ಶಿಕ್ಷಣ ನೀತಿಯ ಸಮಗ್ರ ಅಧ್ಯಯನ ಅವಶ್ಯ

ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಲಿ: ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ

Team Udayavani, Jun 30, 2019, 1:39 PM IST

rn-tdy-2..

ರಾಮನಗರದಲ್ಲಿ ನಡೆದ ಜಿಲ್ಲಾ ಅನುದಾನ ರಹಿತ ಶಾಲಾ ಆಡಳಿತ ಮಂಡಳಿ ಮುಖ್ಯಸ್ಥರ ಸಭೆಯನ್ನು ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ ಉದ್ಘಾಟಿಸಿದರು.

ರಾಮನಗರ: ರಾಷ್ಟ್ರೀಯ ಶಿಕ್ಷಣ ನೀತಿ 2019 ಕರಡು ಪ್ರತಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಕರಡು ಪ್ರತಿಯ ಸಮಗ್ರ ಅಧ್ಯಯನ, ಚರ್ಚೆಗಳು, ವಿಶ್ಲೇಷಣೆಗಳು ಆಗಬೇಕಾಗಿವೆ. ಶಿಕ್ಷಣ ತಜ್ಞರು,ರು, ಸಾರ್ವಜನಿಕರು ಸಹ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಬೇಕಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ ಹೇಳಿದರು.

ನಗರದ ಎಂ.ಎಚ್. ಸಮೂಹ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಅಸೋಸಿಯೇಟೆಡ್‌ ಮ್ಯಾನೇಜಮೆಂಟ್ ಆಫ್ ಇಂಗ್ಲಿಷ್‌ ಸ್ಕೂಲ್ಸ್ ಇನ್‌ ಕರ್ನಾಟಕ (ಕ್ಯಾಮ್ಸ್‌) ಹಾಗೂ ರಾಮನಗರ ಜಿಲ್ಲಾ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ (ಆರ್‌ಡಿಯುಎಸ್‌ಎಂ ಎ) ಸಂಯುಕ್ತ ಆಶ್ರಯದಲ್ಲಿ ನಡೆದ ರಾಮನಗರ ಜಿಲ್ಲಾ ಅನುದಾನ ರಹಿತ ಶಾಲಾ ಆಡಳಿತ ಮಂಡಳಿ ಮುಖ್ಯಸ್ಥರ ಸಭೆಯನ್ನು ಉದ್ಘಾಟಿಸಿದ ಅವರು ಮಾತನಾಡಿ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡುವ ನಿಟ್ಟಿನಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಒತ್ತು ನೀಡಬೇಕಾಗಿದೆ. ರಾಮನಗರ ಜಿಲ್ಲೆಯಲ್ಲಿರುವ ಖಾಸಗಿ ಶಾಲೆಗಳ ಮುಖ್ಯಸ್ಥರು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅಧ್ಯಯನ ಮಾಡಿ, ಸಲಹೆಗಳನ್ನು ಕ್ಯಾಮ್ಸ್‌ ಸಂಘಟನೆಗೆ ತಲುಪಿಸಿ ಎಂದರು.

ಗುಣಮಟ್ಟದ ಶಿಕ್ಷಕರು ತುರ್ತು ಅಗತ್ಯ: ಇಂದು ಗುಣಮಟ್ಟದ ಶಿಕ್ಷಕರು ಲಭ್ಯವಾಗುತ್ತಿಲ್ಲ ಎಂಬ ಮಾಹಿತಿ ಇದೆ. ರಾಜ್ಯ ಸರ್ಕಾರಕ್ಕೆ 10 ಸಾವಿರ ಶಿಕ್ಷಕರ ನೇಮಕಕ್ಕೆ ಮುಂದಾಗಿತ್ತು. ಆದರೆ, ಸರ್ಕಾರಕ್ಕೆ ಸಿಕ್ಕಿದ್ದು ಕೇವಲ 2 ಸಾವಿರ ಗುಣಮಟ್ಟದ ಶಿಕ್ಷಕರು. ಅಂದರೆ ಗುಣಮಟ್ಟದ ಶಿಕ್ಷಕರ ಕೊರತೆ ಇದೆ ಎಂಬುದು ದೃಢಪಟ್ಟಿದೆ. ಸರ್ಕಾರಿ ಅಥವಾ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಇಂದು ಗುಣಮಟ್ಟದ ಶಿಕ್ಷಕರ ತುರ್ತು ಅಗತ್ಯವಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನೇಕ ಸಮಸ್ಯೆಗಳಿವೆ. ಕಡ್ಡಾಯ ಶಿಕ್ಷಣ ನೀತಿ (ಆರ್‌.ಟಿ.ಇ) ಅಡಿಯಲ್ಲಿ ಖಾಸಗಿ ಅನುದಾನ ರಹಿತ ಶಾಲೆಗಳಿಗೆ ಮಕ್ಕಳು ಬರ್ತಾರೆ, ಆದರೆ, ಸರ್ಕಾರದಿಂದ ಹಣ ಬರ್ತಿಲ್ಲ ಎಂದು ತಿಳಿಸಿದರು.

