ಸತತ ಮಳೆಗೆ ಮರ-ಮನೆ ಗೋಡೆ ಧರೆಗೆ
|ಪಾಲಿಕೆ ನಿರ್ಲಕ್ಷ್ಯಕ್ಕೆ ನಗರ ನಿವಾಸಿಗಳ ಹಿಡಿಶಾಪ |ಮರ ಬಿದ್ದು ಆಟೋ ರಿಕ್ಷಾಗಳು ಜಖಂ | 250ಕ್ಕೂ ಹೆಚ್ಚು ಮನೆಗೆ ನುಗ್ಗಿದ ಮಳೆನೀರು
Team Udayavani, Jul 1, 2019, 9:32 AM IST
ಹುಬ್ಬಳ್ಳಿ: ಇಲ್ಲಿನ ದೇಸಾಯಿ ಓಣಿಯಲ್ಲಿ ಮಳೆಗೆ ಬಿದ್ದಿರುವ ಮನೆ.
ಹುಬ್ಬಳ್ಳಿ: ಶನಿವಾರ ರಾತ್ರಿಯಿಂದ ರವಿವಾರ ಮಧ್ಯಾಹ್ನದವರೆಗೆ ಸುರಿದ ಮಳೆಯಿಂದಾಗಿ ನಗರದ ವಿವಿಧೆಡೆ ಮರಗಳು ನೆಲಕ್ಕುರುಳಿದ್ದರೆ, ಕೆಲ ಮನೆಗಳ ಗೋಡೆಗಳು ಕುಸಿದಿವೆ. ಹಲವಡೆ ಮನೆಗಳಿಗೆ ನೀರು ನುಗ್ಗಿದ ಘಟನೆ ಕೂಡ ನಡೆದಿವೆ.
ಕಳೆದ 24 ಗಂಟೆಗಳಿಂದ ನಗರ ಸೇರಿದಂತೆ ತಾಲೂಕಿನಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಜಿಟಿ-ಜಿಟಿ ಮಳೆ ನಿರಂತರವಾಗಿ ಸುರಿಯುತ್ತಿದೆ. ಹುಬ್ಬಳ್ಳಿಯಲ್ಲಿ 41.9 ಮಿಮೀ, ಛಬ್ಬಿ 25.4 ಮಿಮೀ ಹಾಗೂ ಶಿರಗುಪ್ಪಿ 27.6 ಮಿಮೀ ಹಾಗೂ ಬ್ಯಾಹಟ್ಟಿ ಹೋಬಳಿಯಲ್ಲಿ 34.0 ಮಿಮೀ ಮಳೆಯಾಗಿದೆ. ಕೃಷಿ ಚಟುವಟಿಕೆಗೆ ಅಗತ್ಯವಾಗಿರುವ ಮಳೆ ನಿರೀಕ್ಷಿಸಲಾಗಿದ್ದು, ಭೂಮಿ ತಂಪಾಗಿದೆ.
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ನಗರದ ದೇಸಾಯಿ ಓಣಿ, ಬೈರಿದೇವರಕೊಪ್ಪ ಸೇರಿದಂತೆ ಇತರೆಡೆ ನಾಲ್ಕು ಮನೆಗಳ ಗೋಡೆಗಳು ಭಾಗಶಃ ಬಿದ್ದಿವೆ. ಜೆಸಿ ನಗರ, ಸೆಂಟ್ರಲ್ ಎಕ್ಸೈಜ್ ಕಾಲೋನಿ, ವಿದ್ಯಾನಗರದ ಹಳೇಯ ಆದಾಯ ತೆರಿಗೆ ಕಚೇರಿ ರಸ್ತೆ, ನವನಗರ, ವಿಜಯನಗರದಲ್ಲಿ ಮರಗಳು ಬಿದ್ದಿವೆ. ಇದರಿಂದ ಕೆಲವಡೆ ರಸ್ತೆ ಸಂಚಾರ ಸ್ಥಗಿತಗೊಂಡಿದ್ದು, ಪಾಲಿಕೆಯ ಸಿಬ್ಬಂದಿ ಮರ ತೆರವುಗೊಳಿಸಿದ್ದಾರೆ. ಜೆಸಿ ನಗರ ಹಾಗೂ ವಿಜಯ ನಗರದಲ್ಲಿ ಮರ ಬಿದ್ದ ಪರಿಣಾಮ ಎರಡು ಆಟೋ ರಿಕ್ಷಾಗಳು ಜಖಂಗೊಂಡಿವೆ.
