ಸ್ವಚ್ಛತೆ ಕಾಪಾಡಿದರೆ ಮಲೇರಿಯಾ ನಿಯಂತ್ರಣ
ಜನರಲ್ಲಿ ಅರಿವು ಮೂಡಿಸುವ ಕಾರ್ಯವಾಗಲಿ • ಡಾ.ಟಿ.ಎನ್.ಪುರುಷೋತ್ತಮ್ ಸಲಹೆ • ಮಲೇರಿಯಾ ವಿರೋಧಿ ಮಾಸಾಚರಣೆ
Team Udayavani, Jun 30, 2019, 1:44 PM IST
ತುಮಕೂರು: ವೈಯಕ್ತಿಕ ಸ್ವಚ್ಛತೆ, ಸುತ್ತಮುತ್ತಲಿನ ಪರಿಸರ ಸ್ವಚ್ಛತೆ ಕಾಪಾಡುವುದರಿಂದ ಮಲೇರಿಯಾ ನಿಯಂತ್ರಣಕ್ಕೆ ತರಲು ಸಾಧ್ಯ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಟಿ.ಎನ್.ಪುರುಷೋತ್ತಮ್ ತಿಳಿಸಿದರು.
ನಗರದ ವಿದ್ಯಾನಿಕೇತನ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿ ಕಾರಿಗಳ ಕಚೇರಿ ಸಹಯೋಗದಲ್ಲಿ ಏರ್ಪಡಿಸಿದ್ದ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯ ಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಸ್ವಚ್ಛತೆ ಅರಿವು ಮೂಡಿಸಿ:ಸೊಳ್ಳೆಗಳಿಂದ ಹರಡುವ ಮಲೇರಿಯಾ ಮಾರಕ ರೋಗವಾಗಿ ಮಾರ್ಪಟ್ಟಿದೆ. ಸಾರ್ವಜನಿಕ ಸ್ಥಳ, ಚರಂಡಿಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕೆಂದರಲ್ಲದೆ, ಹತ್ತು ದಿನಗಳ ಕಾಲ ಒಂದೇ ಕಡೆ ನೀರು ನಿಂತಿದ್ದರೆ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಈ ನಿಟ್ಟಿನಲ್ಲಿ ಸೊಳ್ಳೆಗಳ ಉತ್ಪತ್ತಿ ತಾಣಗಳನ್ನು ನಾಶಪಡಿಸಬೇಕು. ವಿದ್ಯಾರ್ಥಿಗಳು ಸಂದೇಶ ವಾಹಕಗಳಂತೆ ಕಾರ್ಯನಿರ್ವಹಿಸುವುದ ರಿಂದ ಶಿಕ್ಷಕರು ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿ ಗಳಿಗೆ ಸ್ವಚ್ಛತೆ ಕುರಿತು ಅರಿವು ಮೂಡಿಸಬೇಕು. ಇದ ರಿಂದ ಜನರಿಗೆ ಬಹು ಬೇಗ ಮಾಹಿತಿ ರವಾನೆಯಾಗು ತ್ತದೆ ಎಂದು ಸಲಹೆ ನೀಡಿದರು.
103 ಪ್ರಕರಣಗಳು: ಜಿಲ್ಲೆಯಲ್ಲಿ ಕಳೆದ ವರ್ಷ 103 ಮಲೇರಿಯಾ ಪ್ರಕರಣಗಳು ಬೆಳಕಿಗೆ ಬಂದಿದ್ದು 2019ರ ಜನವರಿಯಿಂದ ಈವರೆಗೆ 16 ಪ್ರಕರಣಗಳು ಪತ್ತೆಯಾಗಿವೆ. ಲ್ಯಾಟಿನ್ ಅಮೇರಿಕಾ, ಆಫ್ರಿಕಾ, ಮಧ್ಯ ಪ್ರಾಚ್ಯ ಹಾಗೂ ಪೂರ್ವ ಏಷ್ಯಾ ಪ್ರದೇಶಗಳಲ್ಲಿ ಮಲೇರಿಯಾ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತವೆ. ಮಲೇರಿಯಾ ಹರಡುವಿಕೆ ಹಾಗೂ ತಡೆ ಗಟ್ಟುವ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು.
