ದೇಶದ ಶೇ.4ರಷ್ಟು ಜಿಎಸ್ಟಿ ತೆಲಂಗಾಣದಲ್ಲೇ ಸಂಗ್ರಹ
Team Udayavani, Jul 1, 2019, 5:42 AM IST
ಹೈದರಾಬಾದ್: 2018 - 19ನೇ ವಿತ್ತೀಯ ವರ್ಷದಲ್ಲಿ ತೆಲಂಗಾಣವು ಬರೋಬ್ಬರಿ 36,212 ಕೋಟಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ಸಂಗ್ರಹಿಸುವ ಮೂಲಕ ಅಚ್ಚರಿ ಮೂಡಿಸಿದೆ.
ಇದು ಇಡೀ ದೇಶದ ಜಿಎಸ್ಟಿ ಸಂಗ್ರಹದ ಶೇ. 4ರಷ್ಟು. ಅಷ್ಟೇ ಅಲ್ಲ, ಮತ್ತೂಂದು ದಾಖಲೆ ಎಂಬಂತೆ, ಕೇವಲ ಹೈದರಾಬಾದ್ ವಲಯದಲ್ಲೇ ಮಾಸಿಕ ಸರಾಸರಿ ಆದಾಯ ಶೇ. 28 ರಷ್ಟು ಹೆಚ್ಚಳವಾಗಿದೆ. ಕಳೆದ ವಿತ್ತೀಯ ವರ್ಷಕ್ಕೆ ಹೋಲಿಸಿದರೆ ಇದು ದೇಶದಲ್ಲೇ ಅತ್ಯಧಿಕ ಎನ್ನಲಾಗಿದೆ. ತೆಲಂಗಾಣದಲ್ಲಿನ ತೆರಿಗೆ ದಾರರ ಪ್ರಮಾಣ ದೇಶದ ಶೇ. 3ರಷ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದೇ ವೇಳೆ, ಹೈದರಾಬಾದ್ ವಲಯದ ಅಧಿಕಾರಿಗಳು ಜಿಎಸ್ಟಿಯ ಅನುಕೂಲತೆ ಯನ್ನು ಗ್ರಾಹಕರಿಗೆ ವರ್ಗಾಯಿಸದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತಿದ್ದಾರೆ. ಇಲ್ಲಿ 458 ಕೋಟಿ ರೂ. ಜಿಎಸ್ಟಿ ವಂಚನೆಯನ್ನು ಪತ್ತೆ ಹಚ್ಚಲಾಗಿದೆ. ಈ ಪೈಕಿ 272 ಕೋಟಿ ರೂ. ವಸೂಲಿ ಮಾಡಲಾಗಿದೆ ಎಂದು ಹೈದರಾಬಾದ್ ಜಿಎಸ್ಟಿ ಪ್ರಧಾನ ಆಯುಕ್ತ ಎಂ.ಶ್ರೀನಿವಾಸ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.