ವಾಯು ಪುತ್ರ ಬಡಾವಣೆ, ತೋಳನಕೆರೆ ರಸ್ತೆ, ಬಿಡ್ನಾಳ, ಗದಗ ರಸ್ತೆಯ ವಿನೂತನ ಕಾಲೋನಿ, ಶಿವಪುತ್ರ ನಗರ, ಟೀಚರ್ ಕಾಲೋನಿ, ಚನ್ನಪೇಟೆಯ ಕೆಎಚ್ಬಿ ಕಾಲೋನಿ ಸೇರಿದಂತೆ ಹಲವೆಡೆ ಗಟಾರು ನೀರು ಮನೆಗಳಿಗೆ ನುಗ್ಗಿದ ಘಟನೆ ನಡೆದಿದೆ. ಸಕಾಲದಲ್ಲಿ ಗಟಾರುಗಳನ್ನು ಸ್ವಚ್ಛಗೊಳಿಸದ ಪರಿಣಾಮ ಈ ಸಮಸ್ಯೆ ಉಂಟಾಗಿದೆ ಎಂದು ಹೇಳಲಾಗಿದೆ. ಕೆಲ ಅಪಾರ್ಟ್‌ಮೆಂಟ್‌ಗಳಿಗೆ ಮಳೆ ನೀರು ಮಿಶ್ರಿತ ಚರಂಡಿ ನೀರು ನುಗ್ಗಿದೆ. ಇದರಿಂದ ಜನರು ಸಂಕಷ್ಟ ಅನುಭವಿಸುವಂತಾಗಿದ್ದು, ಮಳೆ ನೀರನ್ನು ಹೊರ ಹಾಕಲು ಹರಸಾಹಸ ಪಡುವಂತಾಯಿತು.
ಎಚ್ಚೆತ್ತುಕೊಳ್ಳದ ಪಾಲಿಕೆ: ಕಳೆದ ನಾಲ್ಕೈದು ದಿನಗಳ ಹಿಂದೆ ಮಂಟೂರು ರಸ್ತೆ ಅರಳಕಟ್ಟಿ ಓಣಿ, ಎಸ್.ಎಂ. ಕೃಷ್ಣ ನಗರದಲ್ಲಿ ಸುಮಾರು 250ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ ಸಾಕಷ್ಟು ಸಮಸ್ಯೆಯಾಗಿತ್ತು. ಸಂಕಷ್ಟ ಅನುಭವಿಸಿದ ಜನರು ಪಾಲಿಕೆ ಅಧಿಕಾರಿಗಳ ವಿರುದ್ಧ ಹಿಡಿ ಶಾಪ ಹಾಕಿದ್ದರು. ನಂತರ ಜನಪ್ರತಿನಿಧಿಗಳು ಸ್ಥಳಗಳಿಗೆ ಭೇಟಿ ನೀಡಿ, ಪಾಲಿಕೆ ಅಧಿಕಾರಿಗಳ ಸಭೆ ಕರೆದು ಚರಂಡಿ, ನಾಲಾ, ಗಟಾರುಗಳ ಸ್ವಚ್ಛತೆಗೊಳಿಸುವಂತೆ ಸೂಚಿಸಿದ್ದರು. ಆದರೆ ಪಾಲಿಕೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಜನ ದೂರುತ್ತಿದ್ದಾರೆ.
ರಸ್ತೆಗಳಲ್ಲಿ ನೀರು: ಬಿಟ್ಟು ಬಿಡದೆ ಮಳೆ ಸುರಿಯುತ್ತಿರುವುದರಿಂದ ರಸ್ತೆಗಳ ಮೇಲೆ ನೀರು ನಿಂತಿದ್ದು, ವಾಹನ ಸವಾರರು ಸಮಸ್ಯೆ ಅನುಭವಿಸುವಂತಾಗಿದೆ. ಇತ್ತೀಚೆಗೆ ನಿರ್ಮಾಣವಾದ ಸಿಆರ್‌ಎಫ್ ರಸ್ತೆಗಳ ಮೇಲಿನ ನೀರು ಸರಾಗವಾಗಿ ಚರಂಡಿ ಹರಿಯುವ ವ್ಯವಸ್ಥೆ ಇಲ್ಲದ ಪರಿಣಾಮ ಸಮಸ್ಯೆಯುಂಟಾಗಿದೆ. ಇನ್ನೂ ಕೆಲವಡೆ ಗಟಾರು ಕಾಮಗಾರಿ ಪೂರ್ಣಗೊಳಿಸದಿರುವುದು ರಸ್ತೆ ಮೇಲೆ ನೀರು ಹರಿಯಲು ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.