ಅಭಿವೃದ್ಧಿಗೆ ಅಂಕಿ-ಅಂಶ ಅವಶ್ಯ: ಡಿಡಿಪಿಐ ಸೊನ್ನದ
Team Udayavani, Jun 30, 2019, 12:00 PM IST
ಕೊಪ್ಪಳ: ಅಂಕಿ-ಅಂಶಗಳನ್ನು ಸಮರ್ಪಕವಾಗಿ ಹೊಂದಾಣಿಕೆ ಮಾಡುವುದೇ ಒಂದು ವ್ಯವಸ್ಥಿತ ಆಡಳಿತವಾಗಿದ್ದು, ಅಂಕಿ-ಅಂಶಗಳ ನಿಖರತೆಯಲ್ಲಿ ವ್ಯತ್ಯಾಸವಾದರೆ ಯೋಜನೆ ಸಂಪೂರ್ಣ ವಿಫಲವಾಗುತ್ತವೆ ಎಂದು ಡಿಡಿಪಿಐ ಉಮಾದೇವಿ ಸೊನ್ನದ ಅವರು ಹೇಳಿದರು.
ನಗರದ ಜಿಪಂ ಸಭಾಂಗಣದಲ್ಲಿ ಆರ್ಥಿಕ ಮತ್ತು ಸಾಂಖ್ಯೀೕಕ ನಿರ್ದೇಶನಾಲಯ ಹಾಗೂ ಕೊಪ್ಪಳ ಜಿಲ್ಲಾಡಳಿತ ಮತ್ತು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಾರ್ಯಾಲಯದ ಸಹಯೋಗದಲ್ಲಿ ಶನಿವಾರ ನಡೆದ ಭಾರತದ ಖ್ಯಾತ ಸಂಖ್ಯಾಶಾಸ್ತ್ರಜ್ಞ ಪ್ರೊ. ಪಿ.ಸಿ. ಮಹಾಲನೋಬಿಸ ಅವರ ಜನ್ಮ ದಿನಾಚರಣೆ ಹಾಗೂ 13ನೇ ಸಾಂಖ್ಯೀೕಕ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜನರ ಅಭ್ಯುದಯಕ್ಕಾಗಿ ಸರ್ಕಾರ ರೂಪಿಸುವ ಯಾವುದೇ ಯೋಜನೆಗಳು, ಆಯಾ ವ್ಯಾಪ್ತಿಯ ಅಂಕಿಅಂಶಗಳ ನಿಖರತೆಯನ್ನು ಅವಲಂಬಿಸಿರುತ್ತವೆ. ಅಂಕಿ-ಅಂಶಗಳ ನಿಖರತೆಯಲ್ಲಿ ವ್ಯತ್ಯಾಸವಾದಲ್ಲಿ ಯಾವುದೇ ಯೋಜನೆಗಳು ಸಫಲವಾಗಲ್ಲ. ಸಮಸ್ಯೆಗಳನ್ನು ಗುರುತಿಸಲು ಅಂಕಿ-ಅಂಶಗಳು ಅತ್ಯವಶ್ಯವಾಗಿವೆ. ಒಂದು ನಿರ್ದಿಷ್ಟ ಗುರಿ ತಲುಪಬೇಕಾದರೆ, ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಲು, ಯೋಜನೆ ಯಶಸ್ವಿಗೊಳ್ಳಬೇಕಾದರೆ ಹಾಗೂ ಯೋಜನೆಗಳ ನಿಯಂತ್ರಣ ಮಾಡಬೇಕಾದರೆ ಅಂಕಿ-ಅಂಶಗಳು ಮುಖ್ಯವಾಗಿವೆ. ತಂತ್ರಜ್ಞಾ ನದಲ್ಲಿ ಅಂಕಿ ಅಂಶಗಳು ಬಲವಾದ ಪ್ರಾಬಲ್ಯವನ್ನು ಹೊಂದಿವೆ. ಸರ್ಕಾರದ ಎಲ್ಲಾ ಇಲಾಖೆಗಳು ನಿಖರವಾಗಿ ಅಂಕಿ-ಅಂಶಗಳನ್ನು ಕೊಟ್ಟಾಗ ಮಾತ್ರ ಪ್ರಗತಿ ಸಾಧ್ಯವಾಗುತ್ತದೆ ಎಂದರು.
