀರ್ ಅಹ್ಮದ್ ಅವರಿಗೆ ಇಡಿ ನೋಟಿಸ್ ನೀಡಿದ್ದರಲ್ಲಿ ತಪ್ಪಿಲ್ಲ. ಐಎಂಎ ಸಂಸ್ಥೆಗೆ ನನ್ನ ಆಸ್ತಿಯನ್ನು ಮಾರಾಟ ಮಾಡಿದ್ದು, ಆದಾಯ ತೆರಿಗೆ ಇಲಾಖೆಗೂ ಮಾಹಿತಿ ನೀಡಿದ್ದಾಗಿ ಸ್ವಯಂ ಸಚಿವ ಜಮೀರ್ ಅಹ್ಮದ್ ಅವರೇ ಸ್ಪಷ್ಟಪಡಿಸಿದ್ದಾರೆ. ನಾನೇ ಖುದ್ದಾಗಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ್ದು, ಎಲ್ಲವನ್ನೂ ಮಾಧ್ಯಮಗಳ ಮುಂದೆ ಹೇಳಲಾಗದು ಎಂದರು.
ಐಎಂಎ ಪ್ರಕರಣ ಭಾರೀ ಪ್ರಮಾಣದ ಹಗರಣವಾಗಿದ್ದು, ಭಯೋತ್ಪಾದಕರ ಸಂಪರ್ಕ ಇದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಸಂಸತ್‌ನಲ್ಲಿ ಆರೋಪಿಸಿ, ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿರುವುದು ಸರಿಯಾದ ಕ್ರಮವಲ್ಲ. ಯಾವ ರೀತಿ ಸಂಪರ್ಕ ಇದೆ ಎಂಬುದರ ಮಾಹಿತಿ ಬಹಿರಂಗ ಪಡಿಸಲಿ ಎಂದು ಹೇಳಿದರು.
ರಾಜ್ಯದ ಪೊಲೀಸರು ಹಾಗೂ ಎಸ್‌ಐಟಿ ಎಂಥದ್ದೇ ಪ್ರಕರಣವನ್ನು ಪತ್ತೆ ಮಾಡುವಷ್ಟು ಸಮರ್ಥರಿದ್ದು, ಸಿಬಿಐ ಸಂಸ್ಥೆಗೆ ವಹಿಸುವ ಪ್ರಶ್ನೆಯೇ ಇಲ್ಲ. ಹಿಂದೆಲ್ಲ ಸಿಬಿಐ ತನಿಖಾ ಸಂಸ್ಥೆಯಲ್ಲಿ ಕಾಂಗ್ರೆಸ್ ಸಂಸ್ಥೆ ಎಂದೆಲ್ಲ ಹಗುರವಾಗಿ ಮಾತನಾಡಿದ್ದ ಬಿಜೆಪಿ ಸಂಸದರಿಗೆ ಈಗೇಕೆ ಸಿಬಿಐ ಸ್ವತಂತ್ರ ಸಂಸ್ಥೆಯಾಗಿ ಕಂಡಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.