ಮಡಿಕೇರಿ: ಕರ್ನಾಟಕ ರೈತ ಸಂಘದಿಂದ ಪ್ರತಿಭಟನೆ


Team Udayavani, Jun 30, 2019, 5:07 AM IST

pratibatane

ಮಡಿಕೇರಿ: ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿರುವ ದಲಿತರು, ಆದಿವಾಸಿಗಳು, ಬಡ ರೈತರು, ಕೂಲಿ ಕಾರ್ಮಿಕರಿಗೆ ಕೃಷಿಭೂಮಿ, ನಿವೇಶನದ ಹಕ್ಕುಪತ್ರ ಹಾಗೂ ಮೂಲಭೂತ ಸೌಕರ್ಯಗಳು ಮತ್ತು ಉದ್ಯೋಗ ದೊರಕಿಸಿಕೊಡುವಂತೆ ಆಗ್ರಹಿಸಿ ಕರ್ನಾಟಕ ರೈತ ಸಂಘದ ಕೊಡಗು ಜಿಲ್ಲಾ ಸಮಿತಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿತು.

ಕರ್ನಾಟಕ ರೈತ ಸಂಘದ ರಾಜ್ಯ ಕಾರ್ಯದರ್ಶಿ ಡಿ.ಎಸ್‌.ನಿರ್ವಾಣಪ್ಪ, ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ್‌ ಕಂದೆಗಾಲ್, ಜಿಲ್ಲಾ ಸಮಿತಿ ಅಧ್ಯಕ್ಷ ಎಚ್.ಸಣ್ಣಪ್ಪ ಅವರುಗಳ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಗಾಂಧಿ ಮಂಟಪದ ಬಳಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಸಾಗಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ದಿಡ್ಡಳ್ಳಿ ಆದಿವಾಸಿಗಳನ್ನು ಬಸವನಹ‌ಳ್ಳಿ ಬ್ಯಾಡಗೊಟ್ಟಗಳಿಗೆ ಸ್ಥಳಾಂತರಿಸಿದ್ದು, ಇಲ್ಲಿರುವವರಿಗೆ ಅಗತ್ಯ ಕೆಲಸವಿಲ್ಲದೆ ಆಹಾರಕ್ಕೆ ಪರದಾಡುವಂತಾಗಿದೆ ಎಂದು ಪ್ರತಿಭಟನಕಾರರು ಆರೋಪಿಸಿದರು.

ಜಿಲ್ಲೆಯಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪಕ್ಕೆ ಸಿಲುಕಿದ ಕಡು ಬಡವರು, ಸರಕಾರದ ಪರಿಹಾರ, ಮನೆ, ಮೂಲ ಸೌಕರ್ಯಗಳಿಂದ ವಂಚನೆಗೆ ಒಳಗಾಗಿದ್ದಾರೆ. ಸಂಘ‌ಟನೆಯ ಮೂಲಕ ಬಡವರ್ಗದ ಮಂದಿಗೆ ನಿವೇಶನ, ಭೂಮಿ, ಹಕ್ಕುಪತ್ರ ನೀಡುವಂತೆ ಸಲ್ಲಿಸಿದ ಮನವಿಗೆ ನ್ಯಾಯ ದೊರಕಿಲ್ಲ. ಆದ್ದರಿಂದ ಜಿಲ್ಲಾಡಳಿತ ತಮ್ಮ ಬೇಡಿಕೆಗಳಿಗೆ ತಿಂಗಳ ಒಳಗೆ ನ್ಯಾಯ ಒದಗಿಸಿಕೊಡುವಂತೆ ಒತ್ತಾಯಿಸಿದರು.