ಮಾನಸಿಕ ಹಿಂಸೆಯ ನಡುವೆ ಗುಣಮಟ್ಟದ ಶಿಕ್ಷಣ: ಕ್ಯಾಮ್ಸ್‌ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್‌ ಮಾತನಾಡಿ, ರಾಜ್ಯದಲ್ಲಿ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳು ಮಾನಸಿಕ ಹಿಂಸೆಯ ನಡುವೆ ಶಾಲೆ ಗುಣಮಟ್ಟ ಕಾಪಾಡುತ್ತಿವೆ. ಆರ್‌.ಟಿ.ಒ ಅಧಿಕಾರಿಗಳು, ಶಿಕ್ಷಣ ಇಲಾಖೆಯ ಅಧಿಕಾರಿಗಳು ಕಾನೂನು ವಿಚಾರಗಳನ್ನು ಮೊದಲು ತಿಳಿದುಕೊಂಡು ನಂತರವಷ್ಟೇ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಪ್ರಶ್ನಿಸಬೇಕು ಎಂದು ಸಲಹೆ ನೀಡಿದರು.

ರಾಷ್ಟ್ರೀಯ ಶಿಕ್ಷಣ ನೀತಿ 2019ರ ಬಗ್ಗೆ ಮಾತನಾಡಿದ ಅವರು, ಬಹಳಷ್ಟು ಅಂಶಗಳು ಚೆನ್ನಾಗಿದೆ. ಆದರೆ, ಅಷ್ಟೇ ಗೊಂದಲಗಳು ಇವೆ. ಗುಣಮಟ್ಟದ ಶಿಕ್ಷಣಕ್ಕೆ ಖಾಸಗಿ ಶಾಲೆಗಳು ಬದ್ಧವಾಗಿವೆ ಎಂದು ಹೇಳಿದರು.

ಕ್ಯಾಮ್ಸ್‌ ಅಧ್ಯಕ್ಷ ಎಂ.ಎ.ಆನಂದ್‌ ಮಾತನಾಡಿ, ರಾಮನಗರ ಜಿಲ್ಲೆಯಲ್ಲಿ ಖಾಸಗಿ ಅನುದಾನ ರಹಿತ ಶಾಲೆಗಳ ಸಂಘಟನೆ ಇನ್ನು ಬಲಗೊಳ್ಳುವ ಅವಶ್ಯಕತೆ ಇದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆರ್‌ಡಿಯುಎಸ್‌ಎಂಎ ಅಧ್ಯಕ್ಷ ಪಟೇಲ್ ಸಿ ರಾಜು ವಹಿಸಿದ್ದರು.

ಈ ವೇಳೆಯಲ್ಲಿ ಕ್ಯಾಮ್ಸ್‌ ನಿರ್ದೇಶಕ ವೆಂಕಟಸುಬ್ಬಯ್ಯ ಚೆಟ್ಟಿ, ಎಂ.ಎಚ್.ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎಚ್.ಚಂದ್ರಶೇಖರ್‌ ಉಪಸ್ಥಿತಿರಿದ್ದರು. ಪ್ರದೀಪ್‌ ನಿರೂಪಿಸಿದರು. ರಮೇಶ್‌ ಗುಪ್ತ ವಂದಿಸಿದರು.

ವೇದಿಕೆ ಕಾರ್ಯಕ್ರಮದ ನಂತರ ರಾಷ್ಟ್ರೀಯ ಶಿಕ್ಷಣ ನೀತಿ 2019ರ ಬಗ್ಗೆ ಖಾಸಗಿ ಶಿಕ್ಷಣ ಸಂಸ್ಥೆಗಳ ಪದಾಧಿಕಾರಿಗಳು ಚರ್ಚೆ ನಡೆಸಿದರು.

ಹೊಸ ಶಾಲೆ ಮಂಜೂರು: ಕಠಿಣ ನೀತಿ, ನಿರ್ಧಾರ ಅಗತ್ಯ

ರಾಜ್ಯ ಪಠ್ಯಕ್ರಮದ ಶಾಲೆಗಳ ಆರಂಭದ ವಿಚಾರದಲ್ಲಿ ರಾಜ್ಯ ಸರ್ಕಾರ ಕಠಿಣ ನಿಯಮಗಳು, ನೀತಿಗಳನ್ನು ಜಾರಿ ಮಾಡಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ ಸಾರ್ವಜನಿಕ ಶಿಕ್ಷಣ ಇಲಾಖೆಯನ್ನು ಆಗ್ರಹಿಸಿದರು. ಅಂಗಡಿಗಳಿಗೆ ಕೊಟ್ಟಂತೆ ಶಾಲೆಗಳನ್ನು ಆರಂಭಿಸಲು ಪರವಾನಗಿ ಕೊಡಲಾಗುತ್ತಿದೆ. ಹೀಗಾದರೆ ಗುಣಮಟ್ಟದ ಶಿಕ್ಷಣ ಸಿಗೋಲ್ಲ. ಐಸಿಎಸ್ಸಿ ಮತ್ತು ಸಿಬಿಎಸ್‌ಸಿ ಬೋರ್ಡುಗಳು ಪರವಾನಗಿ ವಿಚಾರದಲ್ಲಿ ಕಠಿಣ ಕ್ರಮಗಳನ್ನು ಅನುಸರಿಸುತ್ತವೆ. ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆ ಕೂಡ ಇದೇ ರೀತಿಯ ಮಾನದಂಡಗಳನ್ನು ಅನುಸರಿಸಿ, ಹೊಸ ಶಾಲೆಗಳಿಗೆ ಅನುಮತಿ ಕೊಡಬೇಕು ಎಂದು ಹೇಳಿದರು.

ಟಾಪ್ ನ್ಯೂಸ್

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

1-kateel

Yakshagana; ಕಟೀಲು ದೇಗುಲದ ಆರು ಮೇಳಗಳ ತಿರುಗಾಟ ಆರಂಭ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakapura-laxmi

New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

1-kateel

Yakshagana; ಕಟೀಲು ದೇಗುಲದ ಆರು ಮೇಳಗಳ ತಿರುಗಾಟ ಆರಂಭ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.