ಪೊಲೀಸ್‌ ಭದ್ರತೆಯಲ್ಲಿ ಚರಂಡಿ ಒಡ್ಡು ತೆರವು

Team Udayavani, Jun 30, 2019, 11:30 AM IST

gadaga-tdy-4..

ಲಕ್ಷ್ಮೇಶ್ವರ: ಸೂರಣಗಿ ಗ್ರಾಮದಲ್ಲಿ ಚರಂಡಿ ನೀರು ಹರಿಯದಂತೆ ಅಡ್ಡಲಾಗಿ ತಡೆ ಹಾಕಿರುವ ಪ್ರದೇಶವನ್ನು ಗ್ರಾಪಂ ಮತ್ತು ಪೊಲೀಸರು ಪರಿಶೀಲಿಸಿದರು.

ಲಕ್ಷ್ಮೇಶ್ವರ: ತಾಲೂಕಿನ ಸೂರಣಗಿ ಗ್ರಾಮದ ಬಾಲೇಹೊಸೂರ ರಸ್ತೆಗೆ ಹೊಂದಿಕೊಂಡ 3 ಮತ್ತು 5ನೇ ವಾರ್ಡ್‌ನಲ್ಲಿ ಹರಿಯುವ ಚರಂಡಿ ನೀರಿಗೆ ಅಡ್ಡಲಾಗಿ ಸ್ಥಳೀಯರು ಹಾಕಿದ್ದ ಒಡ್ಡನ್ನು ಗ್ರಾಪಂನವರು ಪೊಲೀಸರ ಭದ್ರತೆಯಲ್ಲಿ ಶನಿವಾರ ತೆರವುಗೊಳಿಸಿದರು.

ಗ್ರಾಮದ ಉರ್ದು ಶಾಲೆಯಿಂದ ತಾಂಡಾವರೆಗಿನ ರಸ್ತೆ ಬದಿ ಹರಿಯುವ ಚರಂಡಿ ನೀರಿಗೆ ಸಮರ್ಪಕ ವ್ಯವಸ್ಥೆ ಇಲ್ಲದಿದ್ದರಿಂದ ಇಲ್ಲಿನ ನಿವಾಸಿಗರು ಅಲ್ಲಲ್ಲಿ ನೀರಿಗೆ ತಡೆ ಹಾಕಿದ್ದರು. ಇದರಿಂದ ಅನೇಕ ವರ್ಷಗಳಿಂದಲೂ ಈ ಪ್ರದೇಶದಲ್ಲಿನ ಚರಂಡಿ ನೀರು ರಸ್ತೆ ಮೇಲೆಯೇ ಹರಿಯುತ್ತಿರುವುದರಿಂದ ಇಡೀ ಪ್ರದೇಶ ಕೊಳಚೆಮಯವಾಗಿತ್ತು.

ಈ ಕುರಿತು ಪತ್ರಿಕೆಗಳು ಸಾಕಷ್ಟು ಬಾರಿ ವರದಿ ಮಾಡಿದ್ದರಿಂದ ಎಚ್ಚೆತ್ತ ಗ್ರಾಪಂನವರು ಇದಕ್ಕೊಂದು ಶಾಶ್ವತ ಪರಿಹಾರ ಕಂಡುಕೊಳ್ಳಲು ತೀರ್ಮಾನಿಸಿತ್ತು.

ಅದರನ್ವಯ ಶನಿವಾರ ಗ್ರಾಪಂನವರು ಪೊಲೀಸ್‌ ಇಲಾಖೆ ಸಹಕಾರದಲ್ಲಿ ಚರಂಡಿಗೆ ಅಡ್ಡಲಾಗಿ ಹಾಕಿದ್ದ ತಡೆಯನ್ನು ತೆರವುಗೊಳಿಸಲು ಮುಂದಾಗಿ ಜನರಿಗೆ ಎಲ್ಲ ರೀತಿಯಲ್ಲಿ ತಿಳಿ ಹೇಳಲು ಪ್ರಯತ್ನಿಸಿದರು. ಈ ಸಂದರ್ಭದಲ್ಲಿ 3ಮತ್ತು 5ನೇ ವಾರ್ಡ್‌ನ ನಿವಾಸಿಗರು ಚರಂಡಿಗೆ ಅಡ್ಡಲಾಗಿ ಹಾಕಿರುವ ತಡೆ ತೆರವುಗೊಳಿಸಲು ನಮ್ಮದೇನೂ ತಕರಾರಿಲ್ಲ. ಆದರೆ ಈ ಮೂಲಕ ಹಾದು ಹೋಗುವ ಚರಂಡಿ ನೀರು ಎಲ್ಲಿಯೂ ನಿಲ್ಲದಂತೆ ಸಮರ್ಪಕ ವ್ಯವಸ್ಥೆ ಮಾಡಬೇಕೆಂದು ಬಿಗಿಪಟ್ಟು ಹಿಡಿದರು.