ಮಹಾನಗರ ಪಾಲಿಕೆ ಸದಸ್ಯ ಧರಣೇಂದ್ರ ಕುಮಾರ್ ಮಾತನಾಡಿ, ಪ್ಲಾಸ್ಟಿಕ್ ಬಳಕೆಯಿಂದಲೂ ಮಲೇರಿಯಾ ಹರಡುವ ಸಾಧ್ಯತೆಯಿದೆ. ಪ್ಲಾಸ್ಟಿಕ್ ಬಳಕೆ ನಿಯಂತ್ರಿಸುವುದರಿಂದ ಮಲೇರಿಯಾ ಮುಕ್ತ ಮಾಡಬಹುದಾಗಿದೆ. ಪ್ರತಿಯೊಬ್ಬರೂ ಮನೆ ಮುಂದೆ ಗಿಡ ನೆಡಿ ಹಾಗೂ ಅಕ್ಕ ಪಕ್ಕದ ಮನೆಯವರಿಗೂ ಗಿಡ ನೆಡಲು ತಿಳಿಸಿ. ಇದರಿಂದ ಸ್ವಚ್ಛ ಪರಿಸರ ನಿರ್ಮಾಣ ವಾಗಿ ಸಾಂಕ್ರಾಮಿಕ ರೋಗ ಹರಡದಂತೆ ನಿಯಂತ್ರಿಸ ಬಹದಾಗಿದೆ ಎಂದು ಕರೆ ನೀಡಿದರು.
ಖಾಲಿ ನಿವೇಶನಗಳಲ್ಲಿ ಕಸ ಹಾಕಬೇಡಿ: ಮಹಾನಗರ ಪಾಲಿಕೆ ಸದಸ್ಯ ಮಂಜುನಾಥ್ ಮಾತನಾಡಿ, ಸಾರ್ವ ಜನಿಕರು ಖಾಲಿ ನಿವೇಶನಗಳಲ್ಲಿ ಕಸ ಹಾಕುವುದರಿಂದ ಸೊಳ್ಳೆಗಳು ಉತ್ಪತ್ತಿಯಾಗಿ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಇರುತ್ತದೆ. ಪ್ರತಿನಿತ್ಯ ಮನೆಯಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಪಾಲಿಕೆಯ ಕಸ ಸಂಗ್ರ ಹಿಸುವ ವಾಹನಕ್ಕೆ ನೀಡುವುದರಿಂದ ಪರಿಸರ ವನ್ನು ಸ್ವಚ್ಛವಾಗಿಟ್ಟುಕೊಳ್ಳಬಹುದೆಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿದ್ಯಾ ನಿಕೇತನ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಡಾ.ಸಿ. ಜಯರಾಮ್ ಮಾತನಾಡಿ, ತುಮಕೂರು ನಗರವು ಸ್ಮಾರ್ಟ್‌ಸಿಟಿಯತ್ತ ಸಾಗುತ್ತಿದೆ. ನಗರವನ್ನು ಸ್ವಚ್ಛವಾಗಿಟ್ಟುಕೊಳ್ಳುವಲ್ಲಿ ಸಾರ್ವಜನಿಕರು ಜವಾಬ್ದಾರಿ ಅರಿಯಬೇಕು ಎಂದರು. ಕ್ಷೇತ್ರ ಶಿಕ್ಷಣ ಆರೋಗ್ಯ ಅಧಿಕಾರಿ ಹನುಮಂತ ರಾಯಪ್ಪ, ಶಾಲೆಯ ಮುಖ್ಯೋಪಾಧ್ಯಾಯ ಎ.ಎಸ್.ಲಕ್ಷ್ಮೀನಾರಾಯಣ, ಸಹಾಯಕ ಕೀಟ ಶಾಸ್ತ್ರಜ್ಞೆ ಎ.ಉಷಾ, ತಾಲೂಕು ಆರೋಗ್ಯಾಧಿಕಾರಿ
ಎಸ್.ಶರತ್‌ಚಂದ್ರ, ಆರೋಗ್ಯ ಹಿರಿಯ ಅಧಿಕಾರಿ ವೆಂಕಟಾಚಲಯ್ಯ, ವೈದ್ಯಾಧಿಕಾರಿ ಶಾಹಿರಬಾನು, ಆರೋಗ್ಯಾಧಿಕಾರಿ ಪಾಪ್ಪಣ್ಣ, ಆರೋಗ್ಯ ಇಲಾಖೆಯ ಸಿಬ್ಬಂದಿ, ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal:ಮನೆಗೆ ನುಗ್ಗಿದ ದುಷ್ಕರ್ಮಿಗಳು; ರಾಡ್ ನಿಂದ ತಲೆಗೆ ಹೊಡೆದು ಮಾಂಗಲ್ಯಸರ ದೋಚಿ ಪರಾರಿ
Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ
ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ
Minister ಸೋಮಣ್ಣ, ಸಿ.ಎಸ್. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್: ಬಂಧನ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.