ಇಂದಿರಾ ಕ್ಯಾಂಟೀನ್‌ನಲ್ಲಿ ಕಳಪೆ ತರಕಾರಿ, ಅಕ್ಕಿ

Team Udayavani, Jul 1, 2019, 3:07 AM IST

indhira-canteen

ಬೆಂಗಳೂರು: ಬೊಮ್ಮನಹಳ್ಳಿ ವಾರ್ಡ್‌ನ ದೇವರಚಿಕ್ಕನಹಳ್ಳಿಯಲ್ಲಿ ನಿರ್ಮಿಸಲಾಗಿರುವ ಇಂದಿರಾ ಕ್ಯಾಂಟೀನ್‌ಗಳಿಗೆ ಆಹಾರ ಪೂರೈಸುವ ಅಡುಗೆ ಕೋಣೆಯಲ್ಲಿ ಕಳಪೆ ಗುಣಮಟ್ಟದ ಅಕ್ಕಿ, ತೆಂಗಿನ ಕಾಯಿ ಮತ್ತು ತರಕಾರಿಗಳನ್ನು ಬಳಸಲಾಗುತ್ತಿದೆ ಎಂದು ಬೊಮ್ಮನಹಳ್ಳಿಯ ಪಾಲಿಕೆ ಸದಸ್ಯ ರಾಮಮೋಹನ್‌ ರಾಜ್‌ ಆರೋಪಿಸಿದ್ದಾರೆ.

ದೇವರಚಿಕ್ಕನಹಳ್ಳಿಯಲ್ಲಿರುವ ಇಂದಿರಾ ಕ್ಯಾಂಟೀನ್‌ನಿಂದ ಆರು ಇಂದಿರಾ ಕ್ಯಾಂಟೀನ್‌ಗಳಿಗೆ ಆಹಾರ ಪೂರೈಕೆ ಮಾಡಲಾಗುತ್ತಿದೆ. ಕೊಳೆತ ವಸ್ತುಗಳಿಂದಲೇ ತಯಾರಾಗುತ್ತಿರುವ ಆಹಾರವನ್ನು ನೂರಾರು ಜನರಿಗೆ ನೀಡಲಾಗುತ್ತಿದೆ. ಈ ಆಹಾರ ವಿಷಕ್ಕಿಂತ ಅಪಾಯಕಾರಿ. ಈ ರೀತಿ ಮಾಡುತ್ತಿರುವವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇಂದಿರಾ ಕ್ಯಾಂಟೀನ್‌ನಲ್ಲಿ ಕಳಪೆ ಗುಣಮಟ್ಟದ ಆಹಾರ ತಯಾರಿಸುತ್ತಿದ್ದ ಬಗ್ಗೆ ಶನಿವಾರ (ಜೂ.29) ಪೌರಕಾರ್ಮಿಕರು ಮಹಿತಿ ನೀಡಿದ್ದರು. ಸ್ಥಳಕ್ಕೆ ದಿಢೀರ್‌ ಭೇಟಿ ನೀಡಿದಾಗ ಕಳಪೆ ಆಹಾರ ಪರ್ದಾಥಗಳನ್ನು ಬಳಸುತ್ತಿರುವುದು ಪತ್ತೆಯಾಗಿದೆ. 400 ರೂ. ನೀಡಿ ಖರೀದಿಸಿದ 25 ಕೆ.ಜಿ ಅಕ್ಕಿ, ಹಳದಿ ಮತ್ತು ಹಸಿರು ಬಣ್ಣಕ್ಕೆ ತಿರುಗಿದೆ. ವಾರದ ಹಿಂದೆಯೇ ಅಲ್ಲಿದ್ದ ತರಕಾರಿಗಳು ಕೊಳೆತಿದ್ದವು ಎಂದು ದೂರಿದರು.

ಸಾಮಾನ್ಯ ಸಭೆಯಲ್ಲೂ ಚರ್ಚೆ: ಜೂ.28ರಂದು ನಡೆದ ಪಾಲಿಕೆಯ ಸಾಮಾನ್ಯ ಸಭೆಯಲ್ಲೂ ಇಂದಿರಾ ಕ್ಯಾಂಟೀನ್‌ನಲ್ಲಿ ಕಳಪೆ ಆಹಾರ ನೀಡಲಾಗುತ್ತಿದೆ ಎಂದು ಶಾಸಕ ಮುನಿರತ್ನ ಅವರು ಆರೋಪಿಸಿದ್ದರು. ಇಂದಿರಾ ಕ್ಯಾಂಟೀನ್‌ಗಳಿಗೆ ನಿತ್ಯ ನೂರು ಜನರೂ ಭೇಟಿ ನೀಡುತ್ತಿಲ್ಲ. ಇದಕ್ಕೆ ಇಲ್ಲಿ ಸಿಗುವ ಕಳಪೆ ಆಹಾರವೇ ಕಾರಣ.

ಬಿಬಿಎಂಪಿ ಇಂದಿರಾಕ್ಯಾಂಟೀನ್‌ ನಿರ್ವಾಹಣೆಯ ಜವಾಬ್ದಾರಿಯನ್ನು ಚೆಫ್ಟಾಕ್‌ ಮತ್ತು ರಿವಾರ್ಡ್‌ ಸಂಸ್ಥೆಗಳಿಗೆ ನೀಡಿಲಾಗಿದೆ. ಈ ಕಂಪನಿಗಳು ಸರ್ಮಪಕವಾಗಿ ಕೆಲಸ ಮಾಡುತ್ತಿಲ್ಲ ಮತ್ತು ಕಳಪೆ ಗುಣಮಟ್ಟದ ಆಹಾರ ನೀಡುತ್ತಿವೆ. ಆಗಸ್ಟ್‌ನಲ್ಲಿ ಇವುಗಳ ಟೆಂಡರ್‌ ಮುಗಿಯಲಿದ್ದು, ಬೇರೆಯ ಕಂಪನಿಗೆ ಜವಾಬ್ದಾರಿ ನೀಡಬೇಕು ಎಂದು ಒತ್ತಾಯಿಸಿದ್ದರು.

ಕಳಪೆ ಗುಣಮಮಟ್ಟದಿಂದ ಕೂಡಿತ್ತು ಎಂದು ಹೇಳಲಾಗಿರುವ ತರಕಾರಿ ಮತ್ತು ಅಕ್ಕಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಆಧರಿಸಿ ಕ್ರಮ ತೆಗೆದುಕೊಳ್ಳಲಾಗುವುದು.
-ಸರ್ಫಾಜ್‌ ಖಾನ್‌, ಬಿಬಿಎಂಪಿ ಜಂಟಿ ಆಯುಕ್ತ

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

4

Arrested: ದುಬೈ ಸೈಬರ್‌ ವಂಚಕರಿಗೆ ನೆರವು: 10 ಮಂದಿ ಸೆರೆ

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.