ಆರ್ಥಿಕ ಗಣತಿಗೆ ಪೂರ್ವ ತಯಾರಿ
ಸಾಮಾನ್ಯ ಸೇವಾ ಕೇಂದ್ರದಿಂದ ಗಣತಿ ಕಾರ್ಯ•ಸಮನ್ವಯತೆಯಿಂದ ಕಾರ್ಯನಿರ್ವಹಿಸಲು ಸೂಚನೆ
Team Udayavani, Jun 30, 2019, 11:36 AM IST
ಗದಗ: ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅಧ್ಯಕ್ಷತೆಯಲ್ಲಿ ಆರ್ಥಿಕ ಗಣತಿಯ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆ ಜರುಗಿತು.
ಗದಗ: ಜಿಲ್ಲೆಯಲ್ಲಿ ಜರುಗುವ ಆರ್ಥಿಕ ಗಣತಿಯನ್ನು ಸುಸೂತ್ರವಾಗಿ ಜರುಗಿಸಲು ಎಲ್ಲ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸೂಚಿಸಿದರು.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಜರುಗಿದ 7ನೇ ಆರ್ಥಿಕ ಗಣತಿಯ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸಾರ್ವಜನಿಕ ಹಾಗೂ ಖಾಸಗಿ ವಲಯದಲ್ಲಿರುವ ಸಂಘಟಿತ ಅಸಂಘಟಿತ ವಿಭಾಗಗಳಲ್ಲಿ ವಿವಿಧ ಆರ್ಥಿಕ ಚಟುವಟಿಕೆಗಳನ್ನು ಹೊಂದಿರುವ ಉದ್ಯಮಗಳ ಕುರಿತು ಆರ್ಥಿಕ ಗಣತಿ ಜರುಗಿಸಲಾಗುತ್ತಿದೆ. ಗಣತಿ ಕಾರ್ಯವನ್ನು ಸಾಮಾನ್ಯ ಸೇವಾ ಕೇಂದ್ರ ಜರುಗಿಸುತ್ತಿದ್ದು, ಈ ಸಂಸ್ಥೆಗೆ ಗಣತಿಯ ಪೂರ್ವಭಾವಿ ಸಿದ್ಧತೆಗಳಿಗೆ ಅಗತ್ಯವಾದ ನಗರ, ಗ್ರಾಮಗಳ ಪಟ್ಟಿ, ನಕ್ಷೆಗಳನ್ನು ಸಂಬಂಧಪಟ್ಟ ಇಲಾಖೆಗಳು ಒದಗಿಸಲು ಸೂಚನೆ ನೀಡಿದರು. ಗಣತಿದಾರರು ಮತ್ತು ಮೇಲ್ವಿಚಾರಕರು ಮಾಹಿತಿ ಸಂಗ್ರಹಣೆಗಾಗಿ ಕ್ಷೇತ್ರಕ್ಕೆ ಭೆಟಿ ನೀಡಿದಾಗ ಅವರುಗಳಿಗೆ ಪಿಡಿಒ, ತಾಪಂ ಇಒ ಹಾಗೂ ಗ್ರಾಮ ಲೆಕ್ಕಿಗರು ಅಗತ್ಯದ ಸಹಕಾರ ನೀಡಿ, ಗಣತಿ ಕಾರ್ಯವನ್ನು ಯಶಸ್ವಿಗೊಳಿಸಲು ಸೂಚಿಸಿದರು.
ಆರ್ಥಿಕ ಗಣತಿ ಅತ್ಯಂತ ಮಹತ್ವದಾಗಿದ್ದು, ಈ ಕಾರ್ಯವು ಮೊಬೈಲ್ ಆ್ಯಪ್ ಮೂಲಕ ಜರುಗುತ್ತಿದೆ. ಗಣತಿ ಕಾರ್ಯಕ್ಕೆ ನಿಯೋಜಿಸಲಾದ ಗಣತಿದಾರರು ಹಾಗೂ ಮೇಲ್ವಿಚಾರಕರಿಗೆ ಸಾಮಾನ್ಯ ಸೇವಾ ಕೇಂದ್ರದಿಂದ ಅಗತ್ಯದ ತರಬೇತಿ ನೀಡಿ ಗಣತಿ ಕಾರ್ಯದಲ್ಲಿ ಯಾವುದೇ ಲೋಪಗಳಾಗದಂತೆ ಅಗತ್ಯ ಎಚ್ಚರ ವಹಿಸುವಂತೆ ಸೂಚಿಸಿದರು.
ಆರ್ಥಿಕ ಗಣತಿ ಕಾರ್ಯದ ಕುರಿತು ವಿದ್ಯಾರ್ಥಿಗಳ ಮೂಲಕ ಪಾಲಕರಲ್ಲಿ ಜಾಗೃತಿ ಮೂಡಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯು ಕ್ರಮ ಜರುಗಿಸಲು ಸೂಚನೆ ನೀಡಿದ ಅವರು, ಆರ್ಥಿಕ ಗಣತಿ ಕಾರ್ಯದಲ್ಲಿ ಸಂಬಂಧಿತ ಎಲ್ಲ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಗಣತಿಯಲ್ಲಿ ಯಾವುದೇ ಲೊಪಗಳಾಗದಂತೆ ಯಶಸ್ವಿಗೊಳಿಸಬೇಕು ಎಂದು ನಿರ್ದೇಶನ ನೀಡಿದರು.
ಆರ್ಥಿಕ ಗಣತಿಗಾಗಿ ನಿಯೋಜಿಸಲಾದ ಗಣತಿದಾರರು ಹಾಗೂ ಮೇಲ್ವಿಚಾರಕರು ತಮಗೆ ವಹಿಸಿದ ಪ್ರದೇಶಗಳ ಗಣತಿ ಕಾರ್ಯವನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಶಿವಾನಚಿದ ಕರಾಳೆ ಸೂಚಿಸಿದರು.
ಜಿ.ಪಂ. ಉಪಕಾರ್ಯದರ್ಶಿ ಪ್ರಾಣೇಶರಾವ್, ಗದಗ ಸಾಮಾನ್ಯ ಸೇವಾ ಕೇಂದ್ರದ ಜಿಲ್ಲಾ ವ್ಯವಸ್ಥಾಪಕ ನಾಸೀರಹ್ಮದ ಪಾಪಣ್ಣವರ ಹಾಗೂ ಬಸವರಾಜ ಸೊರಟೂರ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗೆ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆಗೆ ಯತ್ನ
Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.