ದೇಶದ ಅಭಿವೃದ್ಧಿಗೆ ನಿಖರ ಸಂಖ್ಯೆಗಳನ್ನು ತಿಳಿಯಲು ಅಂಕಿಅಂಶ ಅವಶ್ಯ ದೇಶದ ಪರಿಣಾಮಕಾರಿ ಅಭಿವೃದ್ಧಿಗೆ ಪಂಚವಾರ್ಷಿಕ ಯೋಜನೆಗಳು ಏಕೆ ಬೇಕು? ಯಾವ ರೀತಿ ಅನುಷ್ಠಾನಗೊಳ್ಳಬೇಕು?ಯಾವ ಕ್ಷೇತ್ರಗಳಿಗೆ ಆದ್ಯತೆ ನೀಡಬೇಕು? ಎನ್ನುವುದರ ಬಗ್ಗೆ ಅಂಕಿಅಂಶಗಳ ಸಹಿತ ಸಾಕಾರಗೊಳ್ಳುವಲ್ಲಿ ಪ್ರೊ. ಮಹಾಲನೋಬಿಸ್ ಅವರ ಕೊಡುಗೆ ಅತ್ಯಂತ ಪ್ರಮುಖವಾಗಿದೆ ಎಂದರು.
ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ ಮಾತನಾಡಿ, ಸರಿಯಾದ ಅಂಕಿಅಂಶಗಳು ದೇಶದ ಅಭಿವೃದ್ಧಿಗೆ ಸಹಕಾರಿಯಾಗಲಿವೆ. ಜೀವನದ ಪ್ರತಿಯೊಂದು ಹೆಜ್ಜೆಗೂ ಅಂಕಿಸಂಖ್ಯೆಗಳ ಅಗತ್ಯ. ಸಾರ್ವಜನಿಕರ ಆಡಳಿತ ನಿಂತಿರುವುದೇ ಅಂಕಿ-ಅಂಶಗಳಿಂದ, ಹೀಗಾಗಿ ಅಂಕಿ-ಅಂಶಗಳನ್ನು ಹೊಂದಾ ಣಿಕೆ ಮಾಡುವಂತಹದ್ದೇ ಆಡಳಿತವಾಗಿದೆ. ಅಂಕಿ-ಅಂಶ ತಿಳಿದವನಿಗೆ ಯಾವುದೇ ಗೊಂದಲವಿಲ್ಲ ಎಂದರು.
ಅರ್ಥಶಾಸ್ತ್ರ ಉಪನ್ಯಾಸಕ ಅಶೋಕ ಓಜನಹಳ್ಳಿ ಮಾತನಾಡಿ, ಜಗತ್ತಿನ ಮುಂದುವರೆದ ದೇಶಗಳು ವಸ್ತುನಿಷ್ಠ ಮಾದರಿಯಲ್ಲಿ ನಿಖರ ಮಾಹಿತಿ ಸಂಗ್ರಹಿಸುವ ಮೂಲಕವೇ ಯಶಸ್ಸುಗಳಿಸಿವೆ. ಅವಶ್ಯಕತೆ, ಆದ್ಯತತೆ ಗುರುತಿಸಿ, ಅಗತ್ಯ ಯೋಜನೆ ಸಿದ್ಧಪಡಿಸಲು, ಆದ್ಯತಾ ವಲಯಗಳನ್ನು ಗುರುತಿಸಲು, ಅಂಕಿ-ಸಂಖ್ಯೆ ಬಹಳಷ್ಟು ಪ್ರಮುಖ ಪಾತ್ರ ವಹಿಸುತ್ತವೆ. 2015 ರಲ್ಲಿ 193 ರಾಷ್ಟ್ರಗಳು ಸುಸ್ಥಿರ ಅಭಿವೃದ್ಧಿಗಾಗಿ ಕೈಜೋಡಿಸಿವೆ. ಸುಸ್ಥಿರ ಅಭಿವೃದ್ಧಿಗಾಗಿ ಬಡತನ ಮತ್ತು ಹಸಿವು ಕೊನೆಗಾಣಿಸುವುದು, ಆರೋಗ್ಯವಂತಹ ವಾತಾವರಣ ಕಲ್ಪಿಸುವುದು, ಪರಿಸರ ಸಂರಕ್ಷಣೆ ಸೇರಿದಂತೆ 17 ಪ್ರಮುಖ ಅಂಶಗಳನ್ನು ಹೊಂದಲಾಗಿದೆ ಎಂದರು.
ಸಂಖ್ಯಾಶಾಸ್ತ್ರಜ್ಞ ಪ್ರೊ. ಪಿ.ಸಿ. ಮಹಾಲನೋಬಿಸ್ ಅವರ ಭಾವಚಿತ್ರಕ್ಕೆ ಎಲ್ಲ ಗಣ್ಯರು ಪುಷ್ಪನಮನ ಸಲ್ಲಿಸಿದರು. ಅಲ್ಲದೆ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ ಭವನದ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು. ಹಾಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯ ವೈಶಂಪಾಯನ ಅವರಿಂದ ಹಾಸ್ಯ ಕಾರ್ಯಕ್ರಮ ಹಾಗೂ ಯುನಿಸೆಫ್ ಕೊಪ್ಪಳದ ಮಲ್ಲಿಕಾ ಹಾಗೂ ಪ್ರತಿಭಾರಿಂದ ಸಂಗೀತ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mangaluru: ಗಾಂಜಾ ಸೇವನೆ; ಯುವಕನ ಬಂಧನ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.