ಸಹಕಾರ ಕ್ಷೇತ್ರದಲ್ಲಿ ರಾಜಕೀಯ ಬೇಡ
ಮದ್ದೇರಿ ಸಹಕಾರ ಸಂಘದ ಸರ್ವಸದಸ್ಯರ ಸಭೆ ಉದ್ಘಾಟಿಸಿದ ಶಾಸಕ ಶ್ರೀನಿವಾಸಗೌಡ
Team Udayavani, Jun 30, 2019, 1:06 PM IST
ಕೋಲಾರ ತಾಲೂಕಿನ ಮದ್ದೇರಿ ರೇಷ್ಮೆ ಬೆಳೆಗಾರರ ಹಾಗೂ ಸೇವಾ ಸಹಕಾರ ಸಂಘದ ಸರ್ವ ಸದಸ್ಯರ ಸಭೆಯನ್ನು ಶಾಸಕ ಕೆ.ಶ್ರೀನಿವಾಸಗೌಡ ಉದ್ಘಾಟಿಸಿ, ಮಹಿಳಾ ಸಂಘಗಳಿಗೆ ಸಾಲ ವಿತರಿಸಿದರು.
ಕೋಲಾರ: ಅನ್ನದಾತರಿಗೆ ಮೀಟರ್ ಬಡ್ಡಿ ದಂಧೆಯಿಂದ ಮುಕ್ತಿ ನೀಡಿ, ಆರ್ಥಿಕವಾಗಿ ಜೀವ ತುಂಬುತ್ತಿರುವ ಸಹಕಾರ ರಂಗದಲ್ಲಿ ರಾಜಕೀಯ ಬೇರೆಸದೇ, ರೈತರಿಗೂ ದ್ರೋಹ ಮಾಡಿದಂತೆ ಎಂದು ಶಾಸಕ ಕೆ.ಶ್ರೀನಿವಾಸಗೌಡ ಸಲಹೆ ನೀಡಿದರು.
ತಾಲೂಕಿನ ಮದ್ದೇರಿ ರೇಷ್ಮೆ ಬೆಳೆಗಾರರ ಹಾಗೂ ಸೇವಾ ಸಹಕಾರ ಸಂಘದ ಸರ್ವ ಸದಸ್ಯರ ಸಭೆ ಉದ್ಘಾಟಿಸಿ ಹಾಗೂ ಮಹಿಳಾ ಸಂಘಗಳಿಗೆ ಸಾಲ ವಿತರಿಸಿ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಭಿನ್ನಾಭಿಪ್ರಾಯಗಳು ಎದುರಾಗುವುದು ಸಹಜ. ಅಧಿಕಾರಕ್ಕೆ ಬಂದ ಮೇಲೆ ಪಕ್ಷಾತೀತವಾಗಿ ಕೆಲಸ ಮಾಡಬೇಕು, ಚುನಾವಣೆ ನಂತರ ರಾಜಕೀಯಕ್ಕೆ ಅವಕಾಶ ನೀಡದೇ, ಇಡೀ ಗ್ರಾಮ ಒಗ್ಗಟ್ಟಾಗಿ ಅಭಿವೃದ್ಧಿಗೆ ಸ್ಪಂದಿಸಬೇಕು ಎಂದು ಸಲಹೆ ನೀಡಿದರು.
ರೈತರ ಅಭಿವೃದ್ಧಿಗೆ ಶ್ರಮಿಸಿ: ಸಹಕಾರ ರಂಗದಲ್ಲಿ ರಾಜಕೀಯೇತರವಾಗಿ ಕೆಲಸ ಮಾಡಬೇಕು. ಇದರಿಂದಲೇ ನಾನು ಹಳ್ಳಿ ಸೊಸೈಟಿಯಿಂದ ಅಂತಾರಾಷ್ಟ್ರೀಯ ಮಟ್ಟದ ಸಹಕಾರ ಸಂಸ್ಥೆಗಳವರೆಗೂ ಅಧಿಕಾರ ನಡೆಸಲು ಅವಕಾಶ ಸಿಕ್ಕಿದೆ. ಸೊಸೈಟಿಗಳು ಎಂದಿಗೂ ರೈತರ ಅಭಿವೃದ್ಧಿಗಾಗಿ ಶ್ರಮಿಸುವಂತಾಗಬೇಕು ಎಂದು ಕಿವಿಮಾತು ಹೇಳಿದರು.
