ಮೈಸೂರು ಅಸೋಸಿಯೇಶನ್ ಸಭಾಗೃಹ:ಚಿತ್ರಕಲಾ ಪ್ರದರ್ಶನ
ಪ್ರಶಸ್ತಿ ವಿಜೇತ ಚಿತ್ರಕಲಾವಿದ ಎಸ್. ಜಿ. ವಾಸುದೇವರಿಂದ ಉದ್ಘಾಟನೆ
Team Udayavani, Jun 30, 2019, 4:50 PM IST
ಮುಂಬಯಿ: ಮೈಸೂರು ಅಸೋಸಿಯೇಶನ್ ಮುಂಬಯಿ ವತಿಯಿಂದ ಕನ್ನಡ ವಿಭಾಗ ಮುಂಬಯಿ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಮಾಟುಂಗಾ ಪೂರ್ವದ ಭಾವುದಾಜಿ ರಸ್ತೆಯಲ್ಲಿನ ಸಭಾಗೃಹದಲ್ಲಿ ಕರ್ನಾಟಕ ಮೂಲದ ಮುಂಬಯಿಯ ನಾಮಾಂಕಿತ ಚಿತ್ರ ಕಲಾವಿದರ “ಚಿತ್ರಕಲಾ ಪ್ರದರ್ಶನ’ವು ಜೂ. 29 ರಂದು ಉದ್ಘಾಟನೆಗೊಂಡಿತು.
2 ದಿನಗಳ ಕಾಲ ನಡೆಯಲಿರುವ “ಚಿತ್ರಕಲಾ ಪ್ರದರ್ಶನ’ ವನ್ನು ಶನಿವಾರ ಪೂರ್ವಾಹ್ನ ಕರ್ನಾಟಕ ರಾಜ್ಯ ಪ್ರಶಸ್ತಿ ವಿಜೇತ ನಾಡಿನ ಹೆಸರಾಂತ ಚಿತ್ರಕಲಾವಿದ ಹಾಗೂ ಕರ್ನಾಟಕ ಲಲಿತ ಕಲಾ ಅಕಾಡೆಮಿಯ ಮಾಜಿ ಅಧ್ಯಕ್ಷ ಎಸ್. ಜಿ. ವಾಸುದೇವ ಉದ್ಘಾಟಿಸಿ, ಮೈಸೂರು ಅಸೋಸಿಯೇಶನ್‌ನ ಮುಖವಾಣಿ ನೇಸರು ತ್ತೈಮಾಸಿಕವನ್ನು ಬಿಡುಗ ಡೆಗೊಳಿಸಿ ಶುಭಹಾರೈಸಿದರು.
ಹಿರಿಯ ನಾಟಕಕಾರ, ಸಂಘಟಕ ಡಾ| ಬಿ. ಆರ್. ಮಂಜುನಾಥ್ ಅವರ ಪ್ರಧಾನ ಸಹಯೋಜಕತ್ವದಲ್ಲಿ ನಡೆಸಲ್ಪಟ್ಟ ಚಿತ್ರಕಲಾ ಪ್ರದರ್ಶನದಲ್ಲಿ ಪ್ರಸಿದ್ಧ ಚಿತ್ರಕಲಾವಿದರಾದ ವಾಸುದೇವ ಕಾಮತ್, ದೇವದಾಸ್ ಎಸ್. ಶೆಟ್ಟಿ, ದಿವಾಕರ ಶೆಟ್ಟಿ, ರೇಖಾ ಹೆಬ್ಟಾರ್, ಅನು ಪಾವಂಜೆ, ಪಂಜು ಗಂಗೊಳ್ಳಿ, ಚಿತ್ರಮಿತ್ರ ಮತ್ತು ಜಯ ಎಸ್. ಸಾಲ್ಯಾನ್ ಮತ್ತಿತರ ಕಲಾವಿದರು ಭಾಗವಹಿಸಿ ತಮ್ಮತಮ್ಮ ಚಿತ್ರಗಳನ್ನು ಪ್ರದರ್ಶಿಸಿ ಕಲಾಭಿಮಾನಿಗಳ ಪ್ರಶಂಸೆಗೆ ಪಾತ್ರರಾದರು.
