ಪದವೀಧರ ಶಿಕ್ಷಕರಿಗೇ ಮುಂಬಡ್ತಿ ನೀಡಲು ಒತ್ತಾಯ
ಜು.1ರಿಂದ 6, 8ನೇ ತರಗತಿ ಬಹಿಷ್ಕಾರಕ್ಕೆ ನಿರ್ಧಾರ • ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಮನವಿ
Team Udayavani, Jun 30, 2019, 1:28 PM IST
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರು ಪ್ರತಿಭಟನೆ ನಡೆಸಿದರು.
ಮಂಡ್ಯ: ಪದವಿ ವಿದ್ಯಾರ್ಹತೆ ಮತ್ತು ಸೇವಾ ಅನುಭವ ಇರುವ ಸೇವಾನಿರತ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದಕ್ಕೆ ಸೇರ್ಪಡೆಗೊಳಿಸುವಂತೆ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರು ಪ್ರತಿಭಟಿಸಿ, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಮನವಿ ಸಲ್ಲಿಸಿದರು.
ವರ್ಗೀಕರಿಸಿದರೆ ಅನ್ಯಾಯ: ಜಿಲ್ಲಾಧಿಕಾರಿ ಕಚೇರಿ ಎದುರು ಸಾಂಕೇತಿಕವಾಗಿ ಧರಣಿ ನಡೆಸಿದ ಶಿಕ್ಷಕರು, ಡಿಡಿಪಿಐ ಕಚೇರಿ ವರೆಗೆ ಮೆರವಣಿಗೆ ನಡೆಸಿ ಸೇವಾನಿರತ ಪದವೀಧರ ಶಿಕ್ಷಕರು 2005ರಿಂದಲೂ 6-8ನೇ ತರಗತಿಗಳಿಗೆ ಬೋಧಿಸುತ್ತಿದ್ದಾರೆ. ಆದರೆ, 2014ರ ಪೂರ್ವದಲ್ಲಿ ನೇಮಕವಾದ ಎಲ್ಲಾ ಶಿಕ್ಷಕರನ್ನು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರು (1-5) ವೃಂದದಲ್ಲಿ ವರ್ಗೀಕರಿಸಿರುವುದರಿಂದ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಂಬಡ್ತಿ ನೀಡಿ: ಹೊಸ ವೃಂದ ಮತ್ತು ವೃಂದಬಲ ಆದೇಶ ಇಡಿ 626 ಪಿಬಿಎಸ್ 2014ಮ 2017ರ ಮೇ 19ರ ಆದೇಶ ತಿದ್ದುಪಡಿ ಮಾಡಿ ಸೇವೆಯಲ್ಲಿರುವ 82 ಸಾವಿರ ಪದವೀಧರ ಶಿಕ್ಷಕರನ್ನು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರು (6-8) ವೃಂದಕ್ಕೆ ಸೇರಿಸಬೇಕು. ಬಡ್ತಿಗಾಗಿ ಪರೀಕ್ಷೆ ಇಲ್ಲದೆ ಸೇವಾ ಜೇಷ್ಠತೆ ಆಧರಿಸಿ ಶೇ. 75 ಮುಂಬಡ್ತಿ ನೀಡಲು ಕ್ರಮ ಜರುಗಿಸಬೇಕು. ಶಿಕ್ಷಕರ ಬೇಡಿಕೆ ಈಡೇರಿಕೆಗಾಗಿ ಸಮಗ್ರ ತಿದ್ದುಪಡಿ ತರಬೇಕೆಂದು ಆಗ್ರಹಿಸಿದರು.
ತರಗತಿ ಬಹಿಷ್ಕರಿಸಲು ನಿರ್ಧಾರ: 1ರಿಂದ 7ನೇ ತರಗತಿಗೆ ನೇಮಕವಾದ ಶಿಕ್ಷಕರನ್ನು 1 ರಿಂದ 5ಕ್ಕೆ ತಳ್ಳಲ್ಪಟ್ಟಿದ್ದು, ಇದನ್ನು ಖಂಡಿಸಿ ಜು.1ರಿಂದ ರಾಜ್ಯಾದ್ಯಂತ 6-8 ತರಗತಿಗಳನ್ನು ಬಹಿಷ್ಕರಿಸಲು ನಿರ್ಣಯ ಕೈಗೊಂಡಿದ್ದಾರೆ. ಈ ಸಮಸ್ಯೆಯ ಗಂಭೀರತೆಯನ್ನು ಗಮನಿಸಿ 82 ಸಾವಿರ ಸೇವಾ ನಿರತ ಪ್ರಾಥಮಿಕ ಹಾಗೂ ಪದವೀಧರ ಶಿಕ್ಷಕರಿಗೆ ನ್ಯಾಯ ಒದಗಿಸಬೇಕೆಂದು ಮನವಿ ಮಾಡಿದರು.
ಪ್ರತಿಭಟನೆಯಲ್ಲಿ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಪದವೀಧರರ ಶಿಕ್ಷಕರ ಸಂಘದ ಅಧ್ಯಕ್ಷ ದಸ್ತಗಿರ್‌ಖಾನ್, ಉಪಾಧ್ಯಕ್ಷರಾದ ಎಸ್.ಎನ್. ಮಂಜೇಗೌಡ, ಕೆ.ಬಿ. ಆಶಾರಾಣಿ, ಚಲುವರಾಜು, ಕೆ. ಶಿವಲಿಂಗಯ್ಯ ಇತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!
MUST WATCH
ಹೊಸ ಸೇರ್ಪಡೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.