ನಂಬಿಕೆ ಉಳಿಸಿಕೊಂಡಿದೆ: ಎರಡು ದಶಕಗಳ ಹಿಂದೆ ಯಾರೋ ಮಾಡಿದ ತಪ್ಪಿಗೆ ಡಿಸಿಸಿ ಬ್ಯಾಂಕ್ ದಿವಾಳಿಯಾಗುವ ಹಂತಕ್ಕೆ ತಲುಪಿತ್ತು. ಆನಂತರ ಅಧಿಕಾರಕ್ಕೆ ಬಂದ ಬ್ಯಾಲಹಳ್ಳಿ ಗೋವಿಂದಗೌಡರ ತಂಡದ ಸತತ ಪ್ರಯತ್ನದಿಂದ ಚೇತರಿಸಿಕೊಂಡಿದೆ.
ರೈತರ ಹಾಗೂ ಸ್ತ್ರೀ ಶಕ್ತಿ ಸಂಘಗಳ ಸದಸ್ಯರ ನಂಬಿಕೆ ಉಳಿಸಿಕೊಂಡು ಸಾಲ ನೀಡುವ ಶಕ್ತಿ ಹೊಂದಿದೆ ಎಂದು ಹೇಳಿದರು.
ಬ್ಯಾಂಕ್ ಈಗ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದ್ದು, ಇತರೆ ಬ್ಯಾಂಕ್‌ಗಳಿಗೆ ಮಾದರಿಯಾಗಿ ಬೆಳೆದಿದೆ. ಕೋಟ್ಯಂತರ ರೈತರಿಗೆ ಮತ್ತು ಸ್ತ್ರೀಶಕ್ತಿ ಸಂಘಗಳಿ ಸಾಲ ನೀಡುತ್ತಿದೆ. ಅದೇ ರೀತಿ ಸಾಲ ಪಡೆದುಕೊಂಡಿರುವ ಫಲಾನುಭವಿಗಳು ಸಹ ಪ್ರಾಮಾಣಿಕವಾಗಿ ಪಾವತಿ ಮಾಡುವ ಮೂಲಕ ಇತರರಿಗೂ ಸಲ ದೊರೆಯಲು ಅವಕಾಶ ಮಾಡಿಕೊಡಬೇಕು ಎಂದು ಸಲಹೆ ನೀಡಿದರು.
ಸ್ವಾವಲಂಬಿ ಬದುಕು: ಎಸ್‌ಎಫ್‌ಸಿಎಸ್ ಅಧ್ಯಕ್ಷ ಜಂಬಾಪುರ ವೆಂಕಟರಾಮ್ ಪ್ರಾಸ್ತಾವಿಕವಾಗಿ ಮಾತನಾಡಿ, ಡಿಸಿಸಿ ಬ್ಯಾಂಕ್ ಇಂದು ರೈತರು, ಮಹಿಳೆಯರ ಆರ್ಥಿಕ ಜೀವಾಳವಾಗಿದ್ದು, ಈ ಭಾಗದಲ್ಲಿ ಅನೇಕ ಆರ್ಥಿಕ ಚಟುವಟಿಕೆಗಳಿಗೆ ನೆರವು ನೀಡಿದೆ.
ಇಂದು ಅನೇಕರು ಸ್ವಾವಲಂಬಿ ಬದುಕು ಸಾಗಿಸಲು ಕಾರಣವಾಗಿದೆ ಎಂದು ಹೇಳಿದರು.
ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ನಾಗನಾಳ ಸೋಮಣ್ಣ, ಕೆ.ವಿ.ದಯಾನಂದ್, ಹಿರಿಯ ಮುಖಂಡ ಮದ್ದೇರಿ ರಾಮೇಗೌಡ, ಸಿ.ಬಿ.ಜಯರಾಮ್, ಸೊಸೈಟಿ ಸಿಇಒ ಭಾಸ್ಕರಪ್ಪ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.