ಉಪಜಾತಿ ಬೆಳೆಸುವ ಕಾರ್ಯವಾಗಲಿ

•ವೀರಶೈವ-ಲಿಂಗಾಯತರು ಒಂದಾದಾಗ ಮಾತ್ರ ಸಮಾಜದ ಪ್ರಗತಿ: ಮಾಜಿ ಸಿಎಂ ಶೆಟ್ಟರ

Team Udayavani, Jul 1, 2019, 9:24 AM IST

hubali-tdy-1..

•ವೀರಶೈವ-ಲಿಂಗಾಯತರು ಒಂದಾದಾಗ ಮಾತ್ರ ಸಮಾಜದ ಪ್ರಗತಿ: ಮಾಜಿ ಸಿಎಂ ಶೆಟ್ಟರ

ಧಾರವಾಡ: ವೀರಶೈವ ಮತ್ತು ಲಿಂಗಾಯತರು ಕೂಡಿ ಸಮಾಜದಲ್ಲಿ ಇರುವ ವಿವಿಧ ಉಪ ಜಾತಿಗಳನ್ನು ಬೆಳೆಸುವ ಕಾರ್ಯ ಮಾಡಬೇಕೆ ಹೊರತು ಸಮಾಜ ಒಡೆಯುವ ಕೆಲಸವಲ್ಲ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ ಹೇಳಿದರು.

ಇಲ್ಲಿಯ ಚನ್ನಬಸವೇಶ್ವರ ನಗರದ ಲಿಂಗಾಯತ ಭವನದಲ್ಲಿ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಘಟಕದ ವತಿಯಿಂದ ರವಿವಾರ ಹಮ್ಮಿಕೊಂಡಿದ್ದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ವೈಯಕ್ತಿಕ ಹಿತಾಸಕ್ತಿಗಾಗಿ ವೀರಶೈವ-ಲಿಂಗಾಯತ ಸಮಾಜ ಒಡೆಯಲು ಹೋಗಿ ಕೆಲವರು ಈಗಾಗಲೇ ಕೈ ಸುಟ್ಟಿಕೊಂಡಿದ್ದಾರೆ. ಹೀಗಾಗಿ ವೀರಶೈವ-ಲಿಂಗಾಯತರು ಕೂಡಿಕೊಂಡು ಬೆಳೆದಾಗಲೇ ಸಮಾಜದ ಅಭಿವೃದ್ಧಿ ಸಾಧ್ಯವಿದೆ ಎಂಬ ಸತ್ಯ ಅರಿತು ಮುನ್ನಡೆಯಬೇಕು ಎಂದು ಸಲಹೆ ನೀಡಿದರು.

ಸಮಾಜ ಒಡೆಯುವ ಕೆಲಸಕ್ಕೆ ಮುಂದಾಗಿದ್ದವರಿಗೆ ಚುನಾವಣೆಯಲ್ಲಿ ಜನ ತಕ್ಕ ಉತ್ತರವನ್ನೇ ನೀಡಿದ್ದಾರೆ. ಇನ್ನು ಮುಂದೆಯಾದರೂ ಇಂತಹ ಕಾರ್ಯ ಮಾಡುವುದನ್ನು ಬಿಟ್ಟು ಸಮಾಜದಲ್ಲಿ ಆರ್ಥಿಕವಾಗಿ ದುರ್ಬಲವಾಗಿರುವ ಸಹಾಯ ಮಾಡಿ ಸಮಾಜದ ಬಗ್ಗೆ ಕಾಳಜಿ ವಹಿಸಬೇಕು. ಸಮಾಜ ಮುಖೀಯಾಗಿ ಕೆಲಸ ಮಾಡಲು ಅಧಿಕಾರ ಮತ್ತು ಅವಕಾಶ ಸಿಕ್ಕಾಗ ವೈಯಕ್ತಿಕ ಹಿತಾಸಕ್ತಿಗಳನ್ನು ಬದಿಗಿಟ್ಟು ಕಾರ್ಯ ಮಾಡಬೇಕಿದೆ. ಎಲೆಮರೆಯ ಕಾಯಿಗಳಂತಿರುವ ಸಮಾಜದ ಪ್ರತಿಭಾವಂತರನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯ ಹಚ್ಚೆಚ್ಚು ನಡೆಯಲಿ ಎಂದರು.

ಕಳೆದ ಲೋಕಸಭಾ ಚುನಾವಣೆಯಲ್ಲಿ 28 ಲೋಕಸಭಾ ಕ್ಷೇತ್ರಗಳ ಪೈಕಿ 9 ಜನ ವೀರಶೈವ ಲಿಂಗಾಯತ ಸಮಾಜದವರು ಗೆದ್ದು ಬಂದಿದ್ದಾರೆ. ಯಾವ ಪಾರ್ಟಿಯನ್ನು ಸಮಾಜ ಒಪ್ಪಿಕೊಳ್ಳುತ್ತದೆ. ಆ ಸಮಾಜವನ್ನು ಪಕ್ಷ ಕೂಡ ಒಪ್ಪಿಕೊಳ್ಳಲಿದೆ. ಸಮಾಜ ವ್ಯಕ್ತಿಗಳಾದ ನಾವು ಸಮಾಜದ ಕಾಳಜಿ ಮಾಡಬೇಕು ಎಂದರು.

ಸಮಾಜದ ಮುಖಂಡ ಪ್ರೊ| ವಿ.ಸಿ. ಸವಡಿ ಮಾತನಾಡಿದರು. ಡಿವೈಎಸ್‌ಪಿ ಪ್ರಿಯದರ್ಶಿನಿ ಸಾಣಿಕೊಪ್ಪ ಉಪನ್ಯಾಸ ನೀಡಿದರು. ಐಎಎಸ್‌ ಪರಿಕ್ಷೆಯಲ್ಲಿ 17ನೇ ರ್‍ಯಾಂಕ್‌ ಗಳಿಸಿದ ರಾಹುಲ್ ಸಂಕನೂರ ಅವರಿಗೆ ಸಮಾಜದ ವತಿಯಿಂದ ಸನ್ಮಾನ ಮಾಡಲಾಯಿತು. ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕರಿಸಲಾಯಿತು.

ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಬಣಜಿಗದ ಸಂಘದ ತಾಲೂಕು ಅಧ್ಯಕ್ಷ ಶೇಖರ ಕವಳಿ ಅಧ್ಯಕ್ಷತೆ ವಹಿಸಿದ್ದರು. ವಿಪ ಸದಸ್ಯ ಎಸ್‌.ವಿ. ಸಂಕನೂರ, ಮಾಜಿ ಸಭಾಪತಿ ವೀರಣ್ಣ ಮತ್ತಿಕಟ್ಟಿ, ಶಿವಬಸಪ್ಪ ಹೆಸರೂರ, ಕವಿವಿಯ ಪ್ರಭಾರಿ ಕುಲಪತಿ ಡಾ| ಎ.ಎಸ್‌. ಶಿರಾಳಶೆಟ್ಟರ, ಸಾವಿತ್ರಿ ಕಡಿ, ಶಿವಾನಂದ ಕವಳಿ, ಶಿವಶಂಕರ ಎಚ್. ಇದ್ದರು.

ಟಾಪ್ ನ್ಯೂಸ್

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

car-parkala

ಕಾಸರಗೋಡು: ಬೈಕ್‌ ಢಿಕ್ಕಿ; ವಿದ್ಯಾರ್ಥಿಗೆ ಗಂಭೀರ ಗಾಯ

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.