ಬೇಡಿಕೆಗಳು

ಕುಶಾಲನಗರ ಹೋಬಳಿ 6ನೇ ಹೊಸಕೋಟೆಯ ಅಂದಾನಿಪುರದಲ್ಲಿರುವ 70 ಬಡ ಮತ್ತು ದಲಿತ ಕುಟುಂಬಗಳು ಸಾಗುವಳಿ ಮಾಡುತ್ತಿರುವ ಭೂಮಿಯನ್ನು ಪೊಲೀಸ್‌ ಇಲಾಖೆಗೆ ಸೇರಿಸಿರುವುದನ್ನು ರದ್ದುಗೊಳಿಸಿ, ಸಾಗುವಳಿ ಮಾಡಿರುವ ಬಡವರಿಗೆ ಮತ್ತು ದಲಿತರಿಗೆ ಹಕ್ಕುಪತ್ರ ನೀಡಬೇಕು, ದಿಡ್ಡಳ್ಳಿಯಿಂದ ಬಸವನಹಳ್ಳಿ ಬ್ಯಾಡಗೊಟ್ಟಕ್ಕೆ ಸ್ಥಳಾಂತರಿಸಿರುವ ಆದಿವಾಸಿಗಳಿಗೆ ಉದ್ಯೋಗ ದೊರಕಿ ಸಿಕೊಡಬೇಕು, ತಲಾ 3 ಏಕರೆ ಕೃಷಿ ಭೂಮಿ ನೀಡಬೇಕು, ನಾಗರಹೊಳೆ ಅರಣ್ಯದ ಗೋಣಿಗದ್ದೆ ಕೊಡಂಗೆ ಹಾಡಿಯ ಜನರಿಗೆ ಹಕ್ಕುಪತ್ರ ನೀಡುವುದರೊಂದಿಗೆ ಮೂಲಭೂತ ಸೌಕರ್ಯದೊಂದಿಗೆ ಅರಣ್ಯದಂಚಿನಲ್ಲಿ ಭೂಮಿ ನೀಡಿ ಹಕ್ಕು ಪತ್ರ ನೀಡಬೇಕು, ಜಿಲ್ಲೆಯಲ್ಲಿರುವ ಸಿ ಮತ್ತು ಡಿ ದರ್ಜೆಯ ಭೂಮಿಯನ್ನು ಕಂದಾಯ ಭೂಮಿಯಾಗಿ ಪರಿವರ್ತಿಸಿ ದಲಿತ ಆದಿವಾಸಿಗಳಿಗೆ, ಭೂಹೀನ ಬಡವರಿಗೆ ತಲಾ 3 ಏಕರೆ ಹಂಚಬೇಕು, ಸೋಮವಾರಪೇಟೆಯ ಕಿಬ್ಬೆಟ್ಟ ಗ್ರಾಮದ ಅಯ್ಯಪ್ಪ ಕಾಲೋನಿಯಲ್ಲಿ ಇರುವ ಕುಟುಂಬ ಹಾಗೂ ದಲಿತ ಕಾರ್ಮಿಕರಿಗೆ ಸರ್ವೆ ನಂ. 56/1 ರಲ್ಲಿ 3 ಏಕರೆ ನಿವೇಶನ ಹಂಚಬೇಕು ಮತ್ತು ಅಂಬೇಡ್ಕರ್‌ ಭವನಕ್ಕೆ 50 ಸೆಂಟ್ ಜಾಗ ನೀಡಬೇಕು, ಕರ್ನಾಟಕ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಎಚ್. ಜೆ. ಪ್ರಕಾಶ್‌, ಸದಸ್ಯ ಜಯಣ್ಣ, ಸಿಪಿಐಎಂಎಲ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಎಸ್‌.ಆರ್‌. ಮಂಜುನಾಥ್‌ ಸೇರಿದಂತೆ ಹಲವು ಪ್ರಮುಖರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು

ವಿಲೇವಾರಿ ಆಗಿಲ್ಲ ಜಿಲ್ಲೆಯ ಹಲವು ಭಾಗಗಳಲ್ಲಿ ದಲಿತರು, ಆದಿವಾಸಿಗಳೂ ಬಡ ರೈತರ ಕೂಲಿ ಕಾರ್ಮಿಕರು ಸ್ವಂತ ಭೂಮಿ ಇಲ್ಲದೆ ಉದ್ಯೋಗವಿಲ್ಲದೆ, ಸ್ವಂತ ನಿವೇಶನ ಇಲ್ಲದೇ ಪರದಾಡುತ್ತಿದ್ದು, ಇನ್ನು ಹಲವರು ಒಂದು, ಎರಡು ಏಕರೆ ಸರಕಾರಿ ಭೂಮಿಯಲ್ಲಿ ಸಾಗುವಳಿ ಮಾಡಿಕೊಂಡು ಜೀವನ ನಡೆಸುತ್ತ ಹಲವು ವರ್ಷಗಳಿಂದ ಅರ್ಜಿ ಸಲ್ಲಿಸುತ್ತ ಇದ್ದರೂ, ಬಡವರ ಅರ್ಜಿಗಳು ವಿಲೇವಾರಿ ಆಗದೆ ಮೂಲೆ ಸೇರಿವೆಯೆಂದು ಸಂಘದ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ್‌ ಕಂದೆಗಲ್ ಬೇಸರ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.