ಆಗ ಗ್ರಾಪಂ ಅಧ್ಯಕ್ಷ ಶಶಿಕಾಂತ ದಾಸರ, ಸದಸ್ಯರಾದ ಶರಣಪ್ಪ ಇಚ್ಚಂಗಿ, ವಿಜಯ ಹಳ್ಳಿ ಮತ್ತಿತರರು ನೆರೆದಿದ್ದ ಜನತೆಗೆ, ಸದ್ಯ ಹಾಕಿರುವ ತಡೆ ತೆರವುಗೊಳಿಸಿ ಅದಕ್ಕೊಂದು ಸೂಕ್ತ ಪರಿಹಾರ ಕಂಡುಕೊಳ್ಳೊಣ. ಸದ್ಯ ಅಡ್ಡಲಾಗಿ ಹಾಕಿರುವ ತಡೆ ತೆರವುಗೊಳಿಸಲು ಸಹಕರಿಸಿ ಎಂದರು. ಆದರೆ ತಾಂಡಾ ನಿವಾಸಿಗರು ಇದಕ್ಕೆ ಒಪ್ಪಲಿಲ್ಲ. ಆಗ ಪಿಡಿಒ ಎಂ.ಎನ್‌. ಮಲ್ಲೂರ ತಹಶೀಲ್ದಾರರಿಗೆ ವಿಷಯ ತಲುಪಿಸಿದಾಗ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರರು ಮೊದಲು ಭೂ ಮಾಪನ ಇಲಾಖೆಯಿಂದ ಈ ಮೊದಲಿನಿಂದಲೂ ಸೈಸರ್ಗಿಕವಾಗಿ ನೀರು ಹರಿದು ಹೋಗುವ ಪ್ರದೇಶ ಗುರುತಿಸಿ ಸಮೀಕ್ಷೆ ಮಾಡಿಸಬೇಕು. ಬಳಿಕ ಇಲ್ಲಿನ ಜನರಿಗೆ ತೊಂದರೆಯಾಗದಂತೆ ಶಾಶ್ವತ ಪರಿಹಾರಕೊಳ್ಳಲು ಗ್ರಾಪಂ ನವರು ಇಲಾಖೆಗೆ ಪತ್ರ ಬರೆಯುವಂತೆ ಸೂಚಿಸಿದರು. ಮತ್ತು ಎಲ್ಲರೂ ಸೇರಿ ಎರಡ್ಮೂರು ದಿನಗಳಲ್ಲಿ ಸಮಸ್ಯೆಗೊಂದು ಪರಿಹಾರಕ್ಕೆ ಕ್ರಮ ಕೈಗೊಳ್ಳೊಣ ಎಂದು ಭರವಸೆ ನೀಡಿದರು.

ಗ್ರಾಪಂ ಬಸಣ್ಣ ಇಟಗಿ, ವಿರೂಪಾಕ್ಷಪ್ಪ ಶಿರನಹಳ್ಳಿ, ಸೋಮಶೇಖರ ಲಮಾಣಿ, ಬಾಬಣ್ಣ ಲಮಾಣಿ, ಗ್ರಾಮದ ಹಿರಿಯರು, ಪೊಲೀಸ್‌ ಮತ್ತು ಗ್ರಾಪಂ ಸಿಬ್ಬಂದಿಗಳಿದ್ದರು.

ಟಾಪ್ ನ್ಯೂಸ್

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

Sagara-Minister-Dinesh

KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

15-uv-fusion

Cleanliness: ಮನೆ ಮನೆಯಿಂದ ದೇಶವೇ ಸ್ವಚ್ಚ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Siddapura: ಬುಲೆಟ್‌ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ

Siddapura: ಬುಲೆಟ್‌ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.