ಪ್ರದರ್ಶನದ ಅಂಗವಾಗಿ ಸಯನ್, ದಾದರ್ ಮತ್ತು ಮಾಟುಂಗಾ ಆಸುಪಾಸಿನ 9 ರಿಂದ 12 ವರ್ಷದೊಳಗಿನ ಕನ್ನಡ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿತ್ತು. ವಿಜೇತ ಮಕ್ಕಳಿಗೆ ನಗದು ಬಹುಮಾನ ನೀಡಿ ಚಿತ್ರಕಲೆಗೆ ಪ್ರೋತ್ಸಾಹಿಸಲಾಯಿತು. ಈ ಸಂದರ್ಭದಲ್ಲಿ ಮೈಸೂರು ಅಸೋಸಿಯೇಶನ್ ಮುಂಬಯಿ ಟ್ರಸ್ಟಿ ಕೆ.ಮಂಜುನಾಥಯ್ಯ, ಕನ್ನಡ ವಿಭಾಗ ಮುಂಬಯಿ ವಿವಿಯ ಮುಖ್ಯಸ್ಥ ಡಾ| ಜಿ. ಎನ್. ಉಪಾಧ್ಯ, ಮೊಗವೀರ ಮಾಸಿಕದ ಸಂಪಾದಕ ಹಾಗೂ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಇದರ ಗೌರವ ಪ್ರಧಾನ ಕಾರ್ಯದರ್ಶಿ ಅಶೋಕ ಎಸ್.ಸುವರ್ಣ, ಕರ್ನಾಟಕ ಸಂಘ ಮುಂಬಯಿ ಕಾರ್ಯದರ್ಶಿ ಡಾ| ಭರತ್‌ಕುಮಾರ್ ಪೊಲಿಪು ಮತ್ತಿತರ ಗಣ್ಯರು ಉಪಸ್ಥಿತರಿದ್ದು ಚಿತ್ರಕಲಾ ಸ್ಪರ್ಧಿಗಳಿಗೆ ಪಾರಿತೋಷಕ ಪ್ರದಾನಿಸಿ ಅಭಿನಂದಿಸಿದರು.
ಅನೇಕ ಕಲಾವಿದರು ಹಾಜರಿದ್ದರು. ಪದ್ಮನಾಭ ಶೆಟ್ಟಿ ಸಿದ್ದಕಟ್ಟೆ ಪ್ರಾರ್ಥನೆಗೈದರು. ಮೈಸೂರು ಅಸೋಸಿಯೇಶನ್‌ನ ನಾರಾಯಣ ನವಿಲೇಕರ್ ಸ್ವಾಗತಿಸಿದರು. ಕನ್ನಡ ವಿಭಾಗದ ಮುಂಬಯಿ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಡಾ| ಪೂರ್ಣಿಮಾ ಎಸ್.ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಮೈಸೂರು ಅಸೋಸಿಯೇಶನ್‌ನ ಗೌರವ ಕಾರ್ಯ ದರ್ಶಿ ಡಾ| ಗಣಪತಿ ಶಂಕರಲಿಂಗ್ ವಂದಿಸಿದರು.
ಚಿತ್ರ-ವರದಿ : ರೊನಿಡಾ ಮುಂಬಯಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Cleanliness: ಮನೆ ಮನೆಯಿಂದ ದೇಶವೇ ಸ್ವಚ್ಚ
Congress: ದ.ಕ ಗ್ರಾಮ ಪಂಚಾಯತ್; 24ರಲ್ಲಿ 19 ಸ್ಥಾನ ಕಾಂಗ್ರೆಸ್ ಬೆಂಬಲಿತರಿಗೆ ಗೆಲುವು
Siddapura: ಬುಲೆಟ್ